ಇದ್ದಕ್ಕಿದ್ದಂತೆ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಮಾರಾಟದಲ್ಲಿ ಇಳಿಕೆ: ಕಾರಣವೇನು?

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದ್ದು, ಇದರ ಬೈಕ್ ಗಳು ದಾಖಲೆಯ ಮಾರಾಟವಾಗುತ್ತಿದೆ. ಸತತವಾಗಿ ಹಂಟರ್ 350 ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಹಂಟರ್ 350 ಮಾದರಿಯ ಮಾರಾಟದ ವರದಿಯ ಬಹಿರಂಗಪಡಿಸಿದ್ದು, 2024ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಮಾದರಿಯ 15,609 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಹಿಂದಿನ ವರ್ಷದ ಜೂನ್ ತಿಂಗಳಿನಲ್ಲಿ ಹಂಟರ್ 350 ಮಾದರಿಯ 16,162 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮಾದರಿಯ ಶೇ.3.42 ರಷ್ಟು ಕುಸಿತವನ್ನು ಕಂಡಿದೆ.ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ಬಗ್ಗೆ ಹೇಳುವುದಾದರೆ ಈ ಬೈಕಿನಲ್ಲಿ ಡ್ವಯಲ್ ಟೋನ್ ಹೊಂದಿರುವ ಟಿಯರ್-ಡ್ರಾಪ್ ವಿನ್ಯಾಸದ ಇಂಧನ ಟ್ಯಾಂಕ್, ಉದ್ದವಾದ ಸಿಂಗಲ್-ಪೀಸ್ ಸೀಟ್, ವೃತ್ತಾಕಾರವಾದ ಹಾಲೋಜೆನ್ ಹೆಡ್‌ಲ್ಯಾಂಪ್‌ಗಳು, ಟರ್ನ್ ಇಂಡಿಕೇಟರ್‌ಗಳು, ರಿಯರ್-ವ್ಯೂ ಮಿರರ್‌ಗಳು ಮತ್ತು ಸ್ವಲ್ಪ ಎತ್ತರದ ವಿನ್ಯಾಸದೊಂದಿಗೆ ಸ್ಕ್ರ್ಯಾಂಬ್ಲರ್ ಮಾದರಿಯಾಗಿರುವುದು ಸ್ಪಷ್ಟವಾಗುತ್ತದೆ.

Royal Enfield Hunter 350

ಇದರೊಂದಿಗೆ ಹೊಸ ಬೈಕಿನಲ್ಲಿ ಬೆಲೆ ಕಡಿತಕ್ಕಾಗಿ ಕೆಲವು ಪ್ರಮುಖ ಫೀಚರ್ಸ್‌ಗಳನ್ನು ಆಯ್ಕೆ ರೂಪದಲ್ಲಿ ನೀಡಲಾಗಿದೆ. ಹಂಟರ್ 350 ಬೈಕಿನಲ್ಲಿ ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ ಟ್ರಿಪ್ಲರ್ ನ್ಯಾವಿಗೇಷನ್ ಅನ್ನು ಹೈ ಎಂಡ್ ಮಾದರಿಯಲ್ಲಿ ಮಾತ್ರ ನೀಡಲಾಗಿದೆ. ಆರಂಭಿಕ ಮಾದರಿಯಲ್ಲಿ ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮಾತ್ರ ನೀಡಲಾಗಿದ್ದು, ಟ್ರಿಪ್ಲರ್ ನ್ಯಾವಿಗೇಷನ್ ಅನ್ನು ಆಕ್ಸೆಸರಿಸ್‌ನಲ್ಲಿ ಖರೀದಿ ಮಾಡಬಹುದಾಗಿದೆ.

ಕ್ಲಾಸಿಕ್ 350 ಬೈಕಿಗೆ ಹೋಲಿಸಿದರೆ ಹಂಟರ್ ಬೈಕ್ ಮಾದರಿಯು 90 ಎಂಎಂ ಉದ್ದ ಮತ್ತು 35 ಎಂಎಂ ಎತ್ತರದಲ್ಲಿ ಕಡಿಮೆಯಿದ್ದು, 15 ಎಂಎಂ ನಷ್ಟು ಹೆಚ್ಚು ಅಗಲವಾಗಿರುತ್ತದೆ. ಇದರ ವೀಲ್ಹ್ ಬೇಸ್ ಉದ್ದವು ಕ್ಲಾಸಿಕ್‌ಗಿಂತಲೂ 20 ಎಂಎಂ ಉದ್ದವಾಗಿದ್ದು, 181 ಕೆಜಿಯಷ್ಟು ಭಾರವಾಗಿರಲಿದೆ. ಈ ಹಂಟರ್ 350 ಬೈಕಿನಲ್ಲಿ 349 ಸಿಸಿ ಸಿಂಗಲ್ ಸಿಲಿಂಡರ್, ಟು ವಾಲ್ವ್, ಎಸ್‌ಓಹೆಚ್‌ಸಿ ಫ್ಯೂಲ್ ಇಂಜೆಕ್ಷೆಡ್ ಎಂಜಿನ್ ಅಳವಡಿಸಲಾಗಿದೆ.

