Royal Enfield: ಹೊಸ ಬಣ್ಣದೊಂದಿಗೆ ಬಂದ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಕುರಿತ ಪ್ರಮುಖಾಂಶಗಳಿವು!
ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ರಾಯಲ್ ಎನ್‌ಫೀಲ್ಡ್ (Royal Enfield) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಗುರುವಾರ ಹೊಸ ಬಣ್ಣದ ಆಯ್ಕೆಯೊಂದಿಗೆ ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಲಾಗಿದೆ. ಇಲ್ಲಿ ನೂತನ ಬೈಕ್‌ನ ಪ್ರಮುಖ ವಿಶೇಷತೆ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ & ಬಣ್ಣಗಳು: ಹೊಚ್ಚ ಹೊಸ 'ಬೆಟಾಲಿಯನ್ ಬ್ಲ್ಯಾಕ್' ಬಣ್ಣದೊಂದಿಗೆ ಮಾರಾಟಕ್ಕೆ ಬಂದಿರುವ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಸ್ಪರ್ಧಾತ್ಮಕ ದರದಲ್ಲಿಯೂ ಸಿಗುತ್ತದೆ. ರೂ.1,74,875 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ನೂತನ ಬಣ್ಣದೊಂದಿಗೆ ಮಿಲಿಟರಿ ಬ್ಲ್ಯಾಕ್, ಮಿಲಿಟರಿ ರೆಡ್, ಮಿಲಿಟರಿ ಸಿಲ್ವರ್ ಬ್ಲ್ಯಾಕ್ ಮತ್ತು ಮಿಲಿಟರಿ ಸಿಲ್ವರ್ ರೆಡ್ ಬಣ್ಣದ ಆಯ್ಕೆಯಲ್ಲಿಯೂ ಲಭ್ಯವಿದೆ.

ವಿನ್ಯಾಸ: ಬೆಟಾಲಿಯನ್ ಬ್ಲ್ಯಾಕ್ ಬಣ್ಣದೊಂದಿಗೆ ಬಂದಿರುವ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಮೋಟಾರ್‌ಸೈಕಲ್ ವಿನ್ಯಾಸದಲ್ಲಿ (ಡಿಸೈನ್) ಕೆಲವು ಸೂಕ್ಷ್ಮ ಮಾರ್ಪಾಡುಗಳನ್ನು ಮಾಡಲಾಗಿದೆ. ಐಕಾನಿಕ್ ರಾಯಲ್ ಎನ್‌ಫೀಲ್ಡ್ ಬ್ಯಾಡ್ಜಿಂಗ್‌ನೊಂದಿಗೆ ಫ್ಯುಯೆಲ್ (ಇಂಧನ) ಟ್ಯಾಂಕ್ ಮತ್ತು ಸೈಡ್ ಪ್ಯಾನೆಲ್‌ಗಳಲ್ಲಿ ಗೋಲ್ಡ್ ಪಿನ್‌ಸ್ಟ್ರೈಪ್‌ನ್ನು ಒಳಗೊಂಡಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸಹ ಹೊಂದಿದೆ.
ಕಾರ್ಯಕ್ಷಮತೆ: ನೂತನ ಬೈಕ್ ಪವರ್‌ಟ್ರೇನ್‌ನಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 349 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಜೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 20.4 ಬಿಹೆಚ್‍ಪಿ ಅಶ್ವ ಶಕ್ತಿ ಮತ್ತು 27 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ವೈಶಿಷ್ಟ್ಯಗಳು: ಈ ಮೋಟಾರ್‌ಸೈಕಲ್‌ನ ವೈಶಿಷ್ಟ್ಯಗಳನ್ನು (ಫೀಚರ್‌ಗಳು) ಕೂಡ ನವೀಕರಿಸಿಲ್ಲ. ಹ್ಯಾಲೊಜೆನ್ ಹೆಡ್‌ಲೈಟ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬಲ್ಬ್ ಟೈಪ್ ಇಂಡಿಕೇಟರ್‌ಗಳು ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬರೊಬ್ಬರಿ 195 ಕೆಜಿ ತೂಕವಿದ್ದು, 13 ಲೀಟರ್‌ನ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.
ವೀಲ್‌ಗಳು & ಟೈರ್‌ಗಳು: ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಮೋಟಾರ್‌ಸೈಕಲ್, ಮುಂದೆ (ಫ್ರಂಟ್) 19-ಇಂಚು ಹಾಗೂ ಹಿಂದೆ (ರೇರ್) 18-ಇಂಚಿನ ಸ್ಪೋಕ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಮುಂಭಾಗ 100-ಸೆಕ್ಷನ್ ಮತ್ತು ಹಿಂಭಾಗ 120-ಸೆಕ್ಷನ್ ಟೈರ್‌ಗಳನ್ನು ಹೊಂದಿದೆ. ವೀಲ್‌ಬೇಸ್ 1390 ಎಂಎಂ, ಸೀಟ್ ಹೈಟ್ 805 ಎಂಎಂ ಹಾಗೂ ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಇದೆ.

ಸಸ್ಪೆನ್ಷನ್ ಸೆಟಪ್, ಬ್ರೇಕಿಂಗ್ ಸಿಸ್ಟಮ್: ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. ಮುಂದೆ ಡಿಸ್ಕ್ ಮತ್ತು ಹಿಂದೆ ಡ್ರಮ್ ಬ್ರೇಕ್‌ನ್ನು ಹೊಂದಿದೆ. ಈ ಮೋಟಾರ್‌ಸೈಕಲ್‌ಗೆ ಹೋಂಡಾ ಸಿಬಿ350 ಹಾಗೂ ಜಾವಾ 350ಗಳು ನೇರವಾದ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








