Bajaj: ಸದ್ಯ ಮಾರಾಟದಲ್ಲಿ ಸುನಾಮಿ.. ಹೊಸ ಚೇತಕ್ ಇ-ಸ್ಕೂಟರ್ ಬಿಡುಗಡೆಗೆ ಡೇಟ್ ಫಿಕ್ಸ್, ಓಲಾ, ಟಿವಿಎಸ್‌ಗೆ ಪೈಪೋಟಿ!
ಬಜಾಜ್ ಆಟೋ (Bajaj Auto) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಚೇತಕ್' ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕಳೆದ ತಿಂಗಳು (ನವೆಂಬರ್ - 2024) 26,163 ಯುನಿಟ್ ಚೇತಕ್ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 11,843 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 121% ಪ್ರಗತಿ ಸಾಧಿಸಲಾಗಿದೆ. ಇದರೊಂದಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಂಪನಿಯು ಶೇಕಡ 20% ಮಾರುಕಟ್ಟೆ ಪಾಲನ್ನು ಹೊಂದಿದೆ.
ಈ ವರ್ಷ (2024) ಬಜಾಜ್ ಕಂಪನಿಗೆ ಮಹತ್ತವಾದ ವರ್ಷವಾಗಿದ್ದು, ಜನವರಿಯಿಂದ ನವೆಂಬರ್‌ವರೆಗೆ ಅವಧಿಯಲ್ಲಿ 174,909 ಯುನಿಟ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2023ರ ಜನವರಿಯಿಂದ ನವೆಂಬರ್‌ವರೆಗೆ ಮಾರಾಟ ಮಾಡಿದ 61,518 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡ 184% ಬೆಳವಣಿಗೆಯಾಗಿದೆ.

ಸದ್ಯ, ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನ ಹೊಚ್ಚ ಹೊಸ ಮಾಡೆಲ್‌ನ್ನು ಮಾರಾಟಕ್ಕೆ ತರಲು ಸಿದ್ಧತೆ ನಡೆಸುತ್ತಿದೆ. ನೂತನ ಇ-ಸ್ಕೂಟರ್‌ನ್ನು ಬಿಡುಗಡೆಗೊಳಿಸಲು ಡಿಸೆಂಬರ್ 20ಕ್ಕೆ ದಿನಾಂಕವನ್ನು ನಿಗದಿಪಡಿಸಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಕುರಿತಂತೆ ಕಂಪನಿಯು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೂ ಹೊಸ ಇ-ಸ್ಕೂಟರ್ ಕಡಿಮೆ ತೂಕವನ್ನು ಹೊಂದಿರಲಿದ್ದು, ಹೆಚ್ಚು ದೂರ ಓಡಲಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್‌ನ ವಿವಿಧ ಮಾಡೆಲ್‌ಗಳು ಖರೀದಿ ಲಭ್ಯವಿದೆ. ಇದರ 'ಬ್ಲೂ 2903' ಮಾಡೆಲ್ ರೂ.95,000 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.88 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 123 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ.

ಬಜಾಜ್ ಚೇತಕ್ 3201 (Bajaj Chetak 3201) ಇ-ಸ್ಕೂಟರ್ ಕುರಿತಂತೆ ಹೇಳುವುದಾದರೆ, ಇದು ರೂ.1.56 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 3.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 136 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ.
ಈ ಚೇತಕ್ 3201 ಎಲೆಕ್ಟ್ರಿಕ್ ಸ್ಕೂಟರ್ 73 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಇದರಲ್ಲಿ ಬ್ಯಾಟರಿ ಪ್ಯಾಕ್ 0 ರಿಂದ 80% ಚಾರ್ಜ್ ಆಗಲು 3 ಗಂಟೆ 35 ನಿಮಿಷ ತೆಗೆದುಕೊಳ್ಳುತ್ತದೆ. ಬ್ರೂಕ್ಲಿನ್ ಬ್ಲ್ಯಾಕ್, ಹ್ಯಾಝೆಲ್ ನಟ್ ಮತ್ತು ಇಂಡಿಗೋ ಮೆಟಾಲಿಕ್ ಬಣ್ಣಗಳೊಂದಿಗೂ ಸಿಗುತ್ತದೆ. ಜೊತೆಗೆ ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬಜಾಜ್ ಚೇತಕ್ 3202 (Bajaj Chetak 3202) ಬಗ್ಗೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 3.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 137 ಕಿಲೋಮೀಟರ್‌ವರೆಗೂ ಓಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








