Ola: ಬೆಂಗಳೂರಿನ ಓಲಾಗೆ ಸರಿ ಸಾಟಿಯೇ ಇಲ್ಲ.. ಮತ್ತೆ ನಂಬರ್ 1, ರೂ.74,999ಕ್ಕೆ ಹೊಸ ಸ್ಕೂಟರ್ ಬರುತ್ತೆ!

ದೇಶದ ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric) ಮನೆ ಮಾತಾಗಿದೆ. ಆಕರ್ಷಕ ವಿನ್ಯಾಸ (Design) ಮತ್ತು ವೈಶಿಷ್ಟ್ಯ (Feature)ವನ್ನು ಹೊಂದಿರುವ 'ಎಸ್1' ಸರಣಿ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಓಲಾ ಕಂಪನಿಯು ಸೋಮವಾರ 'ಜೂನ್ - 2024' ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಬೆಳವಣಿಗೆ ಸಾಧಿಸಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸರ್ಕಾರಿ ಸ್ವಾಮ್ಯದ ವಾಹನ್ ಪೋರ್ಟಲ್ (Vahan Portal) ಪ್ರಕಾರ, ಓಲಾ ಎಲೆಕ್ಟ್ರಿಕ್ ಕಳೆದ ತಿಂಗಳು (ಜೂನ್, 2024) ಬರೋಬ್ಬರಿ 36,716 ಯುನಿಟ್ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸಿದೆ. 2023ರ ಜೂನ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 107% ಪ್ರಗತಿ ಕಂಡಿದೆ. ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿಯೂ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದು, ಶೇಕಡ 46% ಪಾಲನ್ನು ಹೊಂದಿದೆ.

Ola Electric Sales Report In June 2024 107 Percent Growth New Scooters Price Rs 74 999

ಈ ಕುರಿತಂತೆ ಮಾತನಾಡಿರುವ ಓಲಾದ ಚೀಫ್ ಮಾರ್ಕೆಟಿಂಗ್ ಆಫೀಸರ್ ಅಂಶುಲ್ ಖಂಡೇಲ್ವಾಲ್ ಅವರು, 'ನಾವು ಸತತ 7 ತ್ರೈಮಾಸಿಕಗಳಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಅಗ್ರಸ್ಥಾನದಲ್ಲಿದ್ದೇವೆ. ಇದು ಎಸ್1 ಸರಣಿ ಸ್ಕೂಟರ್‌ಗಳ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಭಾರತದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಉದ್ಯಮ ಬೆಳವಣಿಗೆಗೆ ಮಹತ್ತರವಾದ ಕೊಡುಗೆ ನೀಡುವ ಕೆಲಸವನ್ನು ಮುಂದುವರಿಸುತ್ತೇವೆ' ಎಂದು ಹೇಳಿದ್ದಾರೆ.

ಸದ್ಯ ಓಲಾ ಎಲೆಕ್ಟ್ರಿಕ್ ದೇಶೀಯವಾಗಿ ಮಾರಾಟ ಮಾಡುವ ಎಸ್1ಎಲೆಕ್ಟ್ರಿಕ್ ಸ್ಕೂಟರ್‌ಗಳ ಸಂಕ್ಷಿಪ್ತ ವಿವರವನ್ನು ತಿಳಿಯೋಣ. ಮೊದಲಿಗೆ ಓಲಾ ಎಸ್1 ಎಕ್ಸ್ ಪ್ಲಸ್ (Ola S1 X+) ಇ- ಸ್ಕೂಟರ್‌ ಬಗ್ಗೆ ಹೇಳುವುದಾದರೆ, ಇದು ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. 2 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿರುವ ಮಾದರಿಯು ರೂ.74,999 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 91 ಕಿ.ಮೀ ಓಡುತ್ತದೆ.

Ola Electric Sales Report In June 2024 107 Percent Growth New Scooters Price Rs 74 999

ಓಲಾ ಎಸ್1 ಎಕ್ಸ್‌ನ 3 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿರವ ರೂಪಾಂತರವು ರೂ.89,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 151 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದೆ. ಓಲಾ ಎಸ್1 ಎಕ್ಸ್‌ನ 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ರೂ.99,999 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 190 ಕಿ.ಮೀ ಕ್ರಮಿಸುತ್ತದೆ.

ಓಲಾ ಎಸ್1 ಏರ್ (Ola S1 Air) ಮಿಡ್ ಲೆವೆಲ್ ಮಾಡೆಲ್ (ಮಧ್ಯಮ ಶ್ರೇಣಿ ಆವೃತ್ತಿ) ಎಲೆಕ್ಟ್ರಿಕ್ ಸ್ಕೂಟರ್‌ ಆಗಿದ್ದು, ರೂ.1,06,499 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 3 ಕೆಡಬ್ಲ್ಯೂಹೆಚ್ (kWh) ಬ್ಯಾಟರಿಯನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 151 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ವೀಡ್ ಪಡೆದಿದೆ.

ಓಲಾ ಎಸ್1 ಪ್ರೊ (Ola S1 Pro) ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ ಆವೃತ್ತಿ) ಇ-ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.1,32,499 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 195 ಕಿ.ಮೀ ಕ್ರಮಿಸುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ವೀಡ್ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, July 1, 2024, 19:51 [IST]
English summary
Ola electric sales report june 2024 107 percent growth new scooters price rs 74999
Read more on ola electric india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+