TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಎಲೆಕ್ಟ್ರಿಕ್ ಸ್ಕೂಟರ್ ಟಿವಿಎಸ್ ಐಕ್ಯೂಬ್.. ಬೆಲೆ, ವಿಶೇಷತೆಗಳೇನು?
ಟಿವಿಎಸ್ ಐಕ್ಯೂಬ್ (TVS iQube) ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಲಕ್ಷಾಂತರ ಭಾರತೀಯರ ಹಾಟ್ ಫೆವರೇಟ್ ಆಗಿದೆ. ಪ್ರತಿ ತಿಂಗಳು ಈ ಸ್ಕೂಟರ್ ಮಾರಾಟ ಏರುಗತಿಯಲ್ಲಿಯೇ ಸಾಗುತ್ತಿದೆ. ನೀವು ಈ ಐಕ್ಯೂಬ್ ಸ್ಕೂಟರ್ ಖರೀದಿಸಲು ಯೋಜಿಸಿದ್ದರೆ, ಬೆಲೆ, ವೈಶಿಷ್ಟ್ಯಗಳನ್ನು ಒಳಗೊಂಡಂತೆ ಇನ್ನಿತರೇ ವಿವರಗಳು ಇಲ್ಲಿದೆ.
ಭಾರತದ ಮಾರುಕಟ್ಟೆಯಲ್ಲಿ ಟಿವಿಎಸ್ ಐಕ್ಯೂಬ್ (TVS iQube), 2 ಆಕರ್ಷಕ ರೂಪಾಂತರ (Variants)ಗಳ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಸಾಮಾನ್ಯ ಐಕ್ಯೂಬ್ (iQube) ರೂಪಾಂತರ ರೂ.1,47,968 ಹಾಗೂ ಐಕ್ಯೂಬ್ ಎಸ್ (iQube S) ರೂಪಾಂತರ ರೂ.1,53,909 ಆನ್ - ರೋಡ್ (ಬೆಂಗಳೂರು) ಬೆಲೆಯನ್ನು ಹೊಂದಿದೆ ಎಂಬ ವಿವರ ಲಭ್ಯವಾಗಿದೆ.

ಇವೆರಡು ಟಿವಿಎಸ್ ಐಕ್ಯೂಬ್ ರೂಪಾಂತರಗಳು, 3.04 kWh ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿವೆ. 140 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ 4.4 kW ಹಬ್ - ಮೌಂಟೆಡ್ BLDC ಮೋಟಾರ್ ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 100 km ರೇಂಜ್ ನೀಡಲಿವೆ. ಅದರಲ್ಲೂ ನಗರ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿವೆ.
ಟಿವಿಎಸ್ ಐಕ್ಯೂಬ್ ಹಾಗೂ ಐಕ್ಯೂಬ್ ಎಸ್ ರೂಪಾಂತರಗಳು, 75 km/h ಟಾಪ್ ಸ್ವೀಡ್ ಪಡೆದಿದ್ದು, ಕೇವಲ 4 ಗಂಟೆ 30 ನಿಮಿಷದಲ್ಲಿ ಇವುಗಳ ಬ್ಯಾಟರಿ 0 - 80% ಚಾರ್ಜ್ ಆಗುತ್ತದೆ. ಪ್ರಮುಖವಾಗಿ ಫುಲ್ ಕಲರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಚಾಲಕರೂ ರೇಂಜ್ (ಮೈಲೇಜ್) ಒಳಗೊಂಡಂತೆ ಹತ್ತಾರು ಮಾಹಿತಿ ಪಡೆಯಲು ಬ್ಲೂಟೂತ್ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಡಿಸ್‌ಪ್ಲೇಯನ್ನು ಕನೆಕ್ಟ್ ಮಾಡಬಹುದು.

ಮೊಬೈಲ್ ಚಾರ್ಜ್ ಮಾಡಲು ಯುಎಸ್‌ಬಿ ಸಾಕೆಟ್, 32 ಲೀಟರ್ ಸಾಮರ್ಥ್ಯದ ಸ್ಟೋರೇಜ್, ಇಕೋ, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್ ಆಯ್ಕೆಯನ್ನು ಈ ಸ್ಕೂಟರ್ ಒಳಗೊಂಡಿದೆ. ಸ್ಪೋರ್ಟ್ ಮೋಡ್ ನಲ್ಲಿ ಕೇವಲ 4.2 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಪಡೆಯಲಿದೆ. ಸದ್ಯ, ಗರಿಷ್ಠ ರೇಂಜ್ (145 ಕಿ.ಮೀ) ರೇಂಜ್ ನೀಡುವ ಟಿವಿಎಸ್ ಐಕ್ಯೂಬ್ ಎಸ್‌ಟಿ ರೂಪಾಂತರದ ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಟಿವಿಎಸ್ ಐಕ್ಯೂಬ್ ಹಾಗೂ ಐಕ್ಯೂಬ್ ಎಸ್ ರೂಪಾಂತರಗಳು, ಸುರಕ್ಷತೆಯ ದೃಷ್ಟಿಯಿಂದಲೂ ಉತ್ತಮವಾಗಿದ್ದು, ಫ್ರಂಟ್ ಡಿಸ್ಕ್, ರೇರ್ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿವೆ. ಸಸ್ಪೆನ್ಷನ್ ಸೆಟಪ್ ವಿಚಾರದ ಕುರಿತು ಹೇಳುವುದಾದರೆ, ಫ್ರಂಟ್ ಟೆಲಿಸ್ಕೋಪಿಕ್ ಫೋರ್ಕ್, ರೇರ್ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅನ್ನು ಒಳಗೊಂಡಿದೆ. ಇವುಗಳಿಗೆ ಬಜಾಜ್ ಚೇತಕ್ ಪ್ರಬಲ ಎದುರಾಳಿಯಾಗಿದೆ.
ಟಿವಿಎಸ್ ಕಂಪನಿಯ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ 'ಎಕ್ಸ್' ಹೋದ ವರ್ಷದ ಆಗಸ್ಟ್ ತಿಂಗಳಲ್ಲಿ ರೂ.2.50 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಬಿಡುಗಡೆಯಾಗಿತ್ತು. ಈ ಎಲೆಕ್ಟ್ರಿಕ್ ಸ್ಕೂಟರ್, 4.44 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್ ನಲ್ಲಿ 140 ಕಿ.ಮೀ ರೇಂಜ್ ನೀಡುತ್ತದೆ. 105 kmph ಟಾಪ್ ಸ್ವೀಡ್ ಪಡೆದಿದ್ದು, ಕೇವಲ 2.6 ಸೆಕೆಂಡುಗಳಲ್ಲಿ 0-40 kmph ವೇಗವನ್ನು ಹೊಂದಲಿದೆ.
ಟಿವಿಎಸ್ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ 10.2 - ಇಂಚಿನ ಟಿಎಫ್‌ಟಿ ಸ್ಕ್ರೀನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಒಟಿಎ ಅಪ್ಡೇಟ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ಫ್ರಂಟ್ 220ಎಂಎಂ, ರೇರ್ 195ಎಂಎಂ ಡಿಸ್ಕ್ ಬ್ರೇಕ್ ಆಯ್ಕೆ ಹಾಗೂ ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications