Honda Activa: ಹೊಸ ಫೀಚರ್‌ಗಳೊಂದಿಗೆ 2025ರ ಹೋಂಡಾ ಆಕ್ಟಿವಾ 125 ಸ್ಕೂಟರ್ ಬಿಡುಗಡೆ.. ಬೆಲೆ ಎಷ್ಟು?
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India), ವಿಶ್ವಾಸಾರ್ಹ ದ್ವಿಚಕ್ರ ವಾಹನ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ 'ಆಕ್ಟಿವಾ' ನಂಬರ್ 1 ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಹೋಂಡಾ ಒಂದಷ್ಟು ನವೀಕರಣದೊಂದಿಗೆ 2025ರ ಆಕ್ಟಿವಾ 125 ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ಬನ್ನಿ.. ನೂತನ ಸ್ಕೂಟರ್ ಬೆಲೆ ಎಷ್ಟು, ಕಾರ್ಯಕ್ಷಮತೆ ಏನು ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants): 2025ರ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.94,442 ರಿಂದ ರೂ.97,146 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಡಿಎಲ್ಎಕ್ಸ್ ಮತ್ತು ಹೆಚ್-ಸ್ಮಾರ್ಟ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

ವಿನ್ಯಾಸ (Design): ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಬಹುತೇಕ ಹಿಂದಿನ ಮಾಡೆಲ್‌ನಂತೆ ಇದೆ. ಆದರೂ ಹೆಡ್‌ಲೈಟ್ ಸುತ್ತಲೂ ವಿನೂತನವಾದ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಈ ಸ್ಕೂಟರ್ ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ & ಪರ್ಲ್ ಪ್ರೆಶಿಯಸ್ ವೈಟ್ ಎಂಬ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗಲಿದೆ.
ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್ 1850 ಎಂ ಉದ್ದ, 707 ಎಂಎಂ ಅಗಲ ಮತ್ತು 1170 ಎಂಎಂ ಎತ್ತರವಿದೆ. 1260 ಎಂಎಂ ವೀಲ್‌ಬೇಸ್ ಮತ್ತು 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಸೀಟ್ 712 ಎಂಎಂ ಉದ್ದವಿದೆ. ಇದು 109 ರಿಂದ 110 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance): ಈ ಹೋಂಡಾ ಆಕ್ಟಿವಾ 125 ಸ್ಕೂಟರ್ ಒಬಿಡಿ2ಬಿ 123.92 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 8.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.
ವೈಶಿಷ್ಟ್ಯಗಳು (Features): ನೂತನ ಸ್ಕೂಟರ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 4.2-ಇಂಚಿನ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಕಾಲ್, ಎಸ್ಎಂಎಸ್ ಅಲರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಸೈಡೆಡ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂದೆ ಡಿಸ್ಕ್ ಮತ್ತು ಹಿಂದೆ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications