ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ವಿಡಿಯೋ ರಿವ್ಯೂ: ಹೇಗಿದೆ ಗೊತ್ತಾ?
ಗೋವಾದಲ್ಲಿ ಆಯೋಜಿಸಿರುವ 'ಮೋಟೋವರ್ಸ್ 2024' ಕಾರ್ಯಕ್ರಮದಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಕಂಪನಿಯು ನೂತನ ಗೋವಾನ್ ಕ್ಲಾಸಿಕ್ 350 (Goan Classic 350) ಬೈಕ್‌ನ್ನು ಬಿಡುಗಡೆಗೊಳಿಸಿದೆ. ಈ ಹೊಚ್ಚ ಹೊಸ ಮೋಟಾರ್‌ಸೈಕಲ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನಮಗೆ ಈ ಬೈಕ್‌ನ ಟೆಸ್ಟ್ ಡ್ರೈವ್ ನಡೆಸಲು ಅವಕಾಶ ಲಭ್ಯವಾಯಿತು. ನಿಮಗಾಗಿ ಈ ಮೋಟಾರ್‌ಸೈಕಲ್‌ನ ರಿವ್ಯೂ ವಿಡಿಯೋ..
ನೂತನ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 (Royal Enfield Goan Classic 350) ಬೈಕ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ಅಡ್ಜೆಸ್ಟೇಬಲ್ ಕ್ಲಚ್ ಮತ್ತು ಬ್ರೇಕ್ ಲಿವರ್‌ಗಳು, ಅತ್ಯುತ್ತಮ ಹ್ಯಾಂಡಲ್‌ಬಾರ್‌ಗಳು, ಫ್ಲೋಟಿಂಗ್ ಸೀಟ್ ಮತ್ತು ಫಾರ್ವರ್ಡ್-ಸೆಟ್ ಫುಟ್‌ಪೆಗ್‌ಗಳನ್ನು ಒಳಗೊಂಡಿದೆ.
ಈ ಬೈಕ್ ಸೆಮಿ-ಡಿಜಿಟಲ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. 1,400 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದ್ದು, ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಇದ್ದು, ಸರಿ ಸುಮಾರು 197 ಕೆಜಿ ತೂಕವಿದೆ. ಉತ್ತಮವಾಗಿರುವ ವೀಲ್ ಹಾಗೂ ಟೈರ್‌ಗಳನ್ನು ಪಡೆದುಕೊಂಡಿದೆ.
ನೂತನ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಮೋಟಾರ್‌ಸೈಕಲ್ 349 ಸಿಸಿ ಪೆಟ್ರೋಲ್ ಒಳಗೊಂಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, ಗರಿಷ್ಠ ಅಶ್ವ ಶಕ್ತಿ ಹಾಗೂ ಪೀಕ್ ಟಾರ್ಕ್ ಹೊರಹಾಕುತ್ತದೆ. ಬರೋಬ್ಬರಿ 36.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ ಎಂದು ತಿಳಿದುಬಂದಿದೆ.

ಹೊಸ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 6-ಸ್ಟೆಪ್ಸ್ ಪ್ರಿಲೋಡ್ ಅಡ್ಜೆಸ್ಟೇಬಲ್ ಟ್ವಿನ್ ಶಾಕ್ಸ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದ್ದು, ಡುಯಲ್ - ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








