ಮೊದಲೇ ಆಕ್ಟಿವಾ ನಂಬರ್ 1.. ಹೋಂಡಾದಿಂದ ಹೊಸ ಸ್ಕೂಟರ್‌ಗಾಗಿ ಪೇಟೆಂಟ್, ಕಡಿಮೆ ಬೆಲೆ.. 60 Km ಮೈಲೇಜ್?

ಹೋಂಡಾ ಮೋಟಾರ್‌ಸೈಕಲ್‌ & ಸ್ಕೂಟರ್ ಇಂಡಿಯಾ (Honda Motorcycle & Scooter India - HMSI), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಅದರಲ್ಲೂ ಆಕ್ಟಿವಾ ಹಾಗೂ ಡಿಯೋ ಸ್ಕೂಟರ್‌ಗಳಿಗೆ ಪ್ರತ್ಯೇಕ ಗ್ರಾಹಕರಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಸದ್ಯ ಕಂಪನಿಯು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಬಿಡುಗಡೆಗೊಳಿಸಲು ಸಿದ್ದವಾಗಿದ್ದು, ವಿನ್ಯಾಸ (ಡಿಸೈನ್) ಸಂಬಂಧ ಪೇಟೆಂಟ್ ಕೂಡ ಸಲ್ಲಿಸಿದೆ ಎಂದು ವರದಿಯಾಗಿದೆ.

ಹೋಂಡಾ ಕಂಪನಿಯು ಆಗ್ನೇಯ ಏಷ್ಯಾ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ನೂತನ ಬೀಟ್ (Beat) ಸ್ಕೂಟರ್‌ನ್ನು ದೇಶೀಯವಾಗಿ ಮಾರಾಟಕ್ಕೆ ತರಲು ಹವಣಿಸುತ್ತಿದೆ ಎಂದು ತಿಳಿದುಬಂದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಪೇಟೆಂಟ್ ಫೋಟೋಗಳಲ್ಲಿ ಕಂಡುಬರುವ ಸ್ಕೂಟರ್‌ನ ಹೆಚ್ಚಿನ ವೈಶಿಷ್ಟ್ಯಗಳು (ಫೀಚರ್) ಇಂಡೋನೇಷ್ಯಾದಲ್ಲಿ ಮಾರಾಟವಾಗುತ್ತಿರುವ 2024ರ ಹೋಂಡಾ ಬೀಟ್‌ಗೆ ಹೋಲಿಕೆಯಾಗುತ್ತದೆ.

New Honda Beat Scooter Patent In India Low Price 60 Km Mileage Expected

ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಈ ಹೋಂಡಾ ಬೀಟ್‌ ಸ್ಕೂಟರ್ 109.5 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.2 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ. ದೇಶದಲ್ಲಿಯೂ ನೂತನ ಸ್ಕೂಟರ್‌ನ್ನು ಇದೇ ಎಂಜಿನ್ ಆಯ್ಕೆಯಲ್ಲಿ ಕಂಪನಿಯು ಪರಿಚಯಿಸಬಹುದು. ಇದು 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಹೋಂಡಾ ಬೀಟ್‌ನಂತೆಯೇ ಭಾರತದ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬರಲಿದೆ ಎನ್ನಲಾದ ಹೊಸ ಸ್ಕೂಟರ್ ಸಹ 12 ಡಬ್ಲ್ಯೂ ಯುಎಸ್‌‍ಬಿ ಚಾರ್ಜರ್, ಆಂಟಿ-ಥೆಫ್ಟ್ ಅಲರಾಂ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ದೊಡ್ಡದಾದ 14-ಇಂಚಿನ ಅಲಾಯ್ ವೀಲ್‌ಗಳು, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ನ್ನು ಪಡೆದಿರಬಹುದು ಎಂದು ತಿಳಿದುಬಂದಿದೆ.

ಇಂಡೋನೇಷ್ಯಾದಲ್ಲಿ ಮಾರಾಟವಾಗುತ್ತಿರುವ ಹೋಂಡಾ ಬೀಟ್‌ ಸ್ಕೂಟರ್, 18,430,000 (ಇಂಡೋನೇಷಿಯನ್ ರುಪಿಯಾ) ಆರಂಭಿಕ ಬೆಲೆಯಲ್ಲಿ ಹೊಂದಿದೆ. ಭಾರತದ ರೂಪಾಯಿಗೆ ಪರಿವರ್ತಿಸಿದಾಗ ಸುಮಾರು ರೂ.1.01 ಲಕ್ಷವಾಗುತ್ತದೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ನೂತನ ಸ್ಕೂಟರ್ ಅತಿಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ.

ಪ್ರಸ್ತುತ ಭಾರತದಲ್ಲಿ ಹೋಂಡಾ ಆಕ್ಟಿವಾ (Honda Activa) ಪ್ರಖ್ಯಾತ ಸ್ಕೂಟರ್ ಆಗಿದ್ದು, ಹಲವು ವಿವಿಧ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಆಕ್ಟಿವಾ 125 ಸ್ಕೂಟರ್, ರೂ.83,084 ದಿಂದ 92,257 ಎಕ್ಸ್ ಶೋರೂಂ ದರವನ್ನು ಪಡೆದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಆಕ್ಟಿವಾ 6ಜಿ ಸ್ಕೂಟರ್ ರೂ.78,624 ದಿಂದ ರೂ.84,624 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 59.5 ಕೆಎಂಪಿಎಲ್‌ವರೆಗೆ ನೀಡುತ್ತದೆ.

ಹೋಂಡಾ ಡಿಯೋ 125 (Honda Dio 125) ಸ್ಕೂಟರ್ ಸಹ ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ಇದು ರೂ.85,049 ದಿಂದ ರೂ.92,950 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 123.92 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, September 25, 2024, 10:51 [IST]
English summary
New honda beat scooter patent in india low price 60 km mileage expected
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+