Ola: ಭಾರೀ ವೇಗದಲ್ಲಿ ಮುನ್ನುಗ್ಗುತ್ತಿದೆ ಓಲಾ, ಮತ್ತೆ ನಂಬರ್ 1 ಪಟ್ಟಕ್ಕೆ.. ರೂ.74,999ಕ್ಕೆ ಹೊಸ ಸ್ಕೂಟರ್!

ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric) ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದು, ತಿಂಗಳಿನಿಂದ ತಿಂಗಳಿಗೆ ಕಂಪನಿಯ 'ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಶನಿವಾರ ಮೇ ತಿಂಗಳ ಮಾರಾಟದ ಅಂಕಿಅಂಶವನ್ನು ಓಲಾ ಪ್ರಕಟಿಸಿದ್ದು, ಈ ಬಾರಿಯೂ ದೊಡ್ಡ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ಮಾರಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ವಾಹನ್ ಪೋರ್ಟಲ್ (Vahan portal) ಪ್ರಕಾರ, ಓಲಾ ಎಲೆಕ್ಟ್ರಿಕ್ ಕಳೆದ ತಿಂಗಳು (ಮೇ, 2024) ಬರೋಬ್ಬರಿ 37,191 ಯುನಿಟ್ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಅದೇ 2023ರ ಮೇ ತಿಂಗಳಿಗೆ ಹೋಲಿಕೆ ಮಾಡಿದರೆ (35,000 ಯುನಿಟ್) ಶೇಕಡ 6.26% ಬೆಳವಣಿಗೆ ಸಾಧಿಸಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಒಟ್ಟಾರೆ 49% ಪಾಲನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

ola electric growth 6 26 percent sales growth in may 2024 s1x e-scooter starting price rs 74 999

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಒಲಾದ ಚೀಫ್ ಮಾರ್ಕೆಟಿಂಗ್ ಆಫೀಸರ್ ಅಂಶುಲ್ ಖಂಡೇಲ್ವಾಲ್ ಅವರು, 'ನಾವು ದ್ವಿಚಕ್ರ ವಾಹನ ವಿಭಾಗವನ್ನು ಎಲೆಕ್ಟ್ರಿಕ್ ವಾಹನಗಳಿಂದ ಪರಿವರ್ತಿಸಲು ಶ್ರಮಪಡುತ್ತಿದ್ದೇವೆ. ಅದರ ಭಾಗವಾಗಿ ಈ ಬಾರಿಯೂ ಸ್ಥಿರವಾದ ಪ್ರಗತಿಯನ್ನು ಸಾಧಿಸಿದ್ದೇವೆ. ಇತ್ತೀಚಿಗೆ ಎಸ್1 ಎಕ್ಸ್ ವಿತರಣೆಯನ್ನು ಆರಂಭಿಸಿದ್ದು, ಉದ್ಯಮವನ್ನು ಬೆಳೆಸಲು ಮತ್ತಷ್ಟು ಶಕ್ತಿಮೀರಿ ಪ್ರಯತ್ನಿಸುತ್ತೇವೆ' ಎಂದು ಹೇಳಿದ್ದಾರೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಓಲಾ ಎಸ್1 ಎಕ್ಸ್ (Ola S1 X+) ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್, ರೂ.74,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್ ನಲ್ಲಿ 91 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ola electric growth 6 26 percent sales growth in may 2024 s1x e-scooter starting price rs 74 999

ಓಲಾ ಎಸ್1 ಎಕ್ಸ್‌ನ 3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ರೂ.89,999 ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ. ಪೂರ್ತಿ ಚಾರ್ಜ್ ನಲ್ಲಿ 151 ಕಿ.ಮೀ ಓಡಲಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿ ಒಳಗೊಂಡಿರುವ ಆವೃತ್ತಿಯು ರೂ.99,999 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. ಭರ್ತಿ ಚಾರ್ಜ್ ನಲ್ಲಿ 190 ಕಿಲೋಮೀಟರ್ ಕ್ರಮಿಸುತ್ತದೆ.

ಮಿಡ್ ಲೆವೆಲ್ ಮಾಡೆಲ್ (ಮಧ್ಯಮ ಆವೃತ್ತಿ) ಓಲಾ ಎಸ್1 ಏರ್ (Ola S1 Air) ಎಲೆಕ್ಟ್ರಿಕ್ ಸ್ಕೂಟರ್‌, 3 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ರೂ.1,04,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್ ನಲ್ಲಿ 151 ಕಿ.ಮೀ ರೇಂಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ವೀಡ್ (ಗರಿಷ್ಠ ವೇಗ) ಪಡೆದಿದೆ.

ಟಾಪ್ ಎಂಡ್ ಮಾಡೆಲ್ ಓಲಾ ಎಸ್1 ಪ್ರೊ (Ola S1 Pro) ರೂ.1,29,999 ದರದಲ್ಲಿ (ಎಕ್ಸ್ ಶೋರೂಂ) ಖರೀದಿಗೆ ಲಭ್ಯವಿದೆ. ಇದು 4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್ ನಲ್ಲಿ 195 ಕಿಲೋಮೀಟರ್ ಓಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ವೀಡ್ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, June 2, 2024, 10:30 [IST]
English summary
Ola electric growth 6 26 percent sales growth in may 2024 s1x e scooter starting price rs 74999
Read more on ola electric india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+