ಇದೇ ಶುಕ್ರವಾರ ಬಿಡುಗಡೆ.. ಅದಕ್ಕೂ ಮೊದಲೇ ಕಾಣಿಸಿಕೊಂಡ ಹೊಸ ಬಜಾಜ್ ಚೇತಕ್ ಇ-ಸ್ಕೂಟರ್, ಬೆಲೆ ಎಷ್ಟಿರಲಿದೆ?

ಪುಣೆ ಮೂಲದ ಬಜಾಜ್ ಆಟೋ (Bajaj Auto) ವಿಶ್ವಾಸಾರ್ಹ ದ್ವಿಚಕ್ರ ವಾಹನ (two wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಚೇತಕ್' ಗೇಮ್ ಚೇಂಜರ್ ಎಲೆಕ್ಟ್ರಿಕ್ ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ನವೆಂಬರ್‌ನಲ್ಲಿ 26,163 ಯುನಿಟ್ ಚೇತಕ್ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 11,843 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ 121% ಬೆಳವಣಿಗೆಯಾಗಿದೆ.

ಬಜಾಜ್ ಕಂಪನಿಯು ಡಿಸೆಂಬರ್ 20 ರಂದು ಅತಿ ಕಡಿಮೆ ಬೆಲೆಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನ ಹೊಸ ಮಾಡೆಲ್‌ನ್ನು ಬಿಡುಗಡೆಗೊಳಿಸಲು ದಿನಾಂಕವನ್ನು ನಿಗದಿಪಡಿಸಿದೆ. ಸದ್ಯ, ಈ ನೂತನ ಸ್ಕೂಟರ್ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದ್ದು, ಅದಕ್ಕೆ ಸಂಬಂಧಿಸಿದ ಹಲವು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿವೆ.

New Bajaj Chetak E-Scooter Spotted Test Before Launch Expected Price Features Details

ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹೊಸ ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್, ಸ್ಟೈಲಿಂಗ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅದು ಹಿಂದಿನ ರೆಟ್ರೋ ಲುಕ್‌ನ್ನೇ ಹೊಂದಿದೆ. ಹಳೆಯ ಮಾಡೆಲ್‌ನಂತೆ ರೌಂಡ್ ಎಲ್ಇಡಿ ಹೆಡ್‌ಲೈಟ್ ಮತ್ತು ಕರ್ವಿ ಬಾಡಿ ಪ್ಯಾನೆಲ್‌ಗಳನ್ನು ಪಡೆದಿದೆ.

ಮುಂಬರಲಿರುವ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್, ಗ್ರಾಹಕರಿಗೆ ವೆಚ್ಚವನ್ನು ಕಡಿತಗೊಳಿಸಲು ಗ್ಲೋವ್ ಬಾಕ್ಸ್ ಅನ್ನು ಹೊಂದಿಲ್ಲ. ಜೊತೆಗೆ ಕೀ - ಲೆಸ್ ಸಿಸ್ಟಮ್ ಬದಲಿಗೆ ಇಗ್ನಿಷನ್ ಕೀ ಸ್ಲಾಟ್ ಒಳಗೊಂಡಿದೆ. ಇದರೊಟ್ಟಿಗೆ ಎಲ್‌ಸಿಡಿ ಸ್ಕ್ರೀನ್ ಮತ್ತು ಸ್ಟೀಲ್ ವೀಲ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ.

New Bajaj Chetak E-Scooter Spotted Test Before Launch Expected Price Features Details

ನೂತನ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಶಕ್ತಿಯುತವಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದೆ. 100 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿರಲಿದೆ ಎನ್ನಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್, ರೂ.96,000 ದಿಂದ ರೂ.1.29 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ದೇಶೀಯ ಗ್ರಾಹಕರಿಗೆ ಬಜಾಜ್ ಚೇತಕ್ ಇ-ಸ್ಕೂಟರ್‌ನ ವಿವಿಧ ಮಾಡೆಲ್‌ಗಳು ಖರೀದಿಗೆ ಲಭ್ಯವಿವೆ. ಇದರ 'ಚೇತಕ್ ಬ್ಲೂ 2903' ಮಾಡೆಲ್ ರೂ.95,000 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.88 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 123 ಕಿಲೋಮೀಟರ್‌ವರೆಗೂ ಓಡುತ್ತದೆ. 'ಚೇತಕ್ 3201' ಮಾಡೆಲ್ ರೂ.1.56 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 3.2 ಕೆಡಬ್ಲ್ಯೂಹೆಚ್ ಬ್ಯಾಟರಿ ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 136 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ.

New Bajaj Chetak E-Scooter Spotted Test Before Launch Expected Price Features Details

ಕಡೆಯದಾಗಿ ಬಜಾಜ್ ಚೇತಕ್ 3202 ಕುರಿತಂತೆ ಹೇಳುವುದಾದರೆ, ಈ ಮಾಡೆಲ್ ರೂ.1.15 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 3.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 137 ಕಿಲೋಮೀಟರ್‌ವರೆಗೂ ಓಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬ್ರೂಕ್ಲಿನ್ ಬ್ಲ್ಯಾಕ್ & ಸೈಬರ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇನ್ನು, ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ 'ಬಜಾಜ್ ಚೇತಕ್' ಎಲೆಕ್ಟ್ರಿಕ್ ಸ್ಕೂಟರ್‌ ಮೇಲೆ ಗ್ರಾಹಕರು ಕೂಡ ದೊಡ್ಡಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದ್ದು, ಮಾರಾಟಕ್ಕೆ ಬಂದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Rushlane

More from DriveSpark

Article Published On: Monday, December 16, 2024, 16:46 [IST]
English summary
New bajaj chetak e scooter spotted test before launch expected price features details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+