KTM: ಯುವಕರಿಗೆ ಸಿಹಿಸುದ್ದಿ.. 2 ಹೊಚ್ಚ ಹೊಸ ಕೆಟಿಎಂ ಬೈಕ್‌ಗಳು ಪರಿಚಯ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!

ಆಸ್ಟ್ರಿಯಾ ಮೂಲದ ಕೆಟಿಎಂ (KTM) ಜನಪ್ರಿಯ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಯುವಕರನ್ನು ಸೆಳೆಯಬಲ್ಲ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಗೋವಾದಲ್ಲಿ ಶುಕ್ರವಾರ ಅದ್ದೂರಿಯಾಗಿ ಏರ್ಪಡಿಸುವ 'ಇಂಡಿಯಾ ಬೈಕ್ ವೀಕ್' ಕಾರ್ಯಕ್ರಮದಲ್ಲಿ ಹೊಚ್ಚ ಹೊಸ 390 ಅಡ್ವೆಂಚರ್ ಎಸ್ (390 Adventure S) ಮತ್ತು 390 ಎಂಡ್ಯೂರೋ ಆರ್ (390 Enduro R) ಮೋಟಾರ್‌ಸೈಕಲ್‌ಗಳನ್ನು ಅನಾವರಣಗೊಳಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕೆಟಿಎಂ 390 ಅಡ್ವೆಂಚರ್ ಎಸ್ (390 Adventure S): ಮೊದಲಿಗೆ ಈ ಬೈಕ್ ಕುರಿತಂತೆ ಮಾತನಾಡುವುದಾದರೆ, ಇದು ನವೀನ ಶೈಲಿಯ ವಿನ್ಯಾಸವನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಎಲ್‌ಇಡಿ ಟೈಲ್‌ಲೈಟ್‌ಗಳು, ರೇರ್ ಬ್ಲಿಂಕರ್‌ಗಳು ಮತ್ತು ಸಾಕಷ್ಟು ಎತ್ತರವಿರುವ ವಿಂಡ್‌ಸ್ಕ್ರೀನ್‌ನ್ನು ಹೊಂದಿದೆ.

New KTM 390 Adventure 390 Enduro R Unveiled In IBW Details

ಈ ಕೆಟಿಎಂ 390 ಅಡ್ವೆಂಚರ್ ಎಸ್ ಮೋಟಾರ್‌ಸೈಕಲ್‌ 399 ಸಿಸಿ, ಲಿಕ್ವಿಡ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,500 ಆರ್‌ಪಿಎಂನಲ್ಲಿ 46 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,500 ಆರ್‌ಪಿಎಂನಲ್ಲಿ 39 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ನೂತನ ಬೈಕ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಿಎಫ್‌ಟಿ ಸ್ಕ್ರೀನ್‌, ಸ್ವಿಚ್ಏಬಲ್ ಟ್ರಾಕ್ಷನ್ ಕಂಟ್ರೋಲ್, ಕಾರ್ನೆರಿಂಗ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ.

New KTM 390 Adventure 390 Enduro R Unveiled In IBW Details

ಕೆಟಿಎಂ 390 ಎಂಡ್ಯೂರೋ ಆರ್ (KTM 390 Enduro R): ಈ ಬೈಕ್ ಬಗ್ಗೆ ಹೇಳುವುದಾದರೆ, ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. 399 ಸಿಸಿ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 45.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 39 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನೂತನ ಕೆಟಿಎಂ 390 ಎಂಡ್ಯೂರೋ ಆರ್ ಮೋಟಾರ್‌ಸೈಕಲ್‌, ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್, ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಇನ್ನು, ಕೆಟಿಎಂ 390 ಅಡ್ವೆಂಚರ್ ಎಸ್ ಮೋಟಾರ್‌ಸೈಕಲ್‌ ರೂ.3.8 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. 2025ರಲ್ಲಿ ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯುವ ಆಟೋ ಎಕ್ಸ್‌ಪೋದಲ್ಲಿ ಈ ಬೈಕ್ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕೆಟಿಎಂ 390 ಎಂಡ್ಯೂರೋ ಆರ್ ಬೈಕ್ 3.3 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಲಿದ್ದು, ಮುಂದಿನ ವರ್ಷದ ಮಧ್ಯಭಾಗದಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, December 6, 2024, 20:18 [IST]
English summary
New ktm 390 adventure 390 enduro r unveiled in ibw details
Read more on ktm india india bike week
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+