ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್‌ನ್ನು ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಯುವಕರಿಗೆ.. ನಿಮ್ಮ ನೆಚ್ಚಿನ ಮೋಟಾರ್‌ಸೈಕಲ್ ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಒಂದು ಉತ್ತರ ರಾಯಲ್ ಎನ್‌ಫೀಲ್ಡ್ ಬುಲೆಟ್ ಎಂದು. ಅಷ್ಟರಮಟ್ಟಿಗೆ ಈ ಬೈಕ್ ಯುವ ಜನರ ಮನಸ್ಸನ್ನು ಗೆದ್ದಿದೆ. ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಮೋಟಾರ್‌ಸೈಕಲ್ ಕೂಡ ಸಾವಿರಾರು ನವತರುಣರ ಆಯ್ಕೆಯ ದ್ವಿಚಕ್ರ ವಾಹನವಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇಲ್ಲಿ ಹೊಚ್ಚ ಹೊಸ 'ಹಂಟರ್ 350' ಬೈಕ್ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ನೂತನ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್ ವಿವಿಧ ರೂಪಾಂತರ (ವೇರಿಯೆಂಟ್)ಗಳೊಂದಿಗೆ ಸಿಗುತ್ತದೆ. ಬೆಂಗಳೂರಿನಲ್ಲಿ ಇದರ 'ರೆಟ್ರೋ' ಮಾದರಿಯು ರೂ.1,95,265 ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ಡೌನ್ ಪೇಮೆಂಟ್ ಪಾವತಿಸಿ ಈ ಬೈಕ್‌ನ್ನು ಖರೀದಿಸಿದರೆ, ಉಳಿದ ರೂ.1,75,265 ಸಾಲದ ಮೊತ್ತಕ್ಕೆ ಶೇಕಡ 9.7% ಬಡ್ಡಿ ದರದಲ್ಲಿ ಮೂರು ವರ್ಷದ (36 ತಿಂಗಳು) ಅವಧಿಗೆ ಮಾಸಿಕ ರೂ.5,631 ಇಎಂಐ ಕಟ್ಟಬೇಕು.

ರಾಯಲ್ ಎನ್‌ಫೀಲ್ಡ್ ಹಂಟರ್ 350 'ಮೆಟ್ರೋ' ರೂಪಾಂತರವು ರೂ.2,14,655 ಆನ್-ರೋಡ್ ದರವನ್ನು ಪಡೆದಿದೆ. ನೀವು ರೂ.20,000 ಡೌನ್ ಪೇಮೆಂಟ್ (Down Payment) ಕಟ್ಟಿ ಈ ಮೋಟಾರ್‌ಸೈಕಲ್‌ನ್ನು ಕೊಂಡುಕೊಂಡರೆ, ರೂ.1,94,655 ಸಾಲದ ಹಣಕ್ಕೆ ರೂ.9.7% ಬಡ್ಡಿಯನ್ನು ಹಾಕಿ ಮೂರು ವರ್ಷದ ಅವಧಿಗೆ ರೂ.6,254 ಇಎಂಐ ಪಾತಿಸಬೇಕು.
ಹಂಟರ್ 350 ಮೆಟ್ರೋ 'ರೆಬೆಲ್' ಮಾದರಿಯು ರೂ.2,22,101 ಆನ್-ರೋಡ್ ಬೆಲೆ (On-Road Price)ಯನ್ನು ಹೊಂದಿದೆ. ರೂ.20,000 ಡೌನ್ ಪೇಮೆಂಟ್ ಪಾವತಿಸಿ ಈ ಬೈಕ್‌ನ್ನು ಖರೀದಿಸಿದರೆ, ರೂ.2,02,101 ಸಾಲದ ಮೊತ್ತಕ್ಕೆ ಶೇಕಡ 9.7% ಬಡ್ಡಿ ದರದಲ್ಲಿ ಮೂರು ವರ್ಷದ ಅವಧಿಗೆ ರೂ.6,493 ಇಎಂಐ (EMI) ಕಟ್ಟಬೇಕು.

ನೂತನ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ 349 ಸಿಸಿ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 20.4 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 27 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, 36.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹಂಟರ್ 350 ಮೋಟಾರ್‌ಸೈಕಲ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. 17-ಇಂಚಿನ ವೀಲ್‌ಗಳನ್ನು ಪಡೆದಿದ್ದು, ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. 181 ಕೆಜಿ ತೂಕವಿರುವ ಈ ಬೈಕ್, 13 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ದೇಶೀಯವಾಗಿ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್‌ಗೆ ಟಿವಿಎಸ್ ರೋನಿನ್ (TVS Ronin) ಮತ್ತು ಜಾವಾ 42 (Jawa 42) ಮೋಟಾರ್‌ಸೈಕಲ್‌ಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ಬೈಕ್ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








