ಈ ವಾರ ಮಾರಾಟಕ್ಕೆ ಬಂದ ಪ್ರಖ್ಯಾತ ಬೈಕ್‌ಗಳಿವು.. ನಿಮಗೆ ಯಾವುದು ಇಷ್ಟ?
ದಿನಬಳಕೆಗಾಗಿ ದ್ವಿಚಕ್ರ ವಾಹನಗಳು ತೀರಾ ಅತ್ಯಗತ್ಯ. ದೇಶೀಯ ಮಾರುಕಟ್ಟೆಯಲ್ಲಿ ಈ ವಾರ ವಿವಿಧ ಬೈಕ್‌ಗಳನ್ನು ಮಾರಾಟಕ್ಕೆ ತರಲಾಗಿದೆ. ಪ್ರಮುಖವಾಗಿ ಟ್ರಯಂಫ್ ಸ್ಪೀಡ್ ಟಿ4 (Triumph Speed T4), ಟ್ರಯಂಫ್ ಸ್ಪೀಡ್ 400 (Triumph Speed 400) ಮತ್ತು ಟಿವಿಎಸ್ ಅಪಾಚೆ ಆರ್‌ಆರ್ 310 (TVS Apache RR 310) ಮೋಟಾರ್‌ಸೈಕಲ್‌ಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಬೈಕ್‌ಗಳು ಸ್ಪರ್ಧಾತ್ಮಕ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯವನ್ನು ಒಳಗೊಂಡಿವೆ. ಬನ್ನಿ.. ಈ ನೂತನ ದ್ವಿಚಕ್ರ ವಾಹನಗಳ ವಿಶೇಷತೆ ಬಗ್ಗೆ ಸಂಕ್ಷಿಪ್ತವಾದ ವಿವರ ತಿಳಿಯೋಣ.
ಮೊದಲಿಗೆ ಟ್ರಯಂಫ್ ಸ್ಪೀಡ್ ಟಿ4 (Triumph Speed T4) ಬೈಕ್ ಕುರಿತಂತೆ ಮಾತನಾಡೋಣ. ಇದು ರೂ.2.17 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ವೈಟ್, ರೆಡ್ ಮತ್ತು ಬ್ಲ್ಯಾಕ್ ಎಂಬ 3 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ನವೀಕರಿಸಿದ ಫ್ಯುಯೆಲ್ (ಇಂಧನ) ಟ್ಯಾಂಕ್, ಹೊಸದಾಗಿರುವ ಸೀಟ್ (ಆಸನ) ಮತ್ತು ಬಾರ್-ಎಂಡ್ ಮಿರರ್‌ಗಳನ್ನು ಹೊಂದಿದೆ.

ಈ ಟ್ರಯಂಫ್ ಸ್ಪೀಡ್ ಟಿ4 ಬೈಕ್ 399 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಎಲ್ಇಡಿ ಲೈಟಿಂಗ್, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಅನಲಾಗ್ ಡಿಜಿಟಲ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳ ಆಯ್ಕೆಯನ್ನು ಪಡೆದಿದೆ.
ಟ್ರಯಂಫ್ ಸ್ಪೀಡ್ 400 (Triumph Speed 400) ಬಗ್ಗೆ ಹೇಳುವುದಾದರೆ, ಈ ಮೋಟಾರ್‌ಸೈಕಲ್ ಸಣ್ಣ-ಪುಟ್ಟ ನವೀಕರಣಗಳನ್ನು ಪಡೆದುಕೊಂಡು ಬಿಡುಗಡೆಯಾಗಿದೆ. ರೂ.2.4 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ರೇಸಿಂಗ್ ಯೆಲ್ಲೋ, ಫ್ಯಾಂಟಮ್ ಬ್ಲ್ಯಾಕ್, ಪರ್ಲ್ ಮೆಟಾಲಿಕ್ ವೈಟ್ ಹಾಗೂ ರೇಸಿಂಗ್ ರೆಡ್ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ ಟ್ರಯಂಫ್ ಸ್ಪೀಡ್ 400 ಬೈಕ್, 399 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 8,000ಆರ್‌ಪಿಎಂನಲ್ಲಿ 39.5 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,500ಆರ್‌ಪಿಎಂನಲ್ಲಿ 39 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಹೊಸ ಟಿವಿಎಸ್ ಅಪಾಚೆ ಆರ್‌ಆರ್ 310 (TVS Apache RR 310) ಮೋಟಾರ್‌ಸೈಕಲ್ ಕುರಿತಂತೆ ಮಾತನಾಡುವುದಾದರೆ, ಇದು ರೂ.2.75 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಸಿಗುತ್ತದೆ. 312 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 38 ಬಿಹೆಚ್‍ಪಿ ಅಶ್ವ ಶಕ್ತಿ ಮತ್ತು 29 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಅಪಾಚೆ ಆರ್‌ಆರ್ 310 ಬೈಕ್ 164 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.74 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಬ್ಲೂಟೂತ್ ಕನೆಕ್ಟಿವಿಟಿ & ನ್ಯಾವಿಗೇಷನ್‌ನೊಂದಿಗೆ ಟಿಎಫ್‌ಟಿ ಡಿಸ್ಪ್ಲೇ, ಹೀಟೇಡ್ & ಕೋಲ್ಡ್ ಸೀಟ್, ಬೈ ಡೈರೆಕ್ಷನಲ್ ಕ್ವಿಕ್‌ಶಿಫ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications