ಪೆಟ್ರೋಲ್‌ಗೆ ಹೇಳಿ ಟಾಟಾ ಬೈ ಬೈ..! ಓಲಾ ರೋಡ್‌ಸ್ಟರ್ ಎಲೆಕ್ಟ್ರಿಕ್ ಬೈಕ್ ಬಂದಿದೆ.. 75,000ಕ್ಕೆ ಸಿಗುತ್ತೆ, ಹೇಗಿದೆ?

ಬೆಂಗಳೂರು (Bengaluru) ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಗುರುವಾರ (ಆಗಸ್ಟ್ 15) ಮೊದಲ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ರೋಡ್‌ಸ್ಟರ್‌ನ್ನು (Roadster) ಆದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಇದು ರೋಡ್‌ಸ್ಟರ್ ಎಕ್ಸ್ (Roadster X), ರೋಡ್‌ಸ್ಟರ್ (Roadster) ಮತ್ತು ರೋಡ್‌ಸ್ಟರ್ ಪ್ರೊ (Roadster Pro) ಎಂಬ ಮೂರು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ರೋಡ್‌ಸ್ಟರ್ ಪ್ರೊ ರೂಪಾಂತರದ ವಿತರಣೆಯು ಮುಂದಿನ ವರ್ಷ ದೀಪಾವಳಿಯಲ್ಲಿ ಆರಂಭವಾಗಲಿದೆ. ರೋಡ್‌ಸ್ಟರ್ ಎಕ್ಸ್ ಹಾಗೂ ರೋಡ್‌ಸ್ಟರ್ ರೂಪಾಂತರಗಳು ಜನವರಿ 2025ರಿಂದ ಗ್ರಾಹಕರಿಗೆ ಸಿಗಲಿವೆ.

ಓಲಾ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಬೈಕ್ (Ola Roadster X electric bike): ಇದು ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ಆಗಿದ್ದು, 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್ ಮತ್ತು 4.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಲಭ್ಯವಿದೆ. ಕ್ರಮವಾಗಿ ರೂ.74,999, ರೂ.84,999 ಹಾಗೂ ರೂ.99,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Ola Roadster Electric Motorcycles Variant Wise Price And Features Details

ನೂತನ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಭರ್ತಿ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 124 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದೆ. ಕೇವಲ 2.8 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸುರಕ್ಷತೆಗಾಗಿ ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ

ಈ ಓಲಾ ರೋಡ್‌ಸ್ಟರ್ ಎಕ್ಸ್ ಬೈಕ್ ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 4.3-ಇಂಚಿನ ಎಲ್‌ಸಿಡಿ ಸೆಗ್ಮೆಂಟ್ ಡಿಸ್ಪ್ಲೇ, ಓಲಾ ಮ್ಯಾಪ್ ನ್ಯಾವಿಗೇಷನ್ (ಟರ್ನ್- ಬೈ-ಟರ್ನ್), ಕ್ರೂಸ್ ಕಂಟ್ರೋಲ್, ಡಿಐವೈ ಮೋಡ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಒಟಿಎ ಅಪ್ಡೇಟ್ಸ್, ಮೋಟಾರ್‌ಸೈಕಲ್ ಡಿಜಿಟಲ್ ಕೀ ಅನ್‌ಲಾಕ್ ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

Ola Roadster Electric Motorcycles Variant Wise Price And Features Details

ಓಲಾ ರೋಡ್‌ಸ್ಟರ್ ಎಲೆಕ್ಟ್ರಿಕ್ ಬೈಕ್ (Ola Roadster electric bike): ಇದನ್ನು ಮಧ್ಯಮ ಶ್ರೇಣಿ ರೂಪಾಂತರ (ಮಿಡ್ ಲೆವೆಲ್ ವೇರಿಯೆಂಟ್) ಎಂದು ಹೆಸರಿಸಬಹುದು. 3.5 ಕೆಡಬ್ಲ್ಯೂಹೆಚ್, 4.5 ಕೆಡಬ್ಲ್ಯೂಹೆಚ್ ಮತ್ತು 6 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ. ಕ್ರಮವಾಗಿ ರೂ.1,04,999, ರೂ.1,19,999 ಮತ್ತು ರೂ.1,39,999 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ.

ಈ ರೋಡ್‌ಸ್ಟರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಸಂಪೂರ್ಣ ಚಾರ್ಜ್‌ನಲ್ಲಿ 248 ಕಿಲೋಮೀಟರ್‌ವರೆಗೆ ಓಡುತ್ತದೆ. 126 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. 2.2 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಹೈಪರ್, ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ.

Ola Roadster Electric Motorcycles Variant Wise Price And Features Details

ಹೊಸ ರೋಡ್‌ಸ್ಟರ್ 6.8-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್, ಪ್ರಾಕ್ಸಿಮಿಟಿ ಅನ್‌ಲಾಕ್, ಕ್ರೂಸ್ ಕಂಟ್ರೋಲ್, ಪಾರ್ಟಿ ಮೋಡ್, ಟ್ಯಾಂಪರ್ ಅಲರ್ಟ್‌, ಸ್ಮಾರ್ಟ್‌ವಾಚ್ ಅಪ್ಲಿಕೇಶನ್, ರೋಡ್ ಟ್ರಿಪ್ ಪ್ಲಾನರ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸಲು ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದ್ದು, ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಓಲಾ ರೋಡ್‌ಸ್ಟರ್ ಪ್ರೊ ಎಲೆಕ್ಟ್ರಿಕ್ ಬೈಕ್ (Ola Roadster Pro electric bike): ಇದು ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ಆಗಿದ್ದು, 8 ಕೆಡಬ್ಲ್ಯೂಹೆಚ್ ಮತ್ತು 16 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಕ್ರಮವಾಗಿ ರೂ.1,99,999 ಮತ್ತು ರೂ.2,49,999 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

Ola Roadster Electric Motorcycles Variant Wise Price And Features Details

ನೂತನ ಓಲಾ ರೋಡ್‌ಸ್ಟರ್ ಪ್ರೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಪೂರ್ತಿ ಚಾರ್ಜ್‌ನಲ್ಲಿ 579 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 194 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. ಕೇವಲ 1.2 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಹೈಪರ್, ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಈ ರೋಡ್‌ಸ್ಟರ್ ಪ್ರೊ 10-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಜೊತೆಗೆ ಟೂ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, August 16, 2024, 10:35 [IST]
English summary
Ola roadster electric motorcycles variant wise price features details
Read more on ola electric india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+