ಸೆಲೆಬ್ರಿಟಿಗಳು ಮಾತ್ರವಲ್ಲ ಸಾಮಾನ್ಯರು ಈ ಪ್ರಖ್ಯಾತ 'Harley Davidson' ಬೈಕ್ ಖರೀದಿಸಬಹುದು, ಇಷ್ಟು ದುಡ್ಡು ಸಾಕು!
ಅಮೆರಿಕ ಮೂಲದ ಹಾರ್ಲೆ ಡೇವಿಡ್ಸನ್ (Harley Davidson) ಪ್ರೀಮಿಯಂ ಮೋಟಾರ್‌ಸೈಕಲ್ ತಯಾರಿಕೆಗೆ ಹೆಸರುವಾಸಿಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ವಿವಿಧ ಬೈಕ್‌ಗಳನ್ನು ಮಾರಾಟಗೊಳಿಸುತ್ತದೆ. ಈ ಮೋಟಾರ್‌ಸೈಕಲ್‌ಗಳು ಕೊಂಚ ದುಬಾರಿ ಬೆಲೆಯೊಂದಿಗೆ ಹೆಚ್ಚು ಐಷಾರಾಮಿ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಶ್ರೀಮಂತ ಉದ್ಯಮಿಗಳು, ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಕರು ಮುಗಿಬಿದ್ದು ಖರೀದಿ ಮಾಡುತ್ತಾರೆ. ಆದರೆ, ಈ 'ಹಾರ್ಲೆ ಡೇವಿಡ್ಸನ್ ಎಕ್ಸ್440' ಬೈಕ್‌ನ್ನು ಸಾಮಾನ್ಯ ಗ್ರಾಹಕರು ಕೂಡ ಸುಲಭವಾಗಿ ಮನೆಗೆ ತರಬಹುದು. ಬನ್ನಿ.. ಮೋಟಾರ್‌ಸೈಕಲ್ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ನೂತನ ಹಾರ್ಲೆ ಡೇವಿಡ್ಸನ್ ಎಕ್ಸ್440 (Harley Davidson X440) ಬೈಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.2.39 ಲಕ್ಷ ಹಾಗೂ ಗರಿಷ್ಠ ರೂ.2,79 ಲಕ್ಷ ಎಕ್ಸ್ ಶೋರೂಂ (ದೆಹಲಿ) ದರವನ್ನು ಪಡೆದಿದೆ. ಡಾರ್ಕ್ ಸಿಲ್ವರ್ & ಥಿಕ್ ರೆಡ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಈ ಮೋಟಾರ್‌ಸೈಕಲ್ 440 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 27.37 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 38 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, ಸರಿ ಸುಮಾರು 35 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೊಸ ಹಾರ್ಲೆ ಡೇವಿಡ್ಸನ್ ಎಕ್ಸ್440 ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಪ್ರಮುಖವಾಗಿ ಎಲ್ಇಡಿ - ಲೈಟಿಂಗ್ ಸೆಟಪ್, ಆಂಬಿಯೆಂಟ್ ಲೈಟ್, ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್ & ಮ್ಯೂಸಿಕ್ ಕಂಟ್ರೋಲ್‌ಗಳನ್ನು ಒಳಗೊಂಡಿದೆ.

ನೂತನ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) 43 ಎಂಎಂ ಯುಎಸ್‌ಡಿ ಡುಯಲ್ ಕಾರ್ಟ್ರಿಡ್ಜ್ ಪೋರ್ಕ್ಸ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಸಸ್ಪನ್ಷನ್ ಸೆಟಪ್ ಅನ್ನು ಹೊಂದಿದೆ. ಸವಾರರ ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. 190.5 ಕೆಜಿ ತೂಕವಿರುವ ಈ ಬೈಕ್, 13.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.
ದೇಶೀಯ ಮಾರುಕಟ್ಟೆಯಲ್ಲಿ 'ಎಕ್ಸ್440' ಮಾತ್ರವಲ್ಲದೆ, ವಿವಿಧ ಹಾರ್ಲೆ ಡೇವಿಡ್ಸನ್ ಕಂಪನಿಯ ಮೋಟಾರ್‌ಸೈಕಲ್‌ಗಳು ಕೂಡ ಖರೀದಿಗೆ ಲಭ್ಯವಿವೆ. ಅವುಗಳಲ್ಲಿ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ (Harley Davidson Sportster S) ಪ್ರಮುಖವಾಗಿದ್ದು, ಇದು ರೂ.16.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1252 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 19.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹಾರ್ಲೆ ಡೇವಿಡ್ಸನ್ ನೈಟ್‌ಸ್ಟರ್ (Harley Davidson Nightster) ಬಗ್ಗೆ ಹೇಳುವುದಾದರೆ, ಈ ಬೈಕ್ ರೂ.13.39 ಲಕ್ಷದಿಂದ ರೂ.14.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 975 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 19.6 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಕಡೆಯದಾಗಿ ಹಾರ್ಲೆ ಡೇವಿಡ್ಸನ್ ಫ್ಯಾಟ್ ಬಾಬ್ 114 (Harley Davidson Fat Bob 114) ಮೋಟಾರ್‌ಸೈಕಲ್ ಕುರಿತಂತೆ ಮಾತನಾಡುವುದಾದರೆ, ಇದು ರೂ.21.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1868 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 18.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








