ರಾಯಲ್ ಎನ್‌ಫೀಲ್ಡ್‌ನ ಬ್ರಹ್ಮಾಸ್ತ್ರ: ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಗೆರಿಲ್ಲಾ 450 ಬೈಕ್
ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನಪೋರ್ಟ್‌ಫೋಲಿಯೊವನ್ನು ವಿಸ್ತರಿಸಲು ಮತ್ತು ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದೆ. ಇದಕ್ಕಾಗಿ ರಾಯಲ್ ಎನ್‌ಫೀಲ್ಡ್ ಹೊಸ ಹಿಮಾಲಯನ್ ಬೈಕಿನ ನೇಕೆಡ್ ಆವೃತ್ತಿಯನ್ನು ಭಾರತದಲ್ಲಿ ಅಭಿವೃದ್ಧಿಪಡಿಸುತ್ತಿದೆ.
ಮುಂಬರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮೂಲದ ನೇಕೆಡ್ ಬೈಕಿಗೆ ಗೆರಿಲ್ಲಾ 450 ಎಂಬ ಹೆಸರನ್ನು ನೀಡಬಹುದು. ಈ ಹೊಸ ಬೈಕ್ ಅನ್ನು ಚೆನ್ನೈನಲ್ಲಿ ಟೆಸ್ಟ್ ಮಾಡಲಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈ ಹೊಸ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಮತ್ತು ಮಾರಾಟದ ಸಂಖ್ಯೆಯನ್ನು ಹೆಚ್ಚಿಸಲು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಮುಂಬರುವ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 (Royal Enfield Guerrilla 450) ಬೈಕ್ ಬಗ್ಗೆ ಹೇಳುವುದಾದರೆ, ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ನಂತೆಯೇ ಅದೇ ಚಾಸಿಸ್ ಮತ್ತು ಪವರ್‌ಟ್ರೇನ್ ಅನ್ನು ಬಳಸುವ ಸಾಧ್ಯತೆಯಿದೆ. ಗೆರಿಲ್ಲಾ 450 ನಲ್ಲಿನ ಸಸ್ಪೆನ್ಶನ್ ಸೆಟಪ್ ಭಿನ್ನವಾಗಿರಬಹುದು, ಏಕೆಂದರೆ ಈ ಮಾದರಿಯು ಆಫ್-ರೋಡ್ ಆಗಿರದೇ ಹೆಚ್ಚು ರೋಡ್ ಆಧಾರಿತ ಬೈಕ್ ಆಗಿರುತ್ತದೆ.
ಈ ಹೊಸ ಬೈಕಿನ ಸ್ಪೈ ಚಿತ್ರದಲ್ಲಿ, ಚಿಕ್ಕದಾದ ಸಾಂಪ್ರದಾಯಿಕ ಮುಂಭಾಗದ ಸಸ್ಪೆಕ್ಶನ್ ಮಾತ್ರವಲ್ಲದೆ, ಈ ಮಾದರಿಯು ಅಲಾಯ್ ವ್ಹೀಲ್ ಗಳು ಮತ್ತು ಸಣ್ಣ 17-ಇಂಚಿನ ಟೈರ್‌ಗಳನ್ನು ಸಹ ಒಳಗೊಂಡಿರುತ್ತದೆ. ಈ ಬದಲಾವಣೆಗಳ ಜೊತೆ ಮುಂಬರುವ ಗೆರಿಲ್ಲಾ 450 ಬೈಕಿನ ಗ್ರೌಂಡ್ ಕ್ಲಿಯರೆನ್ಸ್ ಹಿಮಾಲಯಕ್ಕಿಂತ ಕಡಿಮೆಯಾಗಿದೆ. ಈ ಎರಡೂ ಬೈಕುಗಳಲ್ಲಿನ ಹಿಂಭಾಗದ ಸಸ್ಪೆಕ್ಷನ್ ಸೆಟಪ್ ಒಂದೇ ಆಗಿರುತ್ತದೆ.
