ಹೊಸ ಬಣ್ಣದೊಂದಿಗೆ ಬಂದ ಹೀರೋ ಗ್ಲಾಮರ್.. ಪ್ರಮುಖಾಂಶಗಳು, ಮಧ್ಯಮ ವರ್ಗದ ಜನರು ಖರೀದಿಸಬಹುದು!
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೀರೋ ಮೋಟೋಕಾರ್ಪ್ (Hero MotoCorp) ಮನೆ ಮಾತಾಗಿದೆ. ಗುರುವಾರ ಕಂಪನಿಯು ಹೊಸ ಬಣ್ಣದ ಆಯ್ಕೆಯೊಂದಿಗೆ 2024ರ ಗ್ಲಾಮರ್ (Glamour) ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಮಧ್ಯಮ ವರ್ಗದ ಯುವಕರಿಗೆ ಹೇಳಿ ಮಾಡಿಸಿದ ರೀತಿಯಲಿದ್ದು, ದಿನನಿತ್ಯದ ಬಳಕೆಗೆ ಹೆಚ್ಚು ಸೂಕ್ತವಾಗಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಇಲ್ಲಿ ನೂತನ ಮೋಟಾರ್‌ಸೈಕಲ್‌ನ 5 ಪ್ರಮುಖಾಂಶಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಬೆಲೆ: ನೂತನ ಹೀರೋ ಗ್ಲಾಮರ್ (Hero Glamour) ಬೈಕ್ 'ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್' ಎಂಬ ಆಕರ್ಷಕ ಬಣ್ಣದ ಆಯ್ಕೆಯಲ್ಲಿ ಮಾರುಕಟ್ಟೆಗೆ ಬಂದಿದೆ. ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗಲಿದ್ದು, ಈ ಹೊಸದಾದ ಬಣ್ಣವನ್ನು ಹೊಂದಿರುವ ಡ್ರಮ್ ಬ್ರೇಕ್ ರೂಪಾಂತರ (ವೇರಿಯೆಂಟ್) ರೂ.83,598 ಮತ್ತು ಡಿಸ್ಕ್ ಬ್ರೇಕ್ ರೂಪಾಂತರ ರೂ.87,598 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

ಕಾರ್ಯಕ್ಷಮತೆ: ಹೊಚ್ಚ ಹೊಸ ಹೀರೋ ಗ್ಲಾಮರ್ ಮೋಟಾರ್‌ಸೈಕಲ್, 124.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 10.72 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಲಿದೆ ಎಂದು ಹೇಳಲಾಗಿದೆ.
ವೈಶಿಷ್ಟ್ಯಗಳು & ಇತರೆ ಬಣ್ಣಗಳು: ಈ ಬೈಕ್ ಎಲ್ಇಡಿ ಹೆಡ್‌ಲೈಟ್, ಡಿಜಿಟಲ್ ಇನ್‌ಸ್ಟ್ರುಮೆಂಟೇಶನ್ ಸ್ಕ್ರೀನ್, ಸ್ಮಾರ್ಟ್‌ಫೋನ್ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಹಝರ್ಡ್ ಲೈಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ನವೀನವಾದ ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್ ಬಣ್ಣದೊಂದಿಗೆ ಕ್ಯಾಂಡಿ ಬ್ಲೇಜಿಂಗ್ ರೆಡ್, ಟೆಕ್ನೋ ಬ್ಲೂ-ಬ್ಲಾಕ್ ಮತ್ತು ಸ್ಪೋರ್ಟ್ಸ್ ರೆಡ್-ಬ್ಲಾಕ್ ಬಣ್ಣದ ಆಯ್ಕೆಯಲ್ಲಿಯೂ ಖರೀದಿಗೆ ಸಿಗುತ್ತದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್: ಹೊಚ್ಚ ಹೊಸ ಹೀರೋ ಗ್ಲಾಮರ್ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಡ್ರಮ್ ಬ್ರೇಕ್ ರೂಪಾಂತರ 122 ಕೆಜಿ ಮತ್ತು ಡಿಸ್ಕ್ ಬ್ರೇಕ್ ರೂಪಾಂತರ 123 ಕೆಜಿ ತೂಕವಿದೆ.
ವೀಲ್ ಮತ್ತು ಟೈಯರ್‌ಗಳು: ಈ ಬೈಕ್ ಸವಾರರಿಗೆ ರಸ್ತೆಯ ಮೇಲೆ ಬಲವಾದ ಹಿಡಿತ ಸಾಧಿಸಲು 18-ಇಂಚಿನ ವೀಲ್‌ಗಳು, ಮುಂದೆ (ಫ್ರಂಟ್) 80/100-18 ಮತ್ತು ಹಿಂದೆ (ರೇರ್) 100/80-18 ಅಳತೆಯ ಟೈಯರ್‌ಗಳನ್ನು ಒಳಗೊಂಡಿದೆ. ವೀಲ್‌ಬೇಸ್ 1273 ಎಂಎಂ ಇದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.
ಪ್ರತಿಸ್ಪರ್ಧಿ ಮೋಟಾರ್‌ಸೈಕಲ್: ಈ ಹೀರೋ ಗ್ಲಾಮರ್ ಬೈಕ್‌ಗೆ ಟಿವಿಎಸ್ ರೈಡರ್ 125 ನೇರ ಎದುರಾಳಿಯಾಗಿದೆ. ರೂ.98,709 ದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 67 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








