ಮಧ್ಯಮ ವರ್ಗದ ಜನರು ಇಷ್ಟಪಡುವ ದ್ವಿಚಕ್ರ ವಾಹನಗಳಿವು.. ರೂ.44,999 ಆರಂಭಿಕ ಬೆಲೆ, 80 Km ಮೈಲೇಜ್!

ಭಾರತವು ಅತಿದೊಡ್ಡ ದ್ವಿಚಕ್ರ ವಾಹನ (Two Wheelers) ಮಾರುಕಟ್ಟೆ ಹೊಂದಿದೆ. ಪ್ರತಿ ತಿಂಗಳು ಹಲವು ಬೈಕ್ ಹಾಗೂ ಸ್ಕೂಟರ್‌ಗಳು ಮಾರಾಟಕ್ಕೆ ಬರುತ್ತಿದ್ದು, ಕೆಲವೊಂದು ದ್ವಿಚಕ್ರ ವಾಹನಗಳು ಮಾತ್ರ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತವೆ. ಅದರಲ್ಲೂ ಹೀರೋ ಸ್ಪ್ಲೆಂಡರ್ ಬೈಕ್, ಟಿವಿಎಸ್ ಎಕ್ಸ್ಎಲ್100 ಹಾಗೂ ಹೋಂಡಾ ಡಿಯೋ ಸ್ಕೂಟರ್‌ಗಳು ನಗರ ಹಾಗೂ ಹಳ್ಳಿಗಾಡಿನ ಜನರ ಮನಸ್ಸನ್ನು ಗೆದ್ದಿವೆ. ಬನ್ನಿ.. ಈ ದ್ವಿಚಕ್ರ ವಾಹನಗಳ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ತಿಳಿಯೋಣ.

ಮೊದಲಿಗೆ ಹೀರೋ ಸ್ಪ್ಲೆಂಡರ್ (Hero Splendor) ಕುರಿತಂತೆ ಮಾತನಾಡೋಣ. ಇದು ವಿವಿಧ ರೂಪದಲ್ಲಿ ಖರೀದಿಗೆ ಲಭ್ಯವಿದ್ದು, ಸ್ಪ್ಲೆಂಡರ್ ಪ್ಲಸ್ ಹಾಗೂ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ರೂಪಾಂತರಗಳು (ವೇರಿಯೆಂಟ್) ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸ್ಪ್ಲೆಂಡರ್ ಪ್ಲಸ್ ರೂ.76,356 ರಿಂದ ರೂ.77,496 (ಎಕ್ಸ್ ಶೋರೂಂ - ಬೆಂಗಳೂರು) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 80.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Middle Class People Like This Two Wheelers Hero Splendor Tvs Xl100 Honda Dio

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬಗ್ಗೆ ಹೇಳುವುದಾದರೆ, ಈ ಬೈಕ್ ರೂ.97,089 ರಿಂದ ರೂ.1 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 83.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಟಿವಿಎಸ್ ಎಕ್ಸ್ಎಲ್100 (TVS XL100) ಜನಪ್ರಿಯ ಮೊಪೆಡ್ ಆಗಿದ್ದು, ರೂ.44,999 ರಿಂದ ರೂ.59,014 ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. 99.7 ಸಿಸಿ, ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 6000 ಆರ್‌ಪಿಎಂನಲ್ಲಿ 4.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3500 ಆರ್‌ಪಿಎಂನಲ್ಲಿ 6.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Middle Class People Like This Two Wheelers Hero Splendor Tvs Xl100 Honda Dio

ಈ ಟಿವಿಎಸ್ ಎಕ್ಸ್ಎಲ್ ಮೊಪೆಡ್ 80 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಗ್ರೇ-ಬ್ಲ್ಯಾಕ್ ಮತ್ತು ರೆಡ್-ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಲಭ್ಯವಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಡಿಯೋ (Honda Dio) ಸ್ಕೂಟರ್ ಹೇಳುವುದಾದರೆ, ಇದು 110 ಸಿಸಿ ಮತ್ತು 125 ಸಿಸಿ ರೂಪದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಡಿಯೋ 110 ರೂ.75,630 ರಿಂದ ರೂ.82,580 ಎಕ್ಸ್ ಶೋರೂಂ ದರವನ್ನು ಪಡೆದಿದೆ. 109.51 ಸಿಸಿ ಎಂಜಿನ್ ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Middle Class People Like This Two Wheelers Hero Splendor Tvs Xl100 Honda Dio

ನೂತನ ಹೋಂಡಾ ಡಿಯೋ 125 ಸ್ಕೂಟರ್, ರೂ.85,049 ರಿಂದ ರೂ.92,950 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 123.92 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 6250 ಆರ್‌ಪಿಎಂನಲ್ಲಿ 8.28 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5000 ಆರ್‌ಪಿಎಂನಲ್ಲಿ 10.4 ಪೀಕ್ ಟಾರ್ಕ್ ಹೊರಹಾಕುತ್ತದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ಕೊಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 15, 2024, 23:13 [IST]
English summary
Middle class people like this two wheelers hero splendor tvs xl100 honda dio
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+