ಈ ಬೈಕ್‌ಗಳಿಗಾಗಿ ಯುವಕರು ಮುಗಿಬೀಳುವರು.. ಯಾವುವು ಗೊತ್ತಾ?
ಯುವಕರಿಗೆ ಪ್ರೀಮಿಯಂ ಬೈಕ್‌ಗಳ ಬಗ್ಗೆ ವಿಶೇಷ ಪ್ರೀತಿಯಿರುತ್ತದೆ. ಹೇಗಾದರೂ ಮಾಡಿ ಅಂತಹ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಬೇಕು ಎಂಬ ಆಸೆ ಹೊಂದಿರುತ್ತಾರೆ. ಆದರೆ, ಯಾವ ಬೈಕ್ ತೆಗೆದುಕೊಂಡರೆ ಉತ್ತಮ.. ವೈಶಿಷ್ಟ್ಯಗಳೇನು ಎಂಬುದರ ಕುರಿತಂತೆ ಹಲವರಿಗೆ ಗೊಂದಲವಿರುತ್ತದೆ. ಇಲ್ಲಿ ಪ್ರೀಮಿಯಂ ಬೈಕ್‌ಗಳಾದ ಹೀರೋ ಮಾವ್ರಿಕ್ 440 (Hero Mavrick 440), ಬಜಾಜ್ ಪಲ್ಸರ್ ಆರ್‌ಎಸ್ 200 (Bajaj Pulsar RS 200), ಟಿವಿಎಸ್ ಅಪಾಚೆ ಆರ್‌ಟಿಆರ್ 160 4ವಿ (TVS Apache RTR 160 4V) ಹಾಗೂ ಹೋಂಡಾ ಸಿಬಿ350 (Honda CB350) ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೀರೋ ಮಾವ್ರಿಕ್ 440 ಬೈಕ್ ಬಗ್ಗೆ ಮಾತನಾಡೋಣ. ಇದು ರೂ.1.99 ರಿಂದ ರೂ.2.24 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 440 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 27.36 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 36 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ನೂತನ ಹೀರೋ ಮಾವ್ರಿಕ್ 440 ಮೋಟಾರ್‌ಸೈಕಲ್ 36 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್, ಎಲ್ಇಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಬಜಾಜ್ ಪಲ್ಸರ್ ಆರ್‌ಎಸ್ 200 ಕೂಡ ಜನಪ್ರಿಯ ಬೈಕ್ ಆಗಿದ್ದು, ರೂ.1.74 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 199.5 ಸಿಸಿ ಲಿಕ್ವಿಡ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 24.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 18.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಹೊಸ ಪಲ್ಸರ್ ಆರ್‌ಎಸ್ 200 ಮೋಟಾರ್‌ಸೈಕಲ್, 35 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡುಯಲ್-ಪ್ರೊಜೆಕ್ಟರ್ ಹೆಡ್‌ಲೈಟ್ ಸೆಟಪ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಇಂಡಿಕೇಟರ್‌ಗಳು ಮತ್ತು ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ಅಪಾಚೆ ಆರ್‌ಟಿಆರ್ 160 4ವಿ ಮೋಟಾರ್‌ಸೈಕಲ್ ಕುರಿತಂತೆ ಹೇಳುವುದಾದರೆ, ಇದು ರೂ.1.20 ರಿಂದ ರೂ.1.37 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 159. 7 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17.55 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 14.73 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಟಿವಿಎಸ್ ಅಪಾಚೆ ಆರ್‌ಟಿಆರ್ 160 4ವಿ ಬೈಕ್, 41 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್ಇಡಿ ಹೆಡ್‌ಲೈಟ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳು ಹಾಗೂ ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಹೋಂಡಾ ಸಿಬಿ350 ಬೈಕ್ ಕುರಿತ ಮಾತನಾಡುವುದಾದರೆ, ಇದು ರೂ.2.15 ರಿಂದ ರೂ.2.18 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 348.36 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 21 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 29.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ನೂತನ ಹೋಂಡಾ ಸಿಬಿ350 ಮೋಟಾರ್‌ಸೈಕಲ್ 42.17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ- ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಮ್ಯಾಟ್ ಡ್ಯೂನ್ ಬ್ರೌನ್ & ಪ್ರೆಶಿಯಸ್ ರೆಡ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ (ಕಲರ್) ಸಿಗುತ್ತದೆ.


Click it and Unblock the Notifications