ಹೊಸ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಹಿಮಾಲಯನ್ ಅನ್ನು ಆಧರಿಸಿರುವುದರಿಂದ, ಮಾದರಿಯು ಸಿಂಗಲ್ ಸಿಲಿಂಡರ್ ಶೆರ್ಪಾ 450 ಎಂಜಿನ್ ಅನ್ನು ಹೊಂದಿರುತ್ತದೆ. ಹಿಮಾಲಯನ್‌ನಲ್ಲಿರುವ ಈ ಎಂಜಿನ್ ಅನ್ನು 8,000ಆರ್‌ಪಿಎಂನಲ್ಲಿ 39.5ಬಿಎಚ್‌ಪಿ ಮತ್ತು 5,500ಆರ್‌ಪಿಎಂನಲ್ಲಿ 40ಎನ್‌ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ, ಈ ಎಂಜಿನ್ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್‌ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ಗೆ ಸಂಯೋಜಿಸಲ್ಪಟ್ಟಿದೆ.
ಮುಂಬರುವ ಗೆರಿಲ್ಲಾ 450 ರಾಯಲ್ ಎನ್‌ಫೀಲ್ಡ್ ಹಿಮಾಲಯನ್‌ನ ಅದೇ ಎಲೆಕ್ಟ್ರಾನಿಕ್ಸ್ ಸೂಟ್‌ನೊಂದಿಗೆ ಬರಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಅಲ್ಲದೆ ಹಿಮಾಲಯದಲ್ಲಿ ಇರುವ ಅದೇ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಬಹುದು. ಇನ್ನು ಸದ್ಯ ಮಾರುಕಟ್ಟೆಯಲ್ಲಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕ್ ಇಕೋ ಮತ್ತು ಪರ್ಫಾಮೆನ್ಸ್ ಎಂಬ ಎರಡು ವಿಭಿನ್ನ ರೈಡಿಂಗ್ ಮೋಡ್‌ಗಳನ್ನು ಹೊಂದಿವೆ.
ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ತನ್ನ ವಿನ್ಯಾಸದ ಉದ್ದಕ್ಕೂ ಎಲ್ಇಡಿ ಲೈಟಿಂಗ್ ಜೊತೆಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಹೊಸ ಹಿಮಾಲಯನ್ 450 ನವೀಕೃತ ವಿಶೇಷತೆಗಳನ್ನು ನೋಡುವುದಾದರೆ, ಸ್ಲಿಪ್ಪರ್ ಕ್ಲಚ್ ಮತ್ತು ಅಸಿಸ್ಟ್ ಕ್ಲಚ್ ಸಹ ಸ್ಟ್ಯಾಂಡರ್ಡ್ ಆಗಿ ಬರಲಿದೆ. ಅದೇ ಸಮಯದಲ್ಲಿ ಈ ಬೈಕಿನ ತೂಕವು 196 ಕೆ.ಜಿ ಇರಲಿದೆ. ಈ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಸಾಮರ್ಥ್ಯ 17 ಲೀಟರ್ ಆಗಿದೆ.
ಗಮನಾರ್ಹ ಫೀಚರ್‌ಗಳ ವಿಷಯಕ್ಕೆ ಬಂದರೆ ಫುಲ್ LED ಲೈಟಿಂಗ್, ರೈಡ್ ಬೈ ವೈರ್, ಸ್ವಿಚ್ ಮಾಡಬಹುದಾದ ABS, ನ್ಯಾವಿಗೇಷನ್ ಮತ್ತು ಬ್ಲೂಟೂತ್ ಸಂಪರ್ಕದೊಂದಿಗೆ ದೊಡ್ಡ ಮತ್ತು ವೃತ್ತಾಕಾರದ TFT ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ಹಿಮಾಲಯನ್ 450 ಗ್ರೌಂಡ್ ಕ್ಲಿಯರೆನ್ಸ್ 230 mm ನಲ್ಲಿ ನಿಂತಿದೆ ಮತ್ತು ಮುಂಭಾಗ ಮತ್ತು ಹಿಂಭಾಗದ ಫೋರ್ಕ್‌ಗಳು 200 mm ಟ್ಯಾವೆಲ್ ಅನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








