Ola: ಬೆಂಗಳೂರಿನ ಓಲಾ ಎಸ್1 ಆಕ್ಟಿವಾವನ್ನು ಹಿಂದಿಕ್ಕಿ ನಂಬರ್ 1 ಪಟ್ಟಕ್ಕೆ ಬರುತ್ತಾ?

ಭಾರತದ ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಬೆಂಗಳೂರು (Bengaluru) ಮೂಲದ ಓಲಾ ಎಲೆಕ್ಟ್ರಿಕ್ (Ola Electric) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ವಿವಿಧ 'ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಜೂನ್​ ತಿಂಗಳ (2024) ಪ್ರಮುಖ ಸ್ಕೂಟರ್‌ಗಳ ಮಾರಾಟದ ಅಂಕಿಅಂಶಗಳು ಪ್ರಕಟಗೊಂಡಿತ್ತು. ಓಲಾ ಎಸ್1 ಸ್ಕೂಟರ್‌ಗಳು ಕೂಡ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿವೆ. ಮೊದಲ ಸ್ಥಾನದಲ್ಲಿ ಹೋಂಡಾ ಆಕ್ಟಿವಾ, ಎರಡನೇ ಸ್ಥಾನದಲ್ಲಿ ಟಿವಿಎಸ್ ಜುಪಿಟರ್ ಹಾಗೂ ಮೂರನೇ ಸ್ಥಾನದಲ್ಲಿ ಸುಜುಕಿ ಆಕ್ಸೆಸ್ ಸ್ಕೂಟರ್‌ಗಳಿವೆ.

ಕಳೆದ ಜೂನ್​ನಲ್ಲಿ 36,723 ಯುನಿಟ್ 'ಎಸ್1' ಸರಣಿ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಜೂನ್​ನಲ್ಲಿ ಮಾರಿದ 17,579 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ಶೇಕಡ 108.9% ಪ್ರಗತಿಯಾಗಿದೆ. ಈ ಮಾರಾಟದ ಅಂಕಿಅಂಶಗಳನ್ನು ಗಮನಿಸಿದಾಗ ಓಲಾ ಸ್ಕೂಟರ್‌ಗಳ ಜನಪ್ರಿಯತೆ ಎಷ್ಟಿದೆ ಎಂಬುದು ಸುಲಭವಾಗಿ ತಿಳಿಯುತ್ತದೆ. ಮುಂಬರುವ ತಿಂಗಳಲ್ಲಿ ಮೊದಲ ಸ್ಥಾನಕ್ಕೆ ಬಂದರೂ ಆಶ್ಚರ್ಯಪಡಬೇಕಾಗಿಲ್ಲ.

Ola S1 Sales Report June 2024 Rs 74 999 Starting Price

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಓಲಾ ಎಲೆಕ್ಟ್ರಿಕ್ ಹಲವು ವಿಧದ ಎಸ್1 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಎಸ್1 ಎಕ್ಸ್ ಪ್ಲಸ್ (S1 X+) ಇ-ಸ್ಕೂಟರ್‌ ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಆಗಿದ್ದು, ವಿವಿಧ ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಸ್ಕೂಟರ್, ರೂ.74,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 91 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಓಲಾ ಎಸ್1 ಎಕ್ಸ್‌ನ 3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರವು ರೂ.84,999 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 151 ಕಿಲೋಮೀಟರ್ ಓಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿರುವ ಮಾದರಿಯು ರೂ.99,999 (ಎಕ್ಸ್ ಶೋರೂಂ) ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಪೂರ್ತಿ ಚಾರ್ಜ್‌ನಲ್ಲಿ 190 ಕಿ.ಮೀ ಕ್ರಮಿಸುತ್ತದೆ.

Ola S1 Sales Report June 2024 Rs 74 999 Starting Price

ಓಲಾ ಎಸ್1 ಏರ್ (Ola S1 Air) ಎಲೆಕ್ಟ್ರಿಕ್ ಸ್ಕೂಟರ್‌ ಮಧ್ಯಮ ಶ್ರೇಣಿ ಮಾದರಿ (ಮಿಡ್ ಲೆವೆಲ್ ಮಾಡೆಲ್) ಆಗಿದೆ. ರೂ.1,01,499 ಎಕ್ಸ್ ಶೋರೂಂ ದರವನ್ನು ಪಡೆದಿದೆ. 3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 151 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ವೀಡ್ ಪಡೆದಿದೆ.

ಈ ಓಲಾ ಎಸ್1 ಏರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿವರ್ಸ್ ಮೋಡ್, ಹಿಲ್ ಹೋಲ್ಡ್ ಅಸಿಸ್ಟ್, ಫ್ಲಾಟ್ ಫುಟ್‌ಬೋರ್ಡ್, ಬೂಟ್ ಎಲ್ಇಡಿ ಲೈಟ್‌, 34-ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸ್ಟೋರೇಜ್ ಅನ್ನು ಹೊಂದಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ನ್ನು ಹೊಂದಿದೆ.

ಓಲಾ ಎಸ್1 ಪ್ರೊ (Ola S1 Pro) ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ಶ್ರೇಣಿ ಮಾದರಿ (ಟಾಪ್ ಎಂಡ್ ಮಾಡೆಲ್) ಆಗಿದ್ದು, ರೂ.1,28,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 195 ಕಿಲೋಮೀಟರ್ ಓಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ವೀಡ್ ಪಡೆದಿದ್ದು, ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, July 29, 2024, 20:08 [IST]
English summary
Ola s1 sales report june 2024 rs 74999 starting price
Read more on ola electric india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+