1.5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ ಪ್ರೀಮಿಯಂ ಬೈಕ್‌ಗಳಿವು.. ಇವುಗಳಿಗೆ ಸರಿ ಸಾಟಿಯೇ ಇಲ್ಲ!

ಪ್ರತಿಯೊಬ್ಬ ಯುವಕರಿಗೂ ಪ್ರೀಮಿಯಂ ಬೈಕ್ ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ, ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಸಾಧ್ಯವಾಗುದಿಲ್ಲ. ಇಲ್ಲಿ 1.5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ ಅತ್ಯಾಧುನಿಕ ಹೋಂಡಾ ಯುನಿಕಾರ್ನ್, ಬಜಾಜ್ ಪಲ್ಸರ್ ಎನ್ಎಸ್125, ಟಿವಿಎಸ್ ರೈಡರ್ 125 ಮೋಟಾರ್‌ಸೈಕಲ್ ಕುರಿತು ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಹೋಂಡಾ ಯುನಿಕಾರ್ನ್ (Honda Unicorn) ಬಗ್ಗೆ ಮಾತನಾಡೋಣ. ಈ ಬೈಕ್ ರೂ.1,09,800 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 162.71 ಸಿಸಿ, ಏರ್-ಕೋಲ್ಡ್, ಫ್ಯುಯೆಲ್ ಇಂಜೆಕ್ಟ್ದ್ ಎಂಜಿನ್ ಪಡೆದಿದ್ದು, 12.91 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 14.58 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 5-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

Premium Bikes Under 1 5 Lakh Honda Unicorn Bajaj Pulsar NS125 TVS Raider 125

ಈ ಹೋಂಡಾ ಯುನಿಕಾರ್ನ್ ಮೋಟಾರ್‌ಸೈಕಲ್, 60 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ & ಪರ್ಲ್ ಸೈರನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿಯೂ ಈ ಬೈಕ್ ಸಿಗಲಿದ್ದು, ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಅನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಬಜಾಜ್ ಪಲ್ಸರ್ ಎನ್ಎಸ್125 (Bajaj Pulsar NS125) ಬೈಕ್ ರೂ.1.05 ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 124.45 ಸಿಸಿ ಎಂಜಿನ್ ಹೊಂದಿದ್ದು, 11.99 ಪಿಎಸ್ ಪವರ್ ಮತ್ತು 11 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 64.75 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

Premium Bikes Under 1 5 Lakh Honda Unicorn Bajaj Pulsar NS125 TVS Raider 125

ಈ ಬಜಾಜ್ ಪಲ್ಸರ್ ಎನ್ಎಸ್125 ಮೋಟಾರ್‌ಸೈಕಲ್, ಫಿರಿ ಆರೆಂಜ್, ಬರ್ನ್ಟ್ ರೆಡ್, ಬೀಚ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್), ಹಿಂಭಾಗ (ರೇರ್) ಡಿಸ್ಕ್ ಬ್ರೇಕ್ ಅನ್ನು ಒಳಗೊಂಡಿದೆ. 805 ಎಂಎಂ ಸೀಟ್ ಹೈಟ್ ಇದ್ದು, 12-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್ ಅನ್ನು ಪಡೆದಿದೆ.

ಟಿವಿಎಸ್ ರೈಡರ್ 125 (TVS Raider 125) ಬೈಕ್ ರೂ.98,709 ದಿಂದ ರೂ.1.08 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದು 124.8 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 11.38 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 11.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಗೇರ್ ಬಾಕ್ಸ್ ಅನ್ನು ಪಡೆದಿದೆ.

Premium Bikes Under 1 5 Lakh Honda Unicorn Bajaj Pulsar NS125 TVS Raider 125

ಈ ಟಿವಿಎಸ್ ರೈಡರ್ 125 ಮೋಟಾರ್‌ಸೈಕಲ್, ಇಕೋ & ಸ್ಪೋರ್ಟ್ಸ್ ಎಂಬ ರೈಡಿಂಗ್ ಮೋಡ್ ಆಯ್ಕೆಯನ್ನು ಒಳಗೊಂಡಿದೆ. ಎಲ್ಇಡಿ ಹೆಡ್ ಲೈಟ್, ಎಲ್ಇಡಿ ಟೈಲ್ ಲೈಟ್, ಹ್ಯಾಲೊಜೆನ್ ಇಂಡಿಕೇಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದ್ದು, 71.94 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, April 14, 2024, 12:00 [IST]
English summary
Premium bikes under 1 5 lakh honda unicorn bajaj pulsar ns125 tvs raider 125
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+