TVS Apache RR 310: ಬಹುನಿರೀಕ್ಷಿತ ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ತಮಿಳುನಾಡು ಮೂಲದ ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ-ಶೈಲಿಯ ವಿನ್ಯಾಸ (Design) ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿರುವ ಹತ್ತಾರು ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಂದು (ಸೆಪ್ಟೆಂಬರ್ 16) ಒಂದಷ್ಟು ನವೀಕರಣದೊಂದಿಗೆ ಹೊಚ್ಚ ಹೊಸ ಅಪಾಚೆ ಆರ್‌ಆರ್ 310 (TVS Apache RR 310) ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಈ ನೂತನ ಬೈಕ್ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ನೂತನ ಟಿವಿಎಸ್ ಅಪಾಚೆ ಆರ್‌ಆರ್ 310 (TVS Apache RR 310) ಬೈಕ್ ಸ್ಪರ್ಧಾತ್ಮಕ ಬೆಲೆಗೆ ಬಿಡುಗಡೆಗೊಂಡಿದೆ. ರೂ.2.75 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿದೆ. ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ ಕಾಯ್ದಿರಿಬಹುದು.

ಈ ಹೊಚ್ಚ ಹೊಸ 2024ರ ಟಿವಿಎಸ್ ಅಪಾಚೆ ಆರ್‌ಆರ್ 310 ಮೋಟಾರ್‌ಸೈಕಲ್, 312 ಸಿಸಿ ಲಿಕ್ವಿಡ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 9,800 ಆರ್‌ಪಿಎಂನಲ್ಲಿ 38 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 7,900 ಆರ್‌ಪಿಎಂನಲ್ಲಿ 29 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ನೂತನ ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕ್‌ಗೆ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿರುವುದು ಬಿಟ್ಟರೆ, ಒಟ್ಟಾರೆ ವಿನ್ಯಾಸದಲ್ಲಿ (ಡಿಸೈನ್) ಅಷ್ಟಾಗಿ ಯಾವುದೇ ಮಾರ್ಪಾಡುಗಳನ್ನು ಮಾಡಲಾಗಿಲ್ಲ. ಇದನ್ನು ಹೆಚ್ಚಿನ ಹಾರ್ಸ್ ಪವರ್ ಮತ್ತು ಟಾರ್ಕ್ ಉತ್ಪಾದಿಸುವಂತೆ ಸಿದ್ದಪಡಿಸಲಾಗಿದೆ. ಹೊಸದಾಗಿರುವ ವಿಂಗ್‌ಲೆಟ್ಸ್‌ನ್ನು ಒಳಗೊಂಡಿದೆ. ಜೊತೆಗೆ 164 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದ್ದು, ಕೇವಲ 6.74 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಅಪಾಚೆ ಆರ್‌ಆರ್ 310 ಮೋಟಾರ್‌ಸೈಕಲ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬ್ಲೂಟೂತ್ ಕನೆಕ್ಟಿವಿಟಿ & ನ್ಯಾವಿಗೇಷನ್‌ನೊಂದಿಗೆ ಟಿಎಫ್‌ಟಿ ಡಿಸ್ಪ್ಲೇ, ಸ್ಲಿಪ್ಪರ್ & ಅಸಿಸ್ಟ್ ಕ್ಲಚ್, ಹೀಟೇಡ್ & ಕೋಲ್ಡ್ ಸೀಟ್, ಬೈ ಡೈರೆಕ್ಷನಲ್ ಕ್ವಿಕ್‌ಶಿಫ್ಟರ್, ಕಾರ್ನರಿಂಗ್ ಟ್ರಾಕ್ಷನ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಟಿವಿಎಸ್ ಅಪಾಚೆ ಆರ್‌ಆರ್ 310 ಮೋಟಾರ್‌ಸೈಕಲ್, ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ ಹಾಗೂ ಹಿಂಭಾಗ (ರೇರ್) ಪ್ರಿಲೋಡ್ ಅಡ್ಜಸ್ಟಬಲ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಹ್ಯಾಂಡಲ್ ಬಾರ್‌ನ ಎರಡು ತುದಿಗಳಲ್ಲಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಒಟ್ಟಾರೆಯಾಗಿ, 2024ರ ಟಿವಿಎಸ್ ಅಪಾಚೆ ಆರ್‌ಆರ್ 310 (TVS Apache RR 310) ಬೈಕ್ ಬಹಳಷ್ಟು ಹೊಸತನಗಳಿಗೆ ಸಾಕ್ಷಿಯಾಗಿದೆ. ಮುಂಬರುವ ದಿನಗಳಲ್ಲಿ ನೂತನ ಮೋಟಾರ್‌ಸೈಕಲ್‌ನ್ನು ಹೆಚ್ಚಿನ ಸಂಖ್ಯೆಯ ಯುವ ಗ್ರಾಹಕರು ಇಷ್ಟಪಟ್ಟು ಖರಿಸುವುದರಲ್ಲಿ ಎರಡು ಮಾತಿಲ್ಲ. ಈ ಅಪಾಚೆ ಆರ್‌ಆರ್ 310ಗೆ ಕೆಟಿಎಂ ಆರ್‌ಸಿ390, ಎಪ್ರಿಲಿಯಾ ಆರ್‌ಎಸ್ 457, ಕವಾಸಕಿ ನಿಂಜಾ 300 ಹಾಗೂ ಬಿಎಂಡಬ್ಲ್ಯೂ ಜಿ 310 ಆರ್‌ಆರ್ ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