Royal Enfield Hunter 350

ಈ ಬೈಕ್ 5-ಸ್ಪೀಡ್ ಗೇರ್‌ಬಾಕ್ಸ್ ಮೂಲಕ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹಂಟರ್ ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಇತರೆ ಮೋಟಾರ್‌ಸೈಕಲ್‌ಗಳಿಂತಲೂ ತುಸು ಹಗುರವಾಗಿದೆ. ಪ್ರತಿ ಗಂಟೆಗೆ 114 ಕಿ.ಮೀ ಟಾಪ್ ಸ್ಪೀಡ್ ಮೂಲಕ ಪ್ರತಿ ಲೀಟರ್‌ಗೆ ಗರಿಷ್ಠ 36.1 ಕಿ.ಮೀ ಮೈಲೇಜ್ ನೀಡುತ್ತದೆ.

ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ಸಸ್ಪೆಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಕಂಪನಿಯು 41ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳೊಂದಿಗೆ ಟ್ವಿನ್ ಡೌನ್‌ಟ್ಯೂಬ್ ಸ್ಪೈನ್ ಫ್ರೇಮ್ ಸೆಟಪ್ ಮತ್ತು ಹಿಂಭಾಗದಲ್ಲಿ ಪ್ರಿಲೋಡ್-ಅಡ್ಜಸ್ಟಬಲ್ ಟ್ವಿನ್ ಶಾಕ್‌‌ಗಳನ್ನು ನೀಡಿದೆ. ಹಂಟರ್ 350 ಬೈಕಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಹೊರತಾಗಿಯೂ ಕಂಪನಿಯು ಹೊಸ ಬೈಕ್ ಅಂದವನ್ನು ಹೆಚ್ಚಿಸುವ ಮತ್ತು ಉತ್ತಮ ಸುರಕ್ಷತೆ ಖಾತ್ರಿಪಡಿಸುವ ಆಕ್ಸೆಸರಿಸ್ ಪ್ಯಾಕೇಜ್ ಸಿದ್ದಪಡಿಸಿದೆ.

Royal Enfield Hunter 350

ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸಾಕಷ್ಟು ಹೊಸ ಸೌಲಭ್ಯಗಳನ್ನು ನೀಡಲಾಗಿದೆ. ರೈಡರ್‌ಗೆ ಪೂರಕವಾಗಿ ಹೊಸ ಬೈಕಿನಲ್ಲಿ 10ಕ್ಕೂ ಹೆಚ್ಚು ಆಕ್ಸೆಸರಿಸ್‌ಗಳನ್ನು ಪರಿಚಯಿಸಲಾಗಿದ್ದು, ಬ್ಲ್ಯಾಕ್ ಕಮ್ಯೂಟರ್ ಪ್ಯಾನಿಯರ್, ಪ್ಯಾನಿಯರ್ ರೈಲ್, ಬ್ಲ್ಯಾಕ್ ಕಮ್ಯೂಟರ್ ವಾಟರ್‌ಪ್ರೂಫ್, ಹಿಂಬದಿಯ ಸವಾರರಿಗೆ ಬ್ಯಾಕ್ ರೇಸ್ಟ್ ಪ್ಯಾಡ್, ಸಿಗ್ನಿಚೆರ್ ಬೆಂಚ್ ಸೀಟ್, ಬ್ಲ್ಯಾಕ್ ಟೂರಿಂಗ್ ಮಿರರ್, ವಾಟರ್ ರೆಸಿಸ್ಟೆಂಟ್ ಬೈಕ್ ಕವರ್, ಸಿಲ್ವರ್ ಎಲ್ಇಡಿ ಇಂಡಿಕೇಟರ್, ಸಿಲ್ವರ್ ಆಯಿಲ್ ಫಿಲ್ಲರ್ ಕ್ಯಾಪ್ ಮತ್ತು ಸಿಲ್ವರ್ ಸಂಪ್ ಗಾರ್ಡ್ ಲಭ್ಯವಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, July 23, 2024, 12:02 [IST]
English summary
Royal enfield hunter 350 sales in june 2024 details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+