ಪೆಟ್ರೋಲ್ ಬೈಕ್‌ಗೆ ಹೇಳಿ ಗುಡ್‍ಬೈ: ನಾಳೆ ಮೊದಲ ಓಲಾ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆ, ಬೆಲೆ ಇಷ್ಟೇನಾ?
ಭಾರತದ ನಂಬರ್ 1 ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಬೆಂಗಳೂರು (Bengaluru) ಮೂಲದ ಓಲಾ ಎಲೆಕ್ಟ್ರಿಕ್ (Ola Electric) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ವಿವಿಧ 'ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಇದೀಗ, ಮೋಟಾರ್‌ಸೈಕಲ್ ವಿಭಾಗಕ್ಕೂ ಲಗ್ಗೆ ಇಡಲು ಮುಂದಾಗಿದೆ. ನಾಳೆ (ಆಗಸ್ಟ್ 15) ಓಲಾ ಕಂಪನಿ ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ತನ್ನ ತಯಾರಿಕಾ ಘಟಕದಲ್ಲಿ ಸಂಕಲ್ಪ್-2024 (Sankalp-2024) ಕಾರ್ಯಕ್ರಮ ಆಯೋಜಿಸಿದೆ. ಇಲ್ಲಿ ಮೊದಲ ಎಲೆಕ್ಟ್ರಿಕ್ ಬೈಕ್‌ನ್ನು ಬಿಡುಗಡೆಗೊಳಿಸಿದೆ ಎಂದು ತಿಳಿದುಬಂದಿದೆ.
ಸಿಇಒ ಭವಿಶ್ ಅಗರ್ವಾಲ್ (Bhavish Aggarwal) ನೇತೃತ್ವದ ಓಲಾ ಕಂಪನಿಗೆ ಈ ಸಮಾರಂಭ ತುಂಬಾ ಮಹತ್ವವಾಗಿದೆ. ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೊಸ ಶಕೆ ಆರಂಭವಾದರೂ ಅಚ್ಚರಿಯಿಲ್ಲ. ನೂತನ ಮೋಟಾರ್‌ಸೈಕಲ್ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಬಹಿರಂಗಗೊಂಡಿಲ್ಲ. ಆದಾಗ್ಯೂ ಓಲಾ, ಸಾಮಾಜಿಕ ಜಾಲತಾಣದಲ್ಲಿ ಹಲವು ಟೀಸರ್‌ಗಳನ್ನು ಬಹಿರಂಗಪಡಿಸುವ ಮೂಲಕ ಗ್ರಾಹಕರ ಕುತೂಹಲವನ್ನು ಹೆಚ್ಚಿಸಿದೆ.

ಈ ಟೀಸರ್‌ಗಳು ನೂತನ ಓಲಾ ಎಲೆಕ್ಟ್ರಿಕ್ ಬೈಕ್, ಡುಯಲ್-ಪಾಡ್ ಎಲ್‌ಇಡಿ ಹೆಡ್‌ಲ್ಯಾಂಪ್, ಕೆಟಿಎಂ ಮೋಟಾರ್‌ಸೈಕಲ್ ಆಧಾರಿತ ಟರ್ನ್-ಇಂಡಿಕೇಟರ್‌ಗಳು, ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್ ಸೆಟಪ್, ದೊಡ್ಡದಾದ ಬ್ಯಾಟರಿ ಪ್ಯಾಕ್ ಒಳಗೊಂಡಿರಬಹುದು ಎಂಬ ಸುಳಿವನ್ನು ನೀಡುತ್ತಿವೆ. ಈ ಬೈಕ್‌ಗೆ ಟಾರ್ಕ್ ಕ್ರಾಟೋಸ್ ಆರ್ ಮತ್ತು ಅಲ್ಟ್ರಾವೈಲೆಟ್ ಎಫ್77ನಂತಹ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ ಎಂದು ಅಂದಾಜಿಸಲಾಗಿದೆ.
ಓಲಾ ಕಂಪನಿಯು ಬಿಡುಗಡೆಗೊಳಿಸುವ ಈ ಎಲೆಕ್ಟ್ರಿಕ್ ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಸರಿ ಸುಮಾರು ರೂ.1.5 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎನ್ನಲಾಗಿದೆ. ನಾಳೆ (ಗುರುವಾರ) ನೂತನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಬೆಲೆ, ವಿನ್ಯಾಸ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸ್ಪಷ್ಟವಾದ ಮಾಹಿತಿ ಸಿಗಲಿದೆ.
ಸದ್ಯ, ಓಲಾ ದೇಶೀಯವಾಗಿ ಹಲವು ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಓಲಾ ಎಸ್1 ಎಕ್ಸ್ ಪ್ಲಸ್ (Ola S1 X+) ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ಆಗಿದ್ದು, ಹಲವು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯುತ್ತದೆ. ಭರ್ತಿ ಚಾರ್ಜ್‌ನಲ್ಲಿ 91 ರಿಂದ 151 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ರೂ.74,999 ದಿಂದ ರೂ.99,999 ಎಕ್ಸ್ ಶೋರೂಂ ದರವನ್ನು ಹೊಂದಿದೆ.
ಓಲಾ ಎಸ್1 ಏರ್ (Ola S1 Air) ಎಲೆಕ್ಟ್ರಿಕ್ ಸ್ಕೂಟರ್, ಮಧ್ಯಮ ಶ್ರೇಣಿ ರೂಪಾಂತರ (ಮಿಡ್ ಲೆವೆಲ್ ವೇರಿಯೆಂಟ್) ಆಗಿದೆ. ರೂ.1,01,499 (ಎಕ್ಸ್ ಶೋರೂಂ) ದರವನ್ನು ಖರೀದಿಗೆ ಲಭ್ಯವಿದೆ. 3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 151 ಕಿಲೋಮೀಟರ್ ಓಡುತ್ತದೆ. ಜೊತೆಗೆ ಟಾಪ್ ಸ್ಪೀಡ್ 90 ಕೆಎಂಪಿಹೆಚ್ ಇದೆ.
ಓಲಾ ಎಸ್1 ಪ್ರೊ (Ola S1 Pro) ಎಲೆಕ್ಟ್ರಿಕ್ ಸ್ಕೂಟರ್, ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ಎಂದು ಹೆಸರುವಾಸಿಯಾಗಿದೆ. ರೂ.1,28,999 ಎಕ್ಸ್ ಶೋರೂಂ ದರವನ್ನು ಪಡೆದಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 195 ಕಿಲೋಮೀಟರ್ ಕ್ರಮಿಸುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದ್ದು, ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








