ಯುವಕರ ಬೇಡಿಕೆಯಂತೆ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್
ರಾಯಲ್ ಎನ್‌ಫೀಲ್ಡ್ (Royal Enfield) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಇರುವ ಬೇಡಿಕೆ ವಿಭಿನ್ನವಾಗಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಸರಣಿಯಲ್ಲಿ ಹಲವಾರು ವಿಭಿನ್ನ ರೀತಿಯ ಬೈಕ್‌ಗಳಿವೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 (Royal Enfield Scram 440) ಬೈಕ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಿತು. ಈ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ ಮಾದರಿಯು ಸ್ಕ್ರಾಮ್ 411 ಮಾದರಿಯಿಂದ ಹಲವಾರು ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ.
ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಲವು ವರದಿಗಳ ಪ್ರಕಾರ, ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ. ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕಿನ ಫೀಚರ್ಸ್ ಗಳ ಬಗ್ಗೆ ಹೇಳುವುದಾದರೆ, ಈ ಹೊಸ ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್‌ಗಳು, ಪಾರ್ಟ್-ಅನಾಲಾಗ್ ಪಾರ್ಟ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಗಳನ್ನು ಹೊಂದಿದೆ.

ಇದರೊಂದಿಗೆ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಹೊಸ ಪುಲ್-ಟೈಪ್ ಕ್ಲಚ್‌ನೊಂದಿಗೆ ಬರಲಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ 443 cc ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 25.4 bhp ಪವರ್ ಮತ್ತು 34 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಬೈಕಿನಲ್ಲಿನ 5-ಸ್ಪೀಡ್ ಯೂನಿಟ್ ಬದಲಾಯಿಸಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
ಈ ರಾಯಲ್ ಎನ್‌ಫೀಲ್ಡ್ ಸ್ಕ್ರ್ಯಾಮ್ 440 ಬಕ್ ಸುಧಾರಿತ ಪವರ್ ನೊಂದಿಗೆ ಸ್ವಲ್ಪ ಅಪ್‌ರೇಟೆಡ್ ಚಾಸಿಸ್ ಅನ್ನು ಹೊಂದಿದೆ. ಒರಟಾದ ಭೂಪ್ರದೇಶವನ್ನು ನಿಭಾಯಿಸುವಾಗ ಸವಾರರಿಗೆ ಹೆಚ್ಚು ಆತ್ಮವಿಶ್ವಾಸದಿಂದ ಸಹಾಯ ಮಾಡುತ್ತದೆ. ಇದರ ಹೊರತಾಗಿ, ಸ್ಕ್ರಾಮ್ 440 ದೊಡ್ಡದಾದ ಪಿಸ್ಟನ್ ಫ್ರಂಟ್ ಕ್ಯಾಲಿಪರ್ ಅನ್ನು ಸಹ ಹೊಂದಿದೆ. ಇನ್ನು ಬ್ರೇಕಿಂಗ್ ಪರ್ಫಾಮೆನ್ಸ್ ಮತ್ತು ಅನುಭವವನ್ನು ಸುಧಾರಿಸುತ್ತದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯ ಸರಣಿಯಲ್ಲಿ ಗೆರಿಲ್ಲಾ 450 ನಂತಹ ಆಫ್-ರೋಡ್ ಫೋಕಸ್ಡ್ ಸ್ಕ್ರ್ಯಾಂಬ್ಲರ್ ಬೈಕ್ ಅನ್ನು ಹೊಂದಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಸೇರ್ಪಡೆಯು ಖರೀದಿದಾರರಿಗೆ ಹೊಸ ಆಯ್ಕೆಯಾಗಲಿದೆ. ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ ಹಳೆಯ ಹಿಮಾಲಯನ್ 411 ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಆದರೆ ಈಗ ದೊಡ್ಡದಾಗಿದೆ ಎಂದು ಹೇಳಬಹುದು.
ಈ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಸ್ಕ್ರ್ಯಾಮ್ 440 ಬೈಕ್ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 190 ಎಂಎಂ ವ್ಹೀಲ್ ಟ್ರ್ಯಾವೆಲ್ ನೊಂದಿಗೆ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ 180 ಎಂಎಂ ವ್ಹೀಲ್ ಟ್ರ್ಯಾವೆಲ್ ನೊಂದಿಗೆ ಮೊನೊ ಶಾಕ್ ಅನ್ನು ಹೊಂದಿಸಲಾಗಿದೆ.

ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೆಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಸ್ಕ್ರ್ಯಾಮ್ 440 ಬೈಕಿನ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ನೀಡಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಶತೆಗಾಗಿ ಸ್ವಿಚ್ ಮಾಡಬಹುದಾದ (ಹಿಂಭಾಗದ) ಡ್ಯುಯಲ್-ಚಾನೆಲ್ ಎಬಿಎಸ್ ಯುನಿಟ್ ಅನ್ನು ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








