ಪೆಟ್ರೋಲ್ ಬೇಕಿಲ್ಲ: 75,000ಕ್ಕೆ ಓಲಾ ರೋಡ್‌ಸ್ಟರ್ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ, ಕಾರಿನಂತಹ ವೈಶಿಷ್ಟ್ಯಗಳು!
ಓಲಾ ಎಲೆಕ್ಟ್ರಿಕ್ (Ola Electric) ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ 'ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ವಿಭಾಗಕ್ಕೂ ಕಾಲಿಟ್ಟಿದ್ದು, ಗುರುವಾರ (ಆಗಸ್ಟ್ 15) ಮೊದಲ ಎಲೆಕ್ಟ್ರಿಕ್ ಬೈಕ್ ರೋಡ್‌ಸ್ಟರ್‌ನ್ನು (Roadster) ಬಿಡುಗಡೆಗೊಳಿಸಿದೆ. ಇದು ರೋಡ್‌ಸ್ಟರ್ ಎಕ್ಸ್, ರೋಡ್‌ಸ್ಟರ್ & ರೋಡ್‌ಸ್ಟರ್ ಪ್ರೊ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಬನ್ನಿ.. ಯಾವ ರೂಪಾಂತರ ಏನೆಲ್ಲಾ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಓಲಾ ರೋಡ್‌ಸ್ಟರ್ ಎಕ್ಸ್ ರೂಪಾಂತರದ ಬಗ್ಗೆ ಮಾತನಾಡೋಣ. ಇದು 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್ ಹಾಗೂ 4.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನೊಂದಿಗೆ ದೊರೆಯಲಿದೆ. ಅದಕ್ಕೆ ತಕ್ಕಂತೆ ರೂ.74,999 ದಿಂದ ರೂ.99,999 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ಓಡುತ್ತದೆ.

ಈ ಓಲಾ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 124 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದ್ದು, ಕೇವಲ 2.8 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 4.3-ಇಂಚಿನ ಎಲ್‌ಸಿಡಿ ಸೆಗ್ಮೆಂಟ್ ಡಿಸ್ಪ್ಲೇ, ಓಲಾ ಮ್ಯಾಪ್ ನ್ಯಾವಿಗೇಷನ್ (ಟರ್ನ್- ಬೈ-ಟರ್ನ್), ಕ್ರೂಸ್ ಕಂಟ್ರೋಲ್, ಡಿಐವೈ ಮೋಡ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಒಟಿಎ ಅಪ್ಡೇಟ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ನ್ನು ಪಡೆದಿದೆ.
ಓಲಾ ರೋಡ್‌ಸ್ಟರ್ ರೂಪಾಂತರದ ಬಗ್ಗೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಬೈಕ್ 3.5 ಕೆಡಬ್ಲ್ಯೂಹೆಚ್, 4.5 ಕೆಡಬ್ಲ್ಯೂಹೆಚ್ ಹಾಗೂ 6 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ರೂ.1,04,999 ದಿಂದ ರೂ.1,39,999 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಭರ್ತಿ ಚಾರ್ಜ್‌ನಲ್ಲಿ 248 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ನೂತನ ಓಲಾ ರೋಡ್‌ಸ್ಟರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಹೈಪರ್, ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದ್ದು, 6.8-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್, ಪ್ರಾಕ್ಸಿಮಿಟಿ ಅನ್‌ಲಾಕ್, ಕ್ರೂಸ್ ಕಂಟ್ರೋಲ್, ಪಾರ್ಟಿ ಮೋಡ್, ಟ್ಯಾಂಪರ್ ಅಲರ್ಟ್, ಸ್ಮಾರ್ಟ್‌ವಾಚ್ ಅಪ್ಲಿಕೇಶನ್, ರೋಡ್ ಟ್ರಿಪ್ ಪ್ಲಾನರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಹೊಂದಿದ್ದು, ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಓಲಾ ರೋಡ್‌ಸ್ಟರ್ ಪ್ರೊ ಕುರಿತಂತೆ ಮಾತನಾಡುವುದಾದರೆ, ಇದು 8 ಕೆಡಬ್ಲ್ಯೂಹೆಚ್ ಮತ್ತು 16 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ. ರೂ.1,99,999 ದಿಂದ ರೂ.2,49,999 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 579 ಕಿಲೋಮೀಟರ್‌ವರೆಗೆ ಓಡುತ್ತದೆ. 194 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದೆ.

ಈ ಓಲಾ ರೋಡ್‌ಸ್ಟರ್ ಪ್ರೊ ಎಲೆಕ್ಟ್ರಿಕ್ ಬೈಕ್ ಹೈಪರ್, ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 10-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ ಡಿಸ್ಕ್ ಬ್ರೇಕ್‌ಗಳು ಹಾಗೂ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








