ಕೈಗೆಟುಕುವ ಬೆಲೆಯ ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ ಬೈಕ್ ವಿಶೇಷತೆಗಳೇನು?

ದೇಶದ ಅತಿದೊಡ ದ್ವಿಚಕ್ರ ತಯಾರಕ ಕಂಪನಿಯಾದ ಹೀರೋ ಮೋಟೋಕಾರ್ಪ್ (Hero Motocorp) ತನ್ನ ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ (Xtreme 125R) ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ ಬೈಕ್ ಹೆಚ್ಚು ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಯಾಗಿರುವುದರಿಂದ ಹೆಚ್ಚಿನ ಗ್ರಾಹರನ್ನು ಸೆಳೆಯಬಹುದು.

ರೂಪಾಂತರಗಳು ಮತ್ತು ಬೆಲೆ: ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ (Hero Xtreme 125R) ಬೈಕ್, ಸ್ಪೋರ್ಟಿ (Sporty) ವಿನ್ಯಾಸದೊಂದಿಗೆ ಭರ್ಜರಿ ವೈಶಿಷ್ಟ್ಯಗಳನ್ನು ಪಡೆದಿದ್ದು, 2 ರೂಪಾಂತರ (ವೇರಿಯೆಂಟ್ಸ್) ಆಯ್ಕೆಯಲ್ಲಿ ಬಿಡುಗಡೆಗೊಂಡಿದೆ. ಅವುಗಳೆಂದರೆ, IBS (ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಮ್) ಹಾಗೂ ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್). ಕ್ರಮವಾಗಿ ರೂ.95,000 ದಿಂದ ರೂ.99,500 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿವೆ.

Hero Xtreme 125R

ಎಂಜಿನ್: ಈ ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ ಬೈಕಿನಲ್ಲಿ 125 ಸಿಸಿ, ಸಿಂಗಲ್ ಸಿಲಿಂಡರ್ ಏರ್ - ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 11.5 bhp ಗರಿಷ್ಠ ಪವರ್, 10.5 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಈ ಎಂಜಿನ್ ಜೊತೆಗೆ 5 - ಸ್ವೀಡ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ.

ವಿನ್ಯಾಸ: ನೂತನ ಹೀರೋ ಎಕ್ಸ್‌ಟ್ರಿಮ್ 125ಆರ್ ಮೋಟಾರ್‌ಸೈಕಲ್‌ ಬುಕಿಂಗ್‌ ಶೀಘ್ರದಲ್ಲೇ ಪ್ರಾರಂಭವಾಗುವ ನೀರಿಕ್ಷೆಯಿದೆ. ಈ ಬೈಕ್ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಹೊಂದಿದ್ದು, ನೋಡುಗರನ್ನು ಆಕರ್ಷಿಸುತ್ತದೆ. ಮುಂಭಾಗ ಎಕ್ಸ್‌ಟ್ರಿಮ್ 200ಎಸ್ (Xtreme 200S) ಮೋಟಾರ್‌ಸೈಕಲ್‌ಗೆ ಹೋಲಿಕೆಯಾಗುವ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್ ಪಡೆದಿದೆ. ಫ್ಯುಯೆಲ್ (ಇಂಧನ) ಟ್ಯಾಂಕ್ ಮತ್ತು ಹಿಂಭಾಗದ ವಿನ್ಯಾಸವು ಆಕರ್ಷಕವಾಗಿದೆ.

Hero Xtreme 125R

ಸಸ್ಪೆನ್ಷನ್ ಸೆಟಪ್: ಈ ಹೊಸ ಹೀರೋ ಎಕ್ಸ್‌ಟ್ರಿಮ್ 125ಆರ್ ಮೋಟಾರ್‌ಸೈಕಲ್‌ ಸಸ್ಪೆನ್ಷನ್ ಸೆಟಪ್ ಬಗ್ಗೆ ಮಾತನಾಡುವುದಾದರೆ, ಈ ಹೊಸ ಬೈಕಿನಲ್ಲಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ ಮತ್ತು ರೇರ್ (ಹಿಂಭಾಗ) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಇದು ಉತ್ತಮ ಸಸ್ಪೆನ್ಷನ್ ಸೆಟಪ್ ಆಗಿದೆ.

ಬ್ರೇಕಿಂಗ್ ಸಿಸ್ಟಮ್: ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ರೂಪಾಂತರಗಳಿಗೆ ಅನುಗುಣವಾಗಿ ಮುಂಭಾಗ ಡಿಸ್ಕ್ ಮತ್ತು ಹಿಂಭಾಗ ಡ್ರಮ್/ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ. ಇನ್ನು ಈ ನೂತನ ಬೈಕ್, ಕಪ್ಪು (Black) ಸೇರಿದಂತೆ 3 ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

Hero Xtreme 125R

ಈ ಬೈಕ್, ಆಕರ್ಷಕ ಡಿಜಿಟಲ್ ಕನ್ಸೋಲ್, ಆರಾಮದಾಯಕವಾಗಿ ಪ್ರಯಾಣಿಸಲು ಸ್ಪ್ಲಿಟ್ - ಸೀಟ್ ಸೆಟಪ್ (Split - Seat Setup) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀರೋ ಎಕ್ಸ್‌ಟ್ರಿಮ್ 125ಆರ್ ಮೋಟಾರ್‌ಸೈಕಲ್‌ಗೆ ಟಿವಿಎಸ್ ರೈಡರ್ 125 (TVS Raider 125) ದೊಡ್ಡ ಪ್ರತಿಸ್ಪರ್ಧಿಯಾಗಿದ್ದು, ಇದರ ಸಿಂಗಲ್ ಡಿಸ್ಕ್ ವೇರಿಯೆಂಟ್ ರೂ.95,000 ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.

ಇನ್ನು, ಭಾರತದಲ್ಲಿ ನಂಬರ್ 1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿರುವ ಹೀರೋ, ಆಕರ್ಷಕ 'ಎಕ್ಸ್‌ಟ್ರಿಮ್ 125ಆರ್' ಬೈಕ್ ಬಿಡುಗಡೆಗೊಳಿಸುವ ಮೂಲಕ ವರ್ಷಾರಂಭವನ್ನು ಮಾಡಿದೆ. ಈ ಬೈಕ್ ಅತ್ಯಾಧುನಿಕ ವೈಶಿಷ್ಟ್ಯ ಹಾಗೂ ವಿನ್ಯಾಸವನ್ನು ಹೊಂದಿರುವುದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸಬಹುದು. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಶುರುವಾಗುವ ಸಾಧ್ಯತೆ ಕೂಡ ಇದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 25, 2024, 12:03 [IST]
English summary
New hero xtreme 125r top 5 things details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+