ಖರ್ಚಿಲ್ಲದೆ ನಿತ್ಯ ಓಡಾಡಿ: ಕಡಿಮೆ ಬೆಲೆ, ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳು
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿ ವೆಲೋಸ್ ಮೋಟಾರ್ಸ್ ತನ್ನ ವಿಎಲ್ಎಫ್ ಟೆನಿಸ್ (VLF Tennis) 1500W ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ವಿಎಲ್ಎಫ್ ಟೆನಿಸ್ 1500W ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.29 ಲಕ್ಷವಾಗಿದೆ. ಈ ಜನಪ್ರಿಯ ಇಟಲಿ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರ್ಯಾಂಡ್ ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸ್ಥಳೀಯವಾಗಿ ತಯಾರಿಸಲಾಗುತ್ತಿದೆ. ಜಾಗತಿಕವಾಗಿ, VLF ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಎರಡು ರೂಪಾಂತರಗಳಲ್ಲಿ ಬರುತ್ತದೆ,
ಬ್ಯಾಟರಿ ಪ್ಯಾಕ್: ಭಾರತದಲ್ಲಿ ಮಾತ್ರ ವಿಎಲ್ಎಫ್ ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಕೇವಲ ಒಂದು ರೂಪಾಂತರದಲ್ಲಿ ಮಾತ್ರ ಲಭ್ಯವಿದೆ. ಈ ರೂಪಾಂತರವು 2.5 kWh ಬ್ಯಾಟರಿಯನ್ನು ಹೊಂದಿದ್ದು, ಈ ಎಂಜಿನ್ 157 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ 65 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 130 ಕಿ.ಮೀ ರೇಂಜ್ ಅನ್ನು ಒದಗಿಸುತ್ತದೆ.

ಹೊಸ ವಿಎಲ್ಎಫ್ ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣವಾಗಿ ಚಾರ್ಜ್ ಮಾಡಲು ಮೂರು ಗಂಟೆಗಳ ಅವಧಿಯನ್ನು ತೆಗೆದುಕೊಳ್ಳುತ್ತದೆ. ವಿಎಲ್ಎಫ್ ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚಿನ ಆಕರ್ಷಕ ಸ್ಟೀಲ್ ಅನ್ನು ಹೊಂದಿದೆ ಮತ್ತು ಬ್ಯಾಟರಿಯನ್ನು ಒಳಗೊಂಡಿರುವ ಈ ಎಲೆಕ್ಟ್ರಿಕ್ ಸ್ಕೂಟರೆ ಕೇವಲ 88 ಕೆಜಿ ತೂಕವನ್ನು ಹೊಂದಿದೆ.
ಸಸ್ಪೆಕ್ಷನ್ ಸಿಸ್ಟಂ ಮತ್ತು ಬ್ರೇಕಿಂಗ್ ಸಿಸ್ಟಂ: ಸ್ಕೂಟರ್‌ನಲ್ಲಿ ಎರಡೂ ಕಡೆಗಳಲ್ಲಿ ವಿಎಲ್ಎಫ್ ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ನಲ್ಲಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಹೈಡ್ರಾಲಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಮೊನೊ ಶಾಕ್ ಅಬ್ಸಾರ್ಬರ್ ಸೆಟಪ್ ಅನ್ನು ಹೊಂದಿದೆ.

ಫೀಚರ್ಸ್: ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಐದು ಇಂಚಿನ ಡಿಜಿಟಲ್ TFT ಡಿಸ್ ಪ್ಲೇಯು VLF ಟೆನಿಸ್‌ಗೆ ಸ್ಪೀಡೋಮೀಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಹೊಸ VLF ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿಇಕೋ, ಕಂಫರ್ಟ್ ಮತ್ತು ಸ್ಪೋರ್ಟ್ ಎಂಬ ಮೂರು ಡ್ರೈವಿಂಗ್ ಮೋಡ್‌ಗಳನ್ನು ಹೊಂದಿವೆ. ಈ ಸ್ಕೂಟರ್ 12-ಇಂಚಿನ ವ್ಹೀಳ್ ಗಳಲ್ಲಿ ಸವಾರಿ ಮಾಡುತ್ತದೆ.
ಬಣ್ಣಗಳ ಆಯ್ಕೆ: ವಿಎಲ್ಎಫ್ ಟೆನಿಸ್ 1500W ಎಲೆಕ್ಟ್ರಿಕ್ ಸ್ಕೂಟರ್ ಸ್ನೋಫ್ಲೇಕ್ ವೈಟ್, ಫೈರ್ ಫ್ಯೂರಿ ಡಾರ್ಕ್ ರೆಡ್ ಮತ್ತು ಸ್ಲೇಟ್ ಗ್ರೇ ಎಂಬ ಬಣ್ಣಗಳ ಆಯ್ಕೆಗಳನ್ನು ಹೊಂದಿವೆ. ವಿಎಲ್ಎಫ್ ವ್ಯಾಪಕವಾದ ಡೀಲರ್‌ಶಿಪ್ ನೆಟ್‌ವರ್ಕ್ ಅನ್ನು ಸ್ಥಾಪಿಸುವ ಮೂಲಕ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಆರಂಭದಲ್ಲಿ ಶ್ರೇಣಿ-1 ಮತ್ತು ಶ್ರೇಣಿ-2 ನಗರಗಳಾದ್ಯಂತ 15 ಡೀಲರ್‌ಶಿಪ್‌ಗಳನ್ನು ಯೋಜಿಸುತ್ತಿದೆ.

ಈ ಕಂಪನಿಯು ಹಣಕಾಸಿನ ವರ್ಷದ ಅಂತ್ಯದ ವೇಳೆಗೆ ಈ ಸಂಖ್ಯೆಯನ್ನು 50ಕ್ಕೆ ವಿಸ್ತರಿಸುವ ಗುರಿಯನ್ನು ಹೊಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ವಿಎಲ್ಎಫ್ ಟೆನಿಸ್ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಶಕ್ತಿಶಾಲಿ 4000W ರೂಪಾಂತರದಲ್ಲಿ ಬರುತ್ತದೆ. ಈ ಆವೃತ್ತಿಯು 232 Nm ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಇದರ ಟಾಪ್ ಸ್ಪೀಡ್ 100 ಕಿ.ಮೀ ಆಗಿದೆ. ಇದು ಸ್ವಲ್ಪ ದೊಡ್ಡದಾದ 2.8 kWh ಬ್ಯಾಟರಿಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








