ಇನ್ನೂ ಯುವತಿಯರು ಮುಗಿಬೀಳುವರು.. ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಅನಾವರಣ!

ರಾಯಲ್ ಎನ್‌ಫೀಲ್ಡ್ (Royal Enfield), ಪ್ರೀಮಿಯಂ ಮೋಟಾರ್‌ಸೈಕಲ್ ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ಲಾಸಿಕ್ 350, ಹಂಟರ್ 350, ಬುಲೆಟ್ 350, ಕಾಂಟಿನೆಂಟಲ್ ಜಿಟಿ 650 ಮತ್ತು ಸೂಪರ್ ಮೀಟಿಯರ್ 650 ಸೇರಿದಂತೆ ವಿವಿಧ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಕಂಪನಿಯು ಹೊಚ್ಚ ಹೊಸ ಗೋವಾನ್ ಕ್ಲಾಸಿಕ್ 350 (Goan Classic 350) ಮೋಟಾರ್‌ಸೈಕಲ್‌ನ್ನು ಅದ್ದೂರಿಯಾಗಿ ಅನಾವರಣಗೊಳಿಸಿದೆ. ಬನ್ನಿ.. ಈ ಬೈಕ್ ಹೇಗಿದೆ ಎಂಬುದನ್ನು ತಿಳಿಯೋಣ.

ನೂತನ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 (Royal Enfield Goan Classic 350) ಮೋಟಾರ್‌ಸೈಕಲ್‌ನ ವಿನ್ಯಾಸಕ್ಕೆ ಹೆಚ್ಚು ಒತ್ತು ನೀಡಲಿದೆ. ಈ ಬೈಕ್ ರೆಟ್ರೋ ಲುಕ್ ಹೊಂದಿದೆ. ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ಅಡ್ಜಸ್ಟಬಲ್ ಕ್ಲಚ್ & ಬ್ರೇಕ್ ಲಿವರ್‌ಗಳನ್ನು ಪಡೆದಿದೆ.

Royal Enfield Goan Classic 350 Motorcycle Unveiled Launch Soon Expected Price Details

ಇದರೊಟ್ಟಿಗೆ ಹೊಸ ಮೋಟಾರ್‌ಸೈಕಲ್‌ 'ಟಿಯರ್ ಡ್ರಾಪ್' ಆಕಾರಕ್ಕೆ ಹೋಲಿಕೆಯಾಗುವ ಫ್ಯುಯೆಲ್ (ಇಂಧನ) ಟ್ಯಾಂಕ್, ಕರ್ವ್ ಫೆಂಡರ್‌ಗಳು, 'ಏಪ್ - ಹ್ಯಾಂಗರ್' ರೀತಿಯಲ್ಲಿರುವ ಹ್ಯಾಂಡಲ್‌ಬಾರ್‌ಗಳು, ಫ್ಲೋಟಿಂಗ್ ಸೀಟ್, ಫಾರ್ವರ್ಡ್ - ಸೆಟ್ ಫುಟ್‌ಪೆಗ್‌ಗಳು, ಹಾಗೂ ಬಿಳಿ (ವೈಟ್) ಬಣ್ಣದಿಂದ ಸುತ್ತುವರೆದಿರುವ ಟೈರ್‌ಗಳನ್ನು ಪಡೆದಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಸಹ ಇದೆ.

ನೂತನ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಸೆಮಿ - ಡಿಜಿಟಲ್ ಕನ್ಸೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈ ಬೈಕ್ ಬರೋಬ್ಬರಿ 197 ಕೆಜಿ ತೂಕವಿದ್ದು, ಹಿಂಭಾಗದ (ರೇರ್) ಸೀಟನ್ನು ಅಳವಡಿಕೆ ಮಾಡಿದರೆ, 9 ಕೆಜಿ ತೂಕ ಹೆಚ್ಚಾಗುತ್ತದೆ.

Royal Enfield Goan Classic 350 Motorcycle Unveiled Launch Soon Expected Price Details

ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಮೋಟಾರ್‌ಸೈಕಲ್‌ ಸಹ 'ಕ್ಲಾಸಿಕ್ 350' ಬೈಕ್‌ನಲ್ಲಿ ಬಳಕೆ ಮಾಡಿರುವಂತೆ 349 ಸಿಸಿ, ಜೆ-ಸೀರೀಸ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿರಲಿದೆ. ಆದರೆ, ಕಾರ್ಯಕ್ಷಮತೆ ಕುರಿತಂತೆ ಯಾವುದೇ ವಿವರಗಳು ಬಹಿರಂಗಗೊಂಡಿಲ್ಲ. ಈ ಎಂಜಿನ್ 20 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ ಎನ್ನಲಾಗಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಈ ಬೈಕ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ - ಸೈಡೆಡ್ ಶಾಕ್ಸ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ವಿಶೇಷವಾಗಿ ಡುಯಲ್ - ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

Royal Enfield Goan Classic 350 Motorcycle Unveiled Launch Soon Expected Price Details

ಗೋವಾದಲ್ಲಿ ಜನವರಿ 23 ರಂದು ಆಯೋಜಿಸಿರುವ 'ಮೋಟೋವರ್ಸ್ 2024' ಸಮಾರಂಭದಲ್ಲಿ ನೂತನ 'ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350' ಮೋಟಾರ್‌ಸೈಕಲ್‌ ಬಿಡುಗಡೆಯಾಗಲಿದೆ. ಈ ಬೈಕ್ ಸರಿ ಸುಮಾರು ರೂ.1.93 ಲಕ್ಷದಿಂದ ರೂ.2.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

ಒಟ್ಟಾರೆಯಾಗಿ, ಈ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಮೇಲೆ ಗ್ರಾಹಕರು ಕೂಡ ದೊಡ್ಡ ಮಟ್ಟದಲ್ಲಿ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಹೊಸ ಮೋಟಾರ್‌ಸೈಕಲ್‌ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಯುವಕರು ಮಾತ್ರವಲ್ಲದೆ, ಹಲವು ಯುವತಿಯರ ಆದ್ಯತೆಯ ದ್ವಿಚಕ್ರ ವಾಹನವಾಗಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, November 21, 2024, 10:28 [IST]
English summary
Royal enfield goan classic 350 motorcycle unveiled launch soon expected price details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+