Republic Day Discount: ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ರೂ.25,000 ರಿಯಾಯಿತಿ ಸೌಲಭ್ಯ

ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric), ದೇಶದ ನಂಬರ್ 1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಎಸ್1 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುವ ಮೂಲಕ ಜನಪ್ರಿಯತೆ ಗಳಿಸಿದ್ದು, ಗಣರಾಜ್ಯೋತ್ಸವ (Republic Day) ಪ್ರಯುಕ್ತ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ.

ಓಲಾ ಎಲೆಕ್ಟ್ರಿಕ್ ತನ್ನ ಎಸ್1 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ರೂ.25,000 ವರೆಗೆ ರಿಯಾಯಿತಿ ಸೌಲಭ್ಯವನ್ನು ನೀಡಿದೆ. ಈ ಆಫರ್, ಜನವರಿ 31 ರವರೆಗೆ ಮಾನ್ಯವಾಗಿರುತ್ತದೆ. ಗ್ರಾಹಕರು ವಿಸ್ತೃತ ವಾರಂಟಿ (Extended warranty) ಮೇಲೆ ಶೇಕಡ 50% ರಿಯಾಯಿತಿ ಪಡೆಯಬಹುದು. ಎಸ್1 ಪ್ರೊ ಹಾಗೂ ಎಸ್1 ಏರ್ ಸ್ಕೂಟರ್‌ಗೆ ರೂ.2,000 ವಿನಿಮಯ ಬೋನಸ್ (Exchange Bonus) ಲಭ್ಯವಿದೆ.

Republic Day 2024: Ola Electric Scooter Have Big Discount

ಅದೇ ರೀತಿಯಲ್ಲಿ ಆಯ್ದ ಕ್ರೆಡಿಟ್ ಕಾರ್ಡ್ ಇಎಂಐ (EMI) ಆಯ್ಕೆ ಮೇಲೆ ರೂ.5,000 ಡಿಸ್ಕೌಂಟ್ ಅನ್ನು ಹೊಂದಿದೆ. ಶೂನ್ಯ ಮುಂಗಡ ಪಾವತಿ, (Zero Down Payment), ಶೂನ್ಯ ಸಂಸ್ಕರಣಾ ಶುಲ್ಕ (Zero Processing Fee) ಮತ್ತು ಶೇಕಡ 7.99% ಕ್ಕಿಂತ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳು ದೊರೆಯಲಿದೆ. ಹೆಚ್ಚುವರಿಯಾಗಿ ಎಸ್1 ಎಕ್ಸ್ ಪ್ಲಸ್, ರೂ.20,000 ಫ್ಲಾಟ್ ರಿಯಾಯಿತಿಯೊಂದಿಗೆ ರೂ.89,999 ಆರಂಭಿಕ ಬೆಲೆಯಲ್ಲಿ ಸಿಗುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಎರಡನೇ ತಲೆಮಾರಿನ ಓಲಾ ಎಸ್1 ಪ್ರೊ ರೂ.1,47,499 ಬೆಲೆಯಲ್ಲಿ ದೊರೆಯುತ್ತದೆ. ಪೂರ್ತಿ ಚಾರ್ಜ್ ನಲ್ಲಿ 195 ಕಿ.ಮೀ ರೇಂಜ್ ನೀಡಲಿದ್ದು, 120 kmph ಟಾಪ್ ಸ್ವೀಡ್ ಹೊಂದಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 11 kW ಪೀಕ್ ಪವರ್ ಉತ್ಪಾದಿಸಲಿದ್ದು, 7 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದ್ದು, ಡಿಸ್ಕ್ ಬ್ರೇಕ್ ಆಯ್ಕೆಯಲ್ಲಿ ದೊರೆಯುತ್ತದೆ.

Republic Day 2024: Ola Electric Scooter Have Big Discount

ಓಲಾ ಎಸ್1 ಏರ್ ರೂ.1,19,999 ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇದರಲ್ಲಿ 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 151 ಕಿ.ಮೀ ರೇಂಜ್ ಕೊಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಹಬ್ ಮೋಟಾರ್ 6 kW ಪವರ್ ಹೊರಹಾಕುತ್ತದೆ. ಈ ಸ್ಕೂಟರ್ 90 kmph ಟಾಪ್ ಸ್ವೀಡ್ ಹೊಂದಿದ್ದು, 5.7 ಸೆಕೆಂಡುಗಳಲ್ಲಿ 0 - 60 kmph ವೇಗವನ್ನು ಪಡೆಯಲಿದೆ.

ಈ ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್, 7-ಇಂಚಿನ ಟಿಎಫ್‌ಟಿ ಸ್ಕ್ರೀನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ರಿವರ್ಸ್ ಮೋಡ್, ಒಟಿಎ ಅಪ್‌ಡೇಟ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸ್ಟೆಲ್ಲರ್ ಬ್ಲೂ, ಪೊರ್ಚೆಲೈನ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಫ್ರಂಟ್ ಟೆಲಿಸ್ಕೋಪಿಕ್ ಪೋರ್ಕ್ಸ್, ರೇರ್ ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಪಡೆದಿದ್ದು, ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಓಲಾ ಎಸ್1 ಪ್ಲಸ್ ಎಕ್ಸ್ ರೂಪಾಂತರಗಳಿಗೆ ಅನುಗುಣವಾಗಿ ರೂ.89,999 ರಿಂದ ರೂ.99,999 ಬೆಲೆಯಲ್ಲಿ ದೊರೆಯುತ್ತದೆ. ಆಸಕ್ತ ಗ್ರಾಹಕರು ರೂ.999 ಪಾವತಿಸಿ ಬುಕ್ಕಿಂಗ್ ಮಾಡಬಹುದು. ಈ ಸ್ಕೂಟರ್‌ನಲ್ಲಿ 6 kW ಸಾಮರ್ಥ್ಯದ ಮೋಟಾರ್‌ ಉಪಯೋಗಿಸಲಾಗಿದ್ದು, ಪೂರ್ತಿ ಚಾರ್ಜ್ ನಲ್ಲಿ 151 ಕಿ.ಮೀ ರೇಂಜ್ ಕೊಡುತ್ತದೆ. 3.3 ಸೆಕೆಂಡುಗಳಲ್ಲಿ 0-40 kmph ವೇಗವನ್ನು ಪಡೆಯಲಿದ್ದು, 90 kmph ವೇಗವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, January 28, 2024, 10:00 [IST]
English summary
Republic day 2024 ola electric scooters have big discount
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+