ರಾಯಲ್ ಎನ್‌ಫೀಲ್ಡ್ ಬತ್ತಳಿಕೆಗೆ ಮತ್ತೊಂದು ಅಸ್ತ್ರ: ಶಾಟ್‌ಗನ್ 650 ಬೈಕ್ ಬಿಡುಗಡೆ
ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದ್ದು, ಈ ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಬೈಕ್ (Royal Enfield Shotgun 650) ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.3.59 ಲಕ್ಷವಾಗಿದೆ.
ಹೊಸ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಅನ್ನು ಇಂಟರ್‌ಸೆಪ್ಟರ್ 650 ಮತ್ತು ಸೂಪರ್ ಮೆಟಿಯರ್ 650 ನಡುವೆ ಇರಿಸಲಾಗಿದೆ. ಹೊಸ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಬೈಕ್ ಇದು ಅದೇ ಸ್ಟೀಲ್ ಟ್ಯೂಬುಲರ್ ಸ್ಟೀಲ್ ಫ್ರೇಮ್ ಅನ್ನು ಆಧರಿಸಿದೆ, ಅದು ಸೂಪರ್ ಮೀಟಿಯರ್ 650 ಬೈಕಿಗೆ ಕೂಡ ಇದನ್ನೇ ಆಧರಿಸಿದೆ.

ಹೊಸ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಬೈಕಿನಲ್ಲಿ ಅದೇ 648cc, ಪ್ಯಾರಲಲ್ ಟ್ವಿನ್, 4-ಸ್ಟ್ರೋಕ್, ಎಸ್‌ಒಹೆಚ್‌ಸಿ, ಏರ್-ಆಯಿಲ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7250rpm ನಲ್ಲಿ 46.4bhp ಮತ್ತು 5,650rpm ನಲ್ಲಿ 52.3Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.
ಹೊಸ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಬೈಕ್ 22 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಬೈಕ್ ಸೂಪರ್ ಮೀಟಿಯರ್‌ನಂತೆಯೇ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ನು ಈ ಬೈಕ್ ಎಲ್‌ಇಡಿ ಹೆಡ್‌ಲೈಟ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಅನ್ನು ಒಳಗೊಂಡಿದೆ. ಗ್ರಾಹಕರು ಸಿಂಗಲ್ ಸೀಟರ್ ಅಥವಾ ಪಿಲಿಯನ್ ಸೀಟನ್ನು ಆಯ್ಕೆ ಮಾಡಬಹುದು.

ಈ ಬೈಕ್ ಹೆಚ್ಚು ನೇರವಾದ ಸೀಟುಗಳೊಂದಿಗೆ ಫ್ಲಾಟರ್ ಹ್ಯಾಂಡಲ್‌ಬಾರ್ ಮತ್ತು ಹೆಚ್ಚು ಮಧ್ಯ-ಸೆಟ್ ಫುಟ್‌ಪೆಗ್‌ಗಳೊಂದಿಗೆ ಬರುತ್ತದೆ. ಹೊಸ ರಾಯಲ್ ಎನ್‌ಫೀಲ್ಡ್ ಕಂಪನಿಯು ಶಾಟ್‌ಗನ್ 650 ಬೈಕ್ 1465 ಎಂಎಂ ಉದ್ದದ ವೀಲ್‌ಬೇಸ್ ಅನ್ನು ಹೊಂದಿದೆ ಮತ್ತು 140 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಇನ್ನು ಹೊಸ ಶಾಟ್‌ಗನ್ 650 2170mm ಉದ್ದ, 820mm ಅಗಲ ಮತ್ತು 1105mm ಎತ್ತರವನ್ನು ಹೊಂದಿದೆ.
ಇನ್ನು ಬಾಬರ್ 240 ಕೆಜಿ ತೂಕವನ್ನು ಹೊಂದಿದೆ ಮತ್ತು 428 ಕೆಜಿ ಗರಿಷ್ಠ ಒಟ್ಟು ವಾಹನ ತೂಕ (GVW) ಹೊಂದಿದೆ. ಇದು 13.8-ಲೀಟರ್ ಸಾಮರ್ಥ್ಯದ ಇಂಧನ ಟ್ಯಾಂಕ್ ಹೊಂದಿದೆ. ಹೊಸ ರಾಯಲ್ ಎನ್‌ಫೀಲ್ಡ್ ಕಂಪನಿಯು ಶಾಟ್‌ಗನ್ 650 ಬೈಕ್ ಸಸ್ಪೆಕ್ಷನ್ ಬಗ್ಗೆ ಹೇಳುವುದಾದರೆ, USD ಫ್ರಂಟ್ ಫೋರ್ಕ್‌ನೊಂದಿಗೆ 120mm ಟ್ರ್ಯಾವೆಲ್ ನೊಂದಿಗೆ ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಅಬ್ಸಾರ್ಬರ್ ಅನ್ನು ಒಳಗೊಂಡಿದೆ.

ಇನ್ನು ಹೊಸ ರಾಯಲ್ ಎನ್‌ಫೀಲ್ಡ್ ಕಂಪನಿಯು ಶಾಟ್‌ಗನ್ 650 ಬೈಕ್ ಬ್ರೇಂಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ 320mm ಫ್ರಂಟ್ ಡಿಸ್ಕ್ ಮತ್ತು 300mm ಹಿಂಭಾಗದ ಡಿಸ್ಕ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ABS ಅನ್ನು ಸ್ಟ್ಯಾಂಡರ್ಡ್ ಆಗಿ ಪಡೆಯುತ್ತದೆ.
ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕ್‌ಗಳ ಮಾರಾಟವೂ ಸಹ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದು, ಕಂಪನಿಯ ಬ್ರಾಂಡ್ ವ್ಯಾಲ್ಯೂ ಅನ್ನು ಎತ್ತರಕ್ಕೆ ಕೊಂಡೊಯ್ಯುತ್ತಿರುವುದನ್ನು ನಾವು ಕಾಣಬಹುದು. ಹಲವು ವರ್ಷಗಳ ಹಿಂದೆಯಿಂದಲೇ ರಾಯಲ್ ಎನ್‌ಫೀಲ್ಡ್ ಕಂಪನಿಯನ್ನು ಭಾರತೀಯ ಮೂಲದ ಕಂಪನಿ ತನ್ನ ತೆಕ್ಕೆಗೆ ಪಡೆದುಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿಯ ಪ್ರಸಿದ್ದಿ ಸಪ್ತಸಾಗರದಾಚೆಯೂ ಹರಡಿದ್ದು, ವಿದೇಶಿಗರು ರಾಯಲ್ ಎನ್‌ಫೀಲ್ಡ್ ಕಂಪನಿಯ ಬಗ್ಗೆ ಮಾತಾಡಿರುವ ಮಾತುಗಳು ಎಲ್ಲರನ್ನೂ ಸೆಳೆಯುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








