ಪೆಟ್ರೋಲ್‌ಗೆ ಹೇಳಿ ಗುಡ್‌ಬೈ: ಪ್ರೀಮಿಯಂ ಎಲೆಕ್ಟ್ರಿಕ್ ಬೈಕ್‌ಗಳಿವು.. ಯುವಕರು ಮುಗಿಬಿದ್ದು ಖರೀದಿಸುವರು!
ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು (Electric Scooters) ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ, ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಪ್ರೀಮಿಯಂ ಎಲೆಕ್ಟ್ರಿಕ್ ಬೈಕ್‌ಗಳು (Electric Bikes) ಕೂಡ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. ನೀವು ಹೊಸ ಇ-ಮೋಟಾರ್‌ಸೈಕಲ್ ತೆಗೆದುಕೊಳ್ಳಬೇಕೇ.. ಹಾಗಾದರೆ, ಟಾರ್ಕ್ ಕ್ರಾಟೋಸ್ ಆರ್, ರಿವೋಲ್ಟ್ ಆರ್‌ವಿ1, ಮ್ಯಾಟರ್ ಏರಾ, ಕಬಿರಾ ಮೊಬಿಲಿಟಿ ಕೆಎಂ3000 ಹಾಗೂ ಅಲ್ಟ್ರಾವೈಲೆಟ್ ಎಫ್77 ಬೈಕ್‌ಗಳು ಉತ್ತಮ ಆಯ್ಕೆಯಾಗಲಿವೆ.
ಮೊದಲಿಗೆ ಟಾರ್ಕ್ ಕ್ರಾಟೋಸ್ ಆರ್ (Tork Kratos R) ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ರೂ.1.50 ರಿಂದ ರೂ.1.67 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 180 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಟಾರ್ಕ್ ಕ್ರಾಟೋಸ್ ಆರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 9 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 38 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಫುಲ್ ಡಿಜಿಟಲ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ ಕೇವಲ 1 ಗಂಟೆಯಲ್ಲಿ 80% ವರೆಗೆ ಚಾರ್ಜ್ ಆಗಿಬಿಡುತ್ತದೆ.
ರಿವೋಲ್ಟ್ ಆರ್‌ವಿ1 (Revolt RV1) ಬಗ್ಗೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಬೈಕ್ ರೂ.94,990 ರಿಂದ ರೂ.1.10 ಎಕ್ಸ್ ಶೋರೂಂ ದರವನ್ನು ಪಡೆದಿದೆ. 3.24 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 160 ಕಿಲೋಮೀಟರ್ ಓಡುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ (6-ಇಂಚು) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮ್ಯಾಟರ್ ಏರಾ (Matter Aera) ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕುರಿತಂತೆ ತಿಳಿಯುವುದಾದರೆ, ಇದು ರೂ.1.74 ರಿಂದ ರೂ.1.84 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 5 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 125 ಕಿಲೋಮೀಟರ್ ಕ್ರಮಿಸುತ್ತದೆ. ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ನ್ನು ಪಡೆದಿದೆ.
ಕಬೀರ ಮೊಬಿಲಿಟಿ (Kabira Mobility) ಮಾರಾಟ ಮಾಡುವ ಕೆಎಂ3000 (KM3000) ಎಲೆಕ್ಟ್ರಿಕ್ ಬೈಕ್, ರೂ.1.74 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 4.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 152 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ಅಲ್ಟ್ರಾವೈಲೆಟ್ ಎಫ್77 (Ultraviolette F77) ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಗ್ಗೆ ಮಾತನಾಡುವುದಾದರೆ, ಇದು ರೂ.2.99 ರಿಂದ ರೂ.3.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 7.1 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 211 ಕಿಲೋಮೀಟರ್ ಓಡುತ್ತದೆ. 155 ಟಾಪ್ ಸ್ಪೀಡ್‌ನ್ನು ಪಡೆದಿದೆ.
ಒಟ್ಟಾರೆಯಾಗಿ ಈ ಎಲೆಕ್ಟ್ರಿಕ್ ಬೈಕ್‌ಗಳು ಒಂದಕ್ಕಿಂತ ಒಂದು ಅದ್ಬುತವಾಗಿದ್ದು, ದಿನಬಳಕೆಗೂ ಹೆಚ್ಚು ಸೂಕ್ತವಾಗಿರುವುದರಿಂದ ಬಹುತೇಕ ಯುವಕರು ತಮ್ಮ ಆಯ್ಕೆಯಾಗಿ ದ್ವಿಚಕ್ರ ವಾಹನವಾಗಿ ಪರಿಗಣಿಸಬಹುದು. ಮುಂಬರವ ವರ್ಷಗಳಲ್ಲಿ ದೇಶದ ರಸ್ತೆಯಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳೇ ಇರಲಿದ್ದು, ಈಗಲೇ ನಿಮಿಷ್ಟದ ಇ-ಬೈಕ್‌ಗಳನ್ನು ಖರೀದಿ ಮಾಡಿಬಿಡಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications