ಬುಕ್ಕಿಂಗ್‌ನಲ್ಲಿ ಸುನಾಮಿ: ಈ ಮ್ಯಾಟರ್ ಎಲೆಕ್ಟ್ರಿಕ್ ಬೈಕ್ ಬುಕ್ ಮಾಡಿದವರಿಗೆ ಗುಡ್ ನ್ಯೂಸ್
ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡೀಕೆಯನ್ನು ಪಡೆದುಕೊಳ್ಳುತ್ತಿದೆ. ಇದರಿಂದ ಹಲವು ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ದಿ ಪಡಿಸುತ್ತಿದ್ದಾರೆ. ಇದರ ನಡುವೆ ಹಲವು ಸ್ಟಾರ್ಟ್ಅಪ್ ವಾಹನ ತಯಾರಕ ಕಂಪನಿಗಳು ಪೈಪೋಟಿಗೆ ಬಿದ್ದಂತೆ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಾಗುತ್ತಿವೆ.
ಗುಜರಾತ್ ಮೂಲದ ಇವಿ ಸ್ಟಾರ್ಟ್ಅಪ್ ಮ್ಯಾಟರ್ ಕೊನೆಗೂ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ Aera ಎಲೆಕ್ಟ್ರಿಕ್ ಬೈಕ್ ಅನ್ನು ಪರಿಚಯಿಸಿತು. ಈ ಎಲೆಕ್ಟ್ರಿಕ್ ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ. ಮ್ಯಾಟರ್ ತಮ್ಮ ಈ ಹೊಸ Aera ಎಲೆಕ್ಟ್ರಿಕ್ ಬೈಕಿಗಾಗಿ ಒಂದು ತಿಂಗಳೊಳಗೆ 40,000 ಬುಕಿಂಗ್‌ಗಳನ್ನು ಪಡೆದುಕೊಂಡಿದ್ದರು. ಮ್ಯಾಟರ್ Aera ಭಾರತದ ಮೊದಲ ಗೇರ್ ಎಲೆಕ್ಟ್ರಿಕ್ ಬೈಕ್ ಇದಾಗಿದೆ.

ಮ್ಯಾಟರ್ ತನ್ನ ಬಹು ನಿರೀಕ್ಷಿತ ಏರಾ ಎಲೆಕ್ಟ್ರಿಕ್ ಬೈಕ್ ವಿತರಣೆಯನ್ನು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಪ್ರಾರಂಭಿಸಲಿದೆ. ಈ ಬೈಕ್ LED ಡೇಟೈಮ್ ರನ್ನಿಂಗ್ ಲೈಟ್‌ನೊಂದಿಗೆ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಸೈಡ್ ಕೌಲ್‌ಗಳನ್ನು ಬೈಕ್‌ಗೆ ಏರೋಡೈನಾಮಿಕ್ ದಕ್ಷತೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆಯಾಗಿ ಈ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.
ಈ ಮ್ಯಾಟರ್ Aera (Matter Aera) ಈ ವರ್ಷದ ಆರಂಭದಲ್ಲಿ ಭಾರತದ ಮೊದಲ ಸಜ್ಜಾದ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಗಿ ಬಿಡುಗಡೆ ಮಾಡಲಾಯಿತು. ಮತ್ತು ಮೋಟಾರ್ ಮತ್ತು ಬ್ಯಾಟರಿಗಾಗಿ ಆಂತರಿಕವಾಗಿ ಅಭಿವೃದ್ಧಿಪಡಿಸಿದ ಲಿಕ್ವಿಡ್ ಕೂಲಿಂಗ್ ಸಿಸ್ಟಂ ಸಹ ಪಡೆಯುತ್ತದೆ. ಇನ್ನು ಮ್ಯಾಟರ್ ಕಂಪನಿಯು ಪ್ರಸ್ತುತ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಮತ್ತು ಫ್ಲಿಪ್‌ಕಾರ್ಟ್ ಮೂಲಕ ಬುಕಿಂಗ್‌ಗಳನ್ನು ಸ್ವೀಕರಿಸುತ್ತಿದ್ದಾರೆ.

Aera ಅನ್ನು ಮುಂಗಡ ಬುಕ್ ಮಾಡಿದ ಗ್ರಾಹಕರು ಮೊದಲು ಡೆಲಿವರಿಯನ್ನು ಮಾಡುತ್ತಾರೆ. ಮ್ಯಾಟರ್ Aera 5,000 ಮತ್ತು 5,000+ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಎರಡರಲ್ಲೂ ಒಂದೇ ಎಲೆಕ್ಟ್ರಿಕ್ ಮೋಟಾರ್ ಮತ್ತು ಬ್ಯಾಟರಿ ಪ್ಯಾಕ್ ಇದೆ. ಪವರ್ ಉತ್ಪಾದನೆಯನ್ನು 10 kW ಎಂದು ರೇಟ್ ಮಾಡಿದೆ. ಈ ಮ್ಯಾಟರ್ ಎಲೆಕ್ಟ್ರಿಕ್ ಬೈಕ್ 6 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.
ಈ ಬೈಕ್ 5 kWh ಬ್ಯಾಟರಿ ಪ್ಯಾಕ್‌ನಿಂದ 125 ಕಿಮೀ ರೇಂಜ್ ಅನ್ನು ನೀಡುತ್ತದೆ. ಈ ಮ್ಯಾಟರ್ ಎಲೆಕ್ಟ್ರಿಕ್ ಬೈಕ್ ಬ್ಯಾಟರಿಯ ಬಗ್ಗೆ ಹೇಳುವುದಾದರೆ, ಫಾಸ್ಟ್ ಚಾರ್ಜರ್ ಅನ್ನು ಬಳಸುತ್ತಿದ್ದರೆ ಅದನ್ನು ಐದು ಗಂಟೆಗಳಲ್ಲಿ ಮತ್ತು 2 ಗಂಟೆಗಳಲ್ಲಿ ಚಾರ್ಜ್ ಮಾಡಬಹುದು. ಇದಲ್ಲದೆ, ಇದು IP67 ರೇಟ್ ಮತ್ತು ಲಿಕ್ವಿಡ್-ಕೂಲ್ಡ್ ಆಗಿದೆ.

ಈ ಹೊಸ ಮ್ಯಾಟರ್ Aera ಎಲೆಕ್ಟ್ರಿಕ್ ಬೈಕ್ ಎರಡೂ ಆವೃತ್ತಿಗಳು 4-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ನಾಲ್ಕು ರೈಡಿಂಗ್ ಮೋಡ್‌ಗಳೊಂದಿಗೆ ಬರುತ್ತವೆ. ಇನ್ನು ಬ್ರೇಕಿಂಗ್ ಸಿಸ್ಟಂಗಳ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಮೂಲಕ ನಿರ್ವಹಿಸಲಾಗುತ್ತದೆ. ಇನ್ನು ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್ ಚಾನೆಲ್ ಎಬಿಎಸ್ ಸಹ ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications








