ಹೊಸ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಬೈಕ್ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ 'ರಾಯಲ್ ಎನ್‌ಫೀಲ್ಡ್' ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಬೈಕ್‌ಗಳು ಲಕ್ಷಾಂತರ ಸಂಖ್ಯೆಯ ಯುವ ಜನರ ಮನಸ್ಸನ್ನು ಗೆದ್ದಿವೆ. ಇತ್ತೀಚೆಗೆ, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 (Royal Enfield Guerrilla 450) ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಂಡಿತ್ತು. ನೀವು ಈ ಬೈಕ್‌ನ್ನು ಖರೀದಿಸಲು ಆಲೋಚಿಸುತ್ತಿದ್ದೀರಾ.. ಇಲ್ಲಿ ನೂತನ 'ಗೆರಿಲ್ಲಾ 450' ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಬೈಕ್ ವಿವಿಧ ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಬೆಂಗಳೂರಿನಲ್ಲಿ ಇದರ ಅನಲಾಗ್ (Analogue) ಮಾದರಿಯು ರೂ.3.08 ಲಕ್ಷ ಆನ್-ರೋಡ್ ದರವನ್ನು ಹೊಂದಿದೆ. ನೀವು ರೂ.50,000 ಡೌನ್ ಪೇಮೆಂಟ್ ಪಾವತಿಸಿ ಈ ಮೋಟಾರ್‌ಸೈಕಲ್‌ನ್ನು ತೆಗೆದುಕೊಂಡರೆ, ರೂ.2.58 ಲಕ್ಷ ಸಾಲವಿರುತ್ತದೆ. ಅದಕ್ಕೆ ಶೇಕಡ 6% ಬಡ್ಡಿ ದರದಲ್ಲಿ ಮೂರು ವರ್ಷದ (36 ತಿಂಗಳು) ಅವಧಿಗೆ ಮಾಸಿಕ ರೂ.7,851 ಇಎಂಐ ಕಟ್ಟಬೇಕು.

Royal Enfield Guerrilla 450 Bike On Road Price And Emi Details

ಗೆರಿಲ್ಲಾ 450 ಡ್ಯಾಶ್ (Dash) ರೂಪಾಂತರವು ರೂ.3.20 ಲಕ್ಷ ಆನ್-ರೋಡ್ ಬೆಲೆ (On-Road Price) ಹೊಂದಿದೆ. ರೂ.50,000 ಡೌನ್ ಪೇಮೆಂಟ್ (Down Payment) ಕಟ್ಟಿ ಈ ಬೈಕ್‌ನ್ನು ಖರೀದಿಸಿದರೆ, ಉಳಿದ ರೂ.2.70 ಲಕ್ಷ ಸಾಲದ ಮೊತ್ತಕ್ಕೆ ಶೇಕಡ 6% ಬಡ್ಡಿಯನ್ನು ಹಾಕಿ 3 ವರ್ಷಕ್ಕೆ ತಿಂಗಳಿಗೆ ರೂ.8,220 ಇಎಂಐ ಪಾವತಿಸಬೇಕು.

ನೂತನ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಫ್ಲ್ಯಾಶ್ (Flash) ಮಾದರಿಯು ರೂ.3.26 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.50,000 ಡೌನ್ ಪೇಮೆಂಟ್ ಪಾವತಿಸಿ ಈ ಮೋಟಾರ್‌ಸೈಕಲ್‌ನ್ನು ಮನೆಗೆ ತಂದರೆ, ರೂ.2.76 ಲಕ್ಷ ಸಾಲವಿರುತ್ತದೆ. ಶೇಕಡ 6% ಬಡ್ಡಿ ದರದಲ್ಲಿ ಮೂರು ವರ್ಷದ ಅವಧಿಗೆ ಮಾಸಿಕ ರೂ.8,405 ಇಎಂಐ ಕಟ್ಟಬೇಕು.

Royal Enfield Guerrilla 450 Bike On Road Price And Emi Details

ಈ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಮೋಟಾರ್‌ಸೈಕಲ್ 452 ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 39.50 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 40 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 29.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಗೆರಿಲ್ಲಾ 450 ಎಲ್‌ಇಡಿ ಹೆಡ್‌ಲೈಟ್, ಟೈಲ್ ಲೈಟ್, ಟರ್ನ್ ಇಂಡಿಕೇಟರ್‌ಗಳು, ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹ್ಯಾಂಡಲ್‌ಬಾರ್‌ನಲ್ಲಿ ಯುಎಸ್‌ಬಿ-ಸಿ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪವರ್ & ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 11 ಲೀಟರ್ ಸಾಮರ್ಥ್ಯದ ಇಂಧನ (ಫ್ಯುಯೆಲ್) ಟ್ಯಾಂಕ್‌ನ್ನು ಪಡೆದಿದೆ.

Royal Enfield Guerrilla 450 Bike On Road Price And Emi Details

ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಬೈಕ್ ಸರಿ ಸುಮಾರು 45 ದಿನಗಳ ಕಾಯುವಿಕೆ ಅವಧಿ ಹೊಂದಿದ್ದು, ಬೇಡಿಕೆಗೆ ಅನುಗುಣವಾಗಿ ಅದು ವ್ಯತ್ಯಾಸವಾಗಲಿದೆ. ಪುಣೆಯಲ್ಲಿ 10 ದಿನಗಳಲ್ಲಿ ಗ್ರಾಹಕರ ಮನೆ ಸೇರಲಿದೆ ಎಂದು ತಿಳಿದುಬಂದಿದೆ. ನಿಮ್ಮ ಗಮನಕ್ಕೆ.. ಈ ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ ಹಾಗೂ ಸಾಲದ ಬಡ್ಡಿ ದರಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, July 25, 2024, 13:34 [IST]
English summary
Royal enfield guerrilla 450 bike on road price and emi details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+