ಸಾಮಾನ್ಯ ವರ್ಗದವರೂ ಬಜೆಟ್ ಬೆಲೆಗೆ ಈ ಸ್ಕೂಟರ್‌ಗಳನ್ನು ಖರೀದಿಸಬಹುದು.. ವರ್ಷಗಟ್ಟಲೇ ಬಾಳಿಕೆ!
ಸಾಮಾನ್ಯ ವರ್ಗದ ಜನರು, ಬಜೆಟ್ ಬೆಲೆಯಲ್ಲಿ ಸಿಗುವುದರೊಂದಿಗೆ ದೀರ್ಘಕಾಲ ಬಾಳಿಕೆ ಬರುವ ದ್ವಿಚಕ್ರ ವಾಹನಗಳನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿರುತ್ತಾರೆ. ಆದರೆ, ಯಾವುದು ಉತ್ತಮ ಆಯ್ಕೆಯಾಗಬಲ್ಲದು ಎಂಬ ಗೊಂದಲವಿರುತ್ತದೆ. ಇಲ್ಲಿ ವಿವರಿಸಲಾಗಿರುವ ಟಿವಿಎಸ್ ಕಂಪನಿಯ ಸ್ಕೂಟರ್‌ಗಳು ವೈಶಿಷ್ಟ್ಯ ಹಾಗೂ ಮೈಲೇಜ್ ಸೇರಿದಂತೆ ಎಲ್ಲ ವಿಧದಲ್ಲಿಯೂ ಅತ್ಯುತ್ತಮವಾಗಿವೆ.
ಮೊದಲಿಗೆ ಟಿವಿಎಸ್ ಜೂಪಿಟರ್ 125 (TVS Jupiter 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.89,155 ರಿಂದ ರೂ.99,805 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಡ್ರಮ್, ಡಿಸ್ಕ್, ಸ್ಮಾರ್ಟ್ ಕನೆಕ್ಟ್ ರೂಪಾಂತರ (ವೇರಿಯೆಂಟ್) ಮತ್ತು ಇಂಡಿಬ್ಲೂ, ಡಾನ್ ಆರೆಂಜ್, ಪ್ರಿಸ್ಟಿನ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಟಿವಿಎಸ್ ಜೂಪಿಟರ್ 125 ಮಾದರಿಯು 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.2 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 57.27 ಕೆಎಂಪಿಎಲ್ ವರೆಗೆ ಮೈಲೇಜ್ ನೀಡಲಿದ್ದು, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಿವಿಎಸ್ ಎನ್‌ಟಾರ್ಕ್ 125 (TVS NTORQ 125) ಸ್ಕೂಟರ್ ರೂ.87,271 ದಿಂದ 1.08 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಖರೀದಿಗೆ ಲಭ್ಯವಿದೆ. 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 9.52 ಪಿಎಸ್ ಪವರ್ ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 54.33 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಟಿವಿಎಸ್ ಎನ್‌ಟಾರ್ಕ್ 125, ಕೇವಲ 8.6 ಸೆಕೆಂಡುಗಳಲ್ಲಿ 0 - 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದ್ದು, 98 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ) ಅನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ರೂ.1.37 ಲಕ್ಷದಿಂದ ರೂ.1.46 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಸ್ಕೂಟರ್ ಎರಡು ರೂಪಾಂತರಗಳೊಂದಿಗೆ ಲಭ್ಯವಿದೆ. ಇವುಗಳಲ್ಲಿ ಒಂದೇ ತರಹದ 3.04 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದೆ. ಈ ಐಕ್ಯೂಬ್ ಮಾದರಿಗಳು ಸಂಪೂರ್ಣ ಚಾರ್ಜ್ ನಲ್ಲಿ 100 ಕಿಲೋಮಿಟರ್ ರೇಂಜ್ (ಮೈಲೇಜ್) ಕೊಡಬಲ್ಲವು.

ಈ ಟಿವಿಎಸ್ ಐಕ್ಯೂಬ್ ಸ್ಕೂಟರ್‌ಗಳು ಗಂಟೆಗೆ 75 ಕಿಲೋಮೀಟರ್ ಗರಿಷ್ಠ ವೇಗವನ್ನು ಪಡೆಯಲಿದ್ದು, ಕೇವಲ 4 ಗಂಟೆ 30 ನಿಮಿಷದಲ್ಲಿ ಇವುಗಳ ಬ್ಯಾಟರಿ 0 - 80% ಚಾರ್ಜ್ ಆಗುತ್ತದೆ. ಫುಲ್ ಕಲರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೊಬೈಲ್ ಚಾರ್ಜ್ ಮಾಡಲು ಯುಎಸ್‌ಬಿ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದ್ದು, 32 ಲೀಟರ್ ಸಾಮರ್ಥ್ಯದ ಸ್ಟೋರೇಜ್ ಅನ್ನು ಒಳಗೊಂಡಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








