Ola: ಮತ್ತೆ ಪುಟಿದೆದ್ದ ಕಂಪನಿ.. ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಓಲಾ ಇ-ಸ್ಕೂಟರ್‌ಗಳು ಮಾರಾಟ!
ಬೆಂಗಳೂರಿನ ಓಲಾ ಎಲೆಕ್ಟ್ರಿಕ್ (Ola Electric) ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಭಾರತದಲ್ಲಿ ಕಂಪನಿ ಮಾರಾಟಗೊಳಿಸುವ ಎಸ್1 ಸರಣಿ (S1 Series) ಇ-ಸ್ಕೂಟರ್‌ಗಳನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಓಲಾ ಶುಕ್ರವಾರ ಅಕ್ಟೋಬರ್ (2024) ತಿಂಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದೆ. ದಸರಾ ಹಾಗೂ ದೀಪಾವಳಿ ಹಬ್ಬಗಳು ಕಂಪನಿಗೆ ವರವಾಗಿದ್ದು, ಮಾರಾಟದಲ್ಲಿ ಹೊಸದೊಂದು ದಾಖಲೆ ನಿರ್ಮಾಣ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಅಕ್ಟೋಬರ್ 2024) ಓಲಾ ಎಲೆಕ್ಟ್ರಿಕ್, 50,000 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಅದರಲ್ಲಿ ಸರಿ ಸುಮಾರು 41,605 ಸ್ಕೂಟರ್‌ಗಳನ್ನು ಗ್ರಾಹಕರು ನೋಂದಣಿ ಮಾಡಿದ್ದಾರೆ. ಈ ಮೂಲಕ ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಂಪನಿಯು ಶೇಕಡ 30% ಪಾಲನ್ನು ಹೊಂದಿದ್ದು, ತನ್ನ ಪ್ರಾಬಲ್ಯ ಮುಂದುವರಿಸಿದೆ.

ಅಕ್ಟೋಬರ್ 14 ರವರೆಗೆ ಓಲಾ ಎಲೆಕ್ಟ್ರಿಕ್ 15,672 ಯುನಿಟ್ ಎಸ್1 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿತ್ತು. ಅದೇ ಸೆಪ್ಟೆಂಬರ್‌ನಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ್ದ ಕಂಪನಿಯು 23,965 ಯುನಿಟ್ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸಲು ಮಾತ್ರ ಯಶಸ್ವಿಯಾಗಿತ್ತು. ಓಲಾ ಕೈಗೊಂಡ ಕ್ರಾಂತಿಕಾರಕ ಕ್ರಮಗಳಿಂದಾಗಿ ಇಷ್ಟೊಂದು ದೊಡ್ಡಮಟ್ಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಓಲಾ ಎಲೆಕ್ಟ್ರಿಕ್, ಮಾರಾಟ ಪ್ರಮಾಣ ದ್ವಿಗುಣಗೊಳಿಸಲು 'ಬಿಗ್ಗೆಸ್ಟ್ ಓಲಾ ಸೀಸನ್ ಸೇಲ್' ಎಂಬ ಯೋಜನೆ ಶುರು ಮಾಡಿತ್ತು. ಇದರಡಿಯಲ್ಲಿ ವಿವಿಧ ಹಣಕಾಸಿನ ಪ್ರಯೋಜನಗಳನ್ನು ನೀಡಲಾಗಿತ್ತು. 'ಹೈಪರ್ ಸರ್ವಿಸ್' ಹೆಸರಿನ ಅಭಿಯಾನವು ಓಲಾ ಮೇಲೆ ಗ್ರಾಹಕರ ವಿಶ್ವಾಸವನ್ನು ಅಧಿಕಗೊಳಿಸಿತು. ಈ ಅಭಿಯಾನದ ಭಾಗವಾಗಿ ಕಂಪನಿಯು 2024 ರ ಡಿಸೆಂಬರ್‌ನೊಳಗೆ ಸರ್ವಿಸ್ ಸೆಂಟರ್‌ಗಳ ಸಂಖ್ಯೆಯನ್ನು 1,000ಕ್ಕೆ ಹೆಚ್ಚಿಸಲು ನಿರ್ಧಾರವನ್ನು ಮಾಡಿತ್ತು.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಓಲಾ ಎಸ್1 ಸರಣಿಯ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳು ಖರೀದಿಗೆ ಲಭ್ಯವಿವೆ. 'ಎಸ್1ಎಕ್ಸ್' ಇ- ಸ್ಕೂಟರ್ ಅತಿಕಡಿಮೆ ಬೆಲೆಯನ್ನು ಹೊಂದಿದೆ. ಇದು ರೂ.74,999 (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿದೆ. 2 ಕೆಡಬ್ಲ್ಯೂಹೆಚ್, 3 ಕೆಡಬ್ಲ್ಯೂಹೆಚ್ ಮತ್ತು 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ರಿಂದ 193 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.1,07,499 ಎಕ್ಸ್ ಶೋರೂಂ ದರವನ್ನು ಹೊಂದಿದೆ. 3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 151 ಕಿಲೋಮೀಟರ್‌ವರೆಗೆ ಓಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 5.5 ಸೆಕೆಂಡುಗಳಲ್ಲಿ 0-60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಓಲಾ ಎಸ್1 ಪ್ರೊ ಕುರಿತಂತೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1,14,999 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 195 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. 120 ಟಾಪ್ ಸ್ಪೀಡ್‌ನ್ನು ಪಡೆದಿದೆ. ಜೆಟ್‌ಬ್ಲಾಕ್, ಮ್ಯಾಟ್ ವೈಟ್ ಮತ್ತು ಸ್ಟೆಲ್ಲರ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಇನ್ನು, ಈ ದಸರಾ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆ ಅಕ್ಟೋಬರ್ ತಿಂಗಳು ಓಲಾ ಕಂಪನಿಗೆ ವರವಾಗಿ ಪರಿಣಮಿಸಿದೆ. ಇದರಿಂದ ಎಸ್1 ಸರಣಿ ಸ್ಕೂಟರ್‌ಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿವೆ. ಕಂಪನಿ ಕೈಗೊಂಡಿರುವ ಕ್ರಮಗಳಿಂದ ನವೆಂಬರ್‌ನಲ್ಲಿಯೂ ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








