ಕೈನೆಟಿಕ್ ಇ-ಲೂನಾ ಮೊಪೆಡ್‌ನ್ನು ರೈತರು ಕೂಡ ಖರೀದಿಸಬಹುದು.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದಲ್ಲಿ ದಶಕಗಳ ಹಿಂದೆ ಮಧ್ಯಮ ವರ್ಗದ ಜನರ ನೆಚ್ಚಿನ ದ್ವಿಚಕ್ರ ವಾಹನವಾಗಿದ್ದ ಕೈನೆಟಿಕ್ ಲೂನಾವನ್ನು ಎಲೆಕ್ಟ್ರಿಕ್ ರೂಪದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ನೂತನ ಕೈನೆಟಿಕ್ ಇ-ಲೂನಾ (Kinetic E-Luna) ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಹೇಳಿ ಮಾಡಿಸಿದ ರೀತಿಯಲಿದೆ. ನೀವು ಈ ಮೊಪೆಡ್‌ನ್ನು ಖರೀದಿಸಲು ಆಲೋಚಿಸಿದ್ದೀರಾ.. ನಾವಿಲ್ಲಿ ಹೊಚ್ಚ ಹೊಸ ಕೈನೆಟಿಕ್ ಇ-ಲೂನಾದ ರೇಂಜ್ (Range), ವೈಶಿಷ್ಟ್ಯಗಳು (Features), ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಕೈನೆಟಿಕ್ ಇ-ಲೂನಾ ಎಕ್ಸ್1 (X1) ಹಾಗೂ ಎಕ್ಸ್2 (X2) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಎಕ್ಸ್1 ರೂಪಾಂತರ, ರೂ.84,500 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.20,000 ಡೌನ್ ಪೇಮೆಂಟ್ ಪಾವತಿಸಿ, ಈ ಮೊಪೆಡ್‌ನ್ನು ಖರೀದಿ ಮಾಡಿದರೆ, ರೂ.64,000 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,200 ವರೆಗೆ ಇಎಂಐ ಪಾವತಿ ಮಾಡಬೇಕು.

New Kinetic E-Luna On Road Price Emi Range Features Details

ಈ ಇ-ಲೂನಾ ಎಕ್ಸ್1 ರೂಪಾಂತರ, 1.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 90 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. 50 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3 ಗಂಟೆಗಳಲ್ಲಿ ಇದರ ಬ್ಯಾಟರಿಯು ಭರ್ತಿ ಚಾರ್ಜ್ ಆಗುತ್ತದೆ.

ಕೈನೆಟಿಕ್ ಇ-ಲೂನಾ ಎಕ್ಸ್2 ರೂಪಾಂತರ, ರೂ.89,300 ವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.20,000 ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.69,000 ವರೆಗೆ ಸಾಲದ ಮೊತ್ತ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 3 ವರ್ಷಗಳಿಗೆ (36 ತಿಂಗಳು) ಮಾಸಿಕ ರೂ.2,300 ಇಎಂಐ ಕಟ್ಟಬೇಕು.

New Kinetic E-Luna On Road Price Emi Range Features Details

ನೂತನ ಕೈನೆಟಿಕ್ ಇ-ಲೂನಾ ಎಕ್ಸ್2 ರೂಪಾಂತರ, ಶಕ್ತಿಯುತವಾದ 2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 110 ಕಿ.ಮೀ ಕಿಲೋಮೀಟರ್‌ವರೆಗೂ ಓಡುತ್ತದೆ. 50 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಇದರಲ್ಲಿರುವ ಬ್ಯಾಟರಿಯು ಕೇವಲ 4 ಗಂಟೆಯಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಿಬಿಡುತ್ತದೆ.

ಇವೆರೆಡು ರೂಪಾಂತರಗಳು ಪರ್ಲ್ ಯೆಲ್ಲೋ, ಮಲ್ಬೆರಿ ರೆಡ್, ಓಷನ್ ಬ್ಲೂ ಹಾಗೂ ಸ್ಪಾರ್ಕ್ಲಿಂಗ್ ಗ್ರೀನ್ ಒಳಗೊಂಡಂತೆ 5 ವಿವಿಧ ಬಣ್ಣಗಳೊಂದಿಗೂ ಸಿಗುತ್ತವೆ. 16-ಇಂಚಿನ ವೀಲ್‌ಗಳು, ಟೆಲಿಸ್ಕೊಪಿಕ್ ಫ್ರಂಟ್ ಸಸ್ಪೆನ್ಷನ್ ಸೆಟಪ್, ಡಿಜಿಟಲ್ ಮೀಟರ್, ಸ್ಯಾರಿ ಗಾರ್ಡ್, ಸೇಫ್ಟಿ ಲಾಕ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿವೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿವೆ.

New Kinetic E-Luna On Road Price Emi Range Features Details

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಕೈನೆಟಿಕ್ ಇ-ಲೂನಾ ಮೊಪೆಡ್‌ಗೆ ಯಾವುದೇ ನೇರ ಪ್ರತಿಸ್ಪರ್ಧಿಯಿಲ್ಲ. ಆದರೂ ಟಿವಿಎಸ್ ಎಕ್ಸ್ಎಲ್100 (TVS XL100) ಪ್ರಬಲವಾದ ಎದುರಾಳಿಯಾಗಲಿದೆ. ಇದು ರೂ.44,999 ರಿಂದ ರೂ.59,014 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 99.7 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 4.35 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 57 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಇನ್ನು, ಹೊಚ್ಚ ಹೊಸ ಕೈನೆಟಿಕ್ ಇ-ಲೂನಾ (Kinetic E-Luna) ಮೊಪೆಡ್‌ ಸಾಕಷ್ಟು ಅತ್ಯಾಧುನಿಕವಾಗಿದೆ. ಅತ್ಯಂತ ಕಡಿಮೆ ಬೆಲೆಗೂ ಸಿಗುವುದರಿಂದ ಮಧ್ಯಮ ವರ್ಗದ ಜನರು ಸುಲಭವಾಗಿ ಖರೀದಿ ಮಾಡಬಹುದು. ಅದರಲ್ಲೂ ಗ್ರಾಮೀಣ ಭಾಗದ ರೈತರಿಗೆ ಉತ್ತಮವಾದ ಆಯ್ಕೆಯಾಗಲಿದ್ದು, ಕೃಷಿ ಕೆಲಸಗಳಿಗೂ ಬಳಕೆ ಮಾಡಬಹುದು.

ನಿಮ್ಮ ಗಮನಕ್ಕೆ.. ಈ ಕೈನೆಟಿಕ್ ಇ-ಲೂನಾ ಮೊಪೆಡ್‌ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಸಂಪರ್ಕಿಸಿರಿ.

More from DriveSpark

Article Published On: Friday, November 29, 2024, 15:13 [IST]
English summary
New kinetic e luna on road price emi range features details
Read more on electric scooter india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+