Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್‌ನಲ್ಲಿ ಸರಿ ಸಾಟಿಯಿಲ್ಲ!

ನಮ್ಮ ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ದಿನನಿತ್ಯದ ಬಳಕೆಗೆ ಮೋಟಾರ್‌ಸೈಕಲ್‌ ಎಂಬುದು ಬೇಕೇ ಬೇಕು. ಹೀರೋ ಸ್ಪ್ಲೆಂಡರ್ (Hero Splendor) ಬೆಲೆ ಹಾಗೂ ಮೈಲೇಜ್ ವಿಚಾರದಲ್ಲಿ ಉತ್ತಮ ಆಯ್ಕೆಯಾಗಿದ್ದು, ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಬಹುಬೇಡಿಕೆಯನ್ನು ಪಡೆದುಕೊಂಡಿರುವ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಮಾದರಿ ಬಗ್ಗೆ ಮಾತನಾಡೋಣ. ಈ ಬೈಕ್ ರೂ.75,191 ದಿಂದ ರೂ.76,396 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Middle Class People Favorite Hero Splendor Bike Price Variants Powertrain Features Details

ಈ ಹೀರೋ ಸ್ಪ್ಲೆಂಡರ್ ಪ್ಲಸ್ 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 4-ಸ್ಪೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, 80.6 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus XTEC) ಬೈಕ್, ಬರೋಬ್ಬರಿ ರೂ.1 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದು 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.02 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್ ಬಾಕ್ಸ್ ಅನ್ನು ಹೊಂದಿದ್ದು, 83.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

Middle Class People Favorite Hero Splendor Bike Price Variants Powertrain Features Details

ಈ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಮಾದರಿ (ಮಾಡೆಲ್) ಕೂಡ ಹಲವು ಅತ್ಯಾಕರ್ಷಕ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿದ್ದು, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಹೆಡ್‌ಲ್ಯಾಂಪ್‌, ಎಲ್ಇಡಿ ಡಿಆರ್‌ಎಲ್, ಅಲಾಯ್ ವೀಲ್ಸ್, ಐಡಲ್ ಸ್ಟಾಪ್/ ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ವಿವಿಧಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 112 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್‌, 9.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor), ರೂ.80,798 ದಿಂದ ರೂ.86,298 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಈ ಬೈಕ್ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜರ್ ಹಾಗೂ 18-ಇಂಚಿನ ಅಲಾಯ್ ವೀಲ್ಸ್ ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದ್ದು, 10-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

Middle Class People Favorite Hero Splendor Bike Price Variants Powertrain Features Details

ಈ ಹೀರೋ ಸೂಪರ್ ಸ್ಪ್ಲೆಂಡರ್, 124.7 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಹೊಂದಿದ್ದು, 10.8 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 55 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC), ರೂ.85,628 ದಿಂದ ರೂ.89,628 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಬಿಎಸ್-6 ಮಾನದಂಡಗಳ ಅನ್ವಯ 124.7 ಸಿಸಿಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಪಡೆದಿದ್ದು, 10.8 ಪಿಎಸ್ ಗರಿಷ್ಠ ಪವರ್ ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್ ಬಾಕ್ಸ್ ಒಳಗೊಂಡಿದ್ದು, 68 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, April 24, 2024, 16:19 [IST]
English summary
Middle class people favorite hero splendor bike price variants powertrain features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+