Honda: ನೀವು ಹೋಂಡಾ ದ್ವಿಚಕ್ರ ವಾಹನಗಳನ್ನು ಮನೆಗೆ ತರಬಹುದು.. ಕಡಿಮೆ ಬೆಲೆ, ಸಖತ್ ಮೈಲೇಜ್!
ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಹೋಂಡಾ (Honda) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಅತ್ಯಾಕರ್ಷಕವಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ದಿನನಿತ್ಯದ ಬಳಕೆಗಾಗಿ ನೂತನ ದ್ವಿಚಕ್ರ ವಾಹನವೊಂದನ್ನು ಖರೀದಿಸಲು ಆಲೋಚಿಸಿದ್ದರೆ, ಹೋಂಡಾದ ಬೈಕ್ ಅಥವಾ ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಕೈಗೆಟುಕುವ ಬೆಲೆ ಮತ್ತು ಗರಿಷ್ಠ ಮೈಲೇಜ್ ನೀಡುವ ಕಂಪನಿಯ ಜನಪ್ರಿಯ ಮಾದರಿ (ಮಾಡೆಲ್)ಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಕೊಂಡುಕೊಳ್ಳುವ ಗೇಮ್ ಚೇಂಜರ್ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.82,634 ದಿಂದ ರೂ.91,807 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 124 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.3 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 10.4 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ನೂತನ ಆಕ್ಟಿವಾ 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಇಡಿ ಹೆಡ್‌ಲೈಟ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ. 109 ಕೆಜಿ ತೂಕವಿರುವ ಈ ಸ್ಕೂಟರ್, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.
ಹೋಂಡಾ ಡಿಯೋ (Honda Dio) ಸ್ಕೂಟರ್ ಕೂಡ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.74,629 ದಿಂದ ರೂ.82,130 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 109.51 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೋಂಡಾ ಶೈನ್ 100 (Honda Shine 100) ಮಧ್ಯಮ ವರ್ಗದ ಜನರ ನೆಚ್ಚಿನ ಬೈಕ್ ಆಗಿದ್ದು, ರೂ.66,600 ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಹೋಂಡಾ ಎಸ್‌ಪಿ 125 (Honda SP 125) ದಿನಬಳಕೆಗೆ ಅತ್ಯುತ್ತಮವಾಗಿರುವ ಮೋಟಾರ್‌ಸೈಕಲ್ ಎಂದೇ ಹೇಳಬಹುದು. ಇದು ರೂ.87,410 ದಿಂದ ರೂ.91,960 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಯುನಿಕಾರ್ನ್ (Honda Unicorn) ಪ್ರೀಮಿಯಂ ಬೈಕ್ ಆಗಿದ್ದು, ರೂ.1.10 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 162.71 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications