ಯುವಕರ ಹೃದಯ ಕದ್ದ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ವಿಶೇಷತೆಗಳು
ರಾಯಲ್ ಎನ್‌ಫೀಲ್ಡ್ (Royal Enfield) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಇರುವ ಬೇಡಿಕೆ ವಿಭಿನ್ನವಾಗಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಸರಣಿಯಲ್ಲಿ ಹಲವಾರು ವಿಭಿನ್ನ ರೀತಿಯ ಬೈಕ್‌ಗಳಿವೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸದಾಗಿ ಬಿಡುಗಡೆಯಾದ ಗೋವಾನ್ ಕ್ಲಾಸಿಕ್ 350 ಆಕರ್ಷಕ ವಿನ್ಯಾಸದ ಮೂಲಕ ಸದ್ದು ಮಾಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 (Royal Enfield Goan Classic 350) ಬೈಕ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಬೆಲೆ: ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.35 ಲಕ್ಷವಾಗಿದೆ. ಈ ಹೊಸ ಬೈಕ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ ನಿಮಗೆ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಎಂಜಿನ್: ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕಿನಲ್ಲಿ 349 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಹಾಗೂ 4,000 ಆರ್‌ಪಿಎಂನಲ್ಲಿ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
ವಿನ್ಯಾಸ: ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕಿನಲ್ಲಿ ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ಅಡ್ಜೆಸ್ಟೇಬಲ್ ಕ್ಲಚ್ & ಬ್ರೇಕ್ ಲಿವರ್‌ಗಳನ್ನು ಹೊಂದಿದೆ. 'ಟಿಯರ್ ಡ್ರಾಪ್' ಹೋಲಿಕೆಯಾಗುವ ಫ್ಯುಯೆಲ್ ಟ್ಯಾಂಕ್, ಕರ್ವ್ ಫೆಂಡರ್‌ಗಳು, 'ಏಪ್-ಹ್ಯಾಂಗರ್' ರೀತಿಯಲ್ಲಿರುವ ಹ್ಯಾಂಡಲ್‌ಬಾರ್‌ಗಳು, ಫ್ಲೋಟಿಂಗ್ ಸೀಟ್ ಮತ್ತು ಫಾರ್ವರ್ಡ್-ಸೆಟ್ ಫುಟ್‌ಪೆಗ್‌ಗಳನ್ನು ಒಳಗೊಂಡಿದೆ.

ಹೊಸ ಗೋವಾನ್ ಕ್ಲಾಸಿಕ್ 350 ಬೈಕ್ 2,130 ಎಂಎಂ ಉದ್ದ, 825 ಎಂಎಂ ಅಗಲ ಹಾಗೂ 1,200 ಎಂಎಂ ಎತ್ತರವೂ ಇದೆ. ಇನ್ನು ಈ ಬೈಕ್ 1,400 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) 19-ಇಂಚಿನ ವೀಲ್ & 100/90-1 ಅಳತೆಯ ಟೈರ್‌ನ್ನು ಹೊಂದಿದೆ. ಹಿಂಭಾಗ (ರೇರ್) 16-ಇಂಚಿನ ವೀಲ್ & 30/90-16 ಅಳತೆಯ ಟೈರ್‌ನ್ನು ಪಡೆದಿದೆ. ಸರಿ ಸುಮಾರು 197 ಕೆಜಿ ತೂಕವಿದೆ.
ಫೀಚರ್ಸ್: ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಈ ಗೋವಾನ್ ಕ್ಲಾಸಿಕ್ 350 ಬೈಕಿನಲ್ಲಿ ಸೆಮಿ-ಡಿಜಿಟಲ್ ಕನ್ಸೋಲ್ ಅನ್ನು ಪಡೆದಿದೆ. ಇದು ಟ್ರಿಪ್ಪರ್ ನ್ಯಾವಿಗೇಷನ್, ಫ್ಯೂಯೆಲ್ ಲೆವೆಲ್ ಸೇರಿದಂತೆ ಹೆಚ್ಚಿನ ವಿವರಗಳನ್ನು ಪಡೆಯಬಹುದು.

ಸಸ್ಪೆನ್ಷನ್ ಸೆಟಟ್ & ಬ್ರೇಕಿಂಗ್ ಸಿಸ್ಟಮ್: ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕಿನಲ್ಲಿ ಮುಂಭಾಗ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 6-ಸ್ಟೆಪ್ಸ್ ಟ್ವಿನ್ ಶಾಕ್ಸ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. ಇನ್ನು ಈ ಬೈಕಿನ ಮುಂಭಾಗ 300 ಎಂಎಂ ಹಾಗೂ ಹಿಂದೆ) 270 ಎಂಎಂ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಜೊತೆಗೆ ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








