Royal Enfield: ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳಿಗಾಗಿ ಮುಗಿಬಿದ್ದ ಯುವ ಜನತೆ.. ಏನು.. ಎತ್ತ..?
ಭಾರತದ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ರಾಯಲ್ ಎನ್‌ಫೀಲ್ಡ್ (Royal Enfield) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ - ಶೈಲಿಯ ವಿನ್ಯಾಸ (Design) ಹಾಗೂ ವೈಶಿಷ್ಟ್ಯ (Feature) ಪಡೆದುಕೊಂಡಿರುವ ವಿವಿಧ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಇವು ಲಕ್ಷಾಂತರ ಸಂಖ್ಯೆಯಲ್ಲಿ ಯುವ ಜನರ ಮನಸ್ಸನ್ನು ಗೆದ್ದಿವೆ. ಇತ್ತೀಚೆಗೆ, ಕಂಪನಿಯು ಆಗಸ್ಟ್ ತಿಂಗಳ (2024) ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಆಗಸ್ಟ್ 2024) ರಾಯಲ್ ಎನ್‌ಫೀಲ್ಡ್ ಒಟ್ಟು 73,629 ಯುನಿಟ್ (ದೇಶೀಯ ಮಾರಾಟ - ವಿದೇಶಕ್ಕೆ ರಫ್ತು) ಮೋಟಾರ್‌ಸೈಕಲ್‌ಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 77,583 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) 5.10% ಕುಸಿತವಾಗಿದೆ. ಆದಾಗ್ಯೂ ಜುಲೈನಲ್ಲಿ (2024) ಮಾರಾಟ ಮಾಡಿದ 67,625 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ತಿಂಗಳಿಂದ ತಿಂಗಳಿಗೆ (MoM) ಶೇಕಡ 8.88% ಬೆಳವಣಿಗೆ ಸಾಧಿಸಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಹಲವು ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದು, ಬುಲೆಟ್ 350 (Bullet 350) ಜನಪ್ರಿಯ ಮೋಟಾರ್‌ಸೈಕಲ್ ಆಗಿದೆ. ರೂ.1.74 ಲಕ್ಷದಿಂದ ರೂ.2.16 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 349 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಜೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 37 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಕುರಿತಂತೆ ಮಾತನಾಡುವುದಾದರೆ, ಈ ಮೋಟಾರ್‌ಸೈಕಲ್ ರೂ.1.50 ಲಕ್ಷದಿಂದ ರೂ.1.72 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 349 ಸಿಸಿ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 36.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 (Royal Enfield Classic 350) ಬೈಕ್, ರೂ.1.93 ದಿಂದ ರೂ.2.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 349.34 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 41.55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಸ್ಪೀಡೋಮೀಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 (Royal Enfield Himalayan 450) ಮೋಟಾರ್‌ಸೈಕಲ್, ರೂ.2.85 ಲಕ್ಷದಿಂದ ರೂ.2.98 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 452 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 4-ಇಂಚಿನ ಟಿಎಫ್‌ಟಿ ಡಿಸ್ಪ್ಲೇ, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಡಬಲ್ ಡಿಸ್ಕ್ ಬ್ರೇಕ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 (Royal Enfield Guerrilla 450) ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.2.39 ದಿಂದ ರೂ.2.54 ಲಕ್ಷ ದರವನ್ನು ಪಡೆದಿದೆ. 452 ಪೆಟ್ರೋಲ್ ಎಂಜಿನ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಎಲ್‌ಇಡಿ ಹೆಡ್‌ಲೈಟ್, ಟೈಲ್ ಲೈಟ್, ಟರ್ನ್ ಇಂಡಿಕೇಟರ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








