ಯುವಕರಿಗೆ ಹುಚ್ಚು ಹಿಡಿಸುವ ಬೈಕ್‌ಗಳಿವು.. ಆಲ್-ಟೈಮ್ ಫೆವರೇಟ್.. ನಿಮಗೆ ಯಾವುದು ಇಷ್ಟ?

ಯುವಕರಿಗೆ ಮೋಟಾರ್‌ಸೈಕಲ್‌ಗಳೆಂದರೆ ಪಂಚಪ್ರಾಣ. ಅದರಲ್ಲೂ ಪ್ರೀಮಿಯಂ ಬೈಕ್‌ಗಳನ್ನು ಇಷ್ಟಪಟ್ಟು ಖರೀದಿಸುತ್ತಾರೆ. ಬಹುತೇಕರಿಗೆ ಯಾವ ಮೋಟಾರ್‌ಸೈಕಲ್‌ನ್ನು ತೆಗೆದುಕೊಂಡರೆ ಉತ್ತಮ.. ಬೆಲೆ ಎಷ್ಟು, ವೈಶಿಷ್ಟ್ಯಗಳೇನು ಎಂಬ ಗೊಂದಲವಿರುತ್ತದೆ. ನೀವು ಅತ್ಯುತ್ತಮವಾಗಿರುವ ಬೈಕ್‌ನ್ನು ಖರೀದಿಸಲು ಆಲೋಚಿಸಿದ್ದರೆ.. ಟ್ರಯಂಫ್ ಸ್ಪೀಡ್ ಟಿ4 (Triumph Speed T4), ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ಹಾಗೂ ಹಾರ್ಲೆ ಡೇವಿಡ್ಸನ್ ಎಕ್ಸ್440 (Harley Davidson X440) ಮಾದರಿಗಳು (ಮಾಡೆಲ್) ಉತ್ತಮವಾದ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಟ್ರಯಂಫ್ ಸ್ಪೀಡ್ ಟಿ4 (Triumph Speed T4) ಬೈಕ್‌ ಕುರಿತಂತೆ ಮಾತನಾಡೋಣ. ಇದು ರೂ.2.17 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 399 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 30.6 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 36 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Top 3 Modern-Classic Motorcycles Under Rs 3 Lakh Triumph Speed T4 Bullet 350 Harley Davidson X440

ಟ್ರಯಂಫ್ ಸ್ಪೀಡ್ ಟಿ4 ಮೋಟಾರ್‌ಸೈಕಲ್‌ ಎಲ್ಇಡಿ ಲೈಟಿಂಗ್, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಅನಲಾಗ್ ಡಿಜಿಟಲ್ ಡಿಸ್‌ಪ್ಲೇ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ವೈಟ್ (ಬಿಳಿ), ರೆಡ್ (ಕೆಂಪು) ಮತ್ತು ಬ್ಲ್ಯಾಕ್ (ಕಪ್ಪು) ಎಂಬ 3 ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಸಿಗುತ್ತದೆ. ಸುರಕ್ಷತೆಗಾಗಿ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ಕೂಡ ಜನಪ್ರಿಯ ಬೈಕ್ ಆಗಿದ್ದು, ರೂ.1.74 ಲಕ್ಷದಿಂದ ರೂ.2.16 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 349 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಜೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದೆ. 20.4 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

Top 3 Modern-Classic Motorcycles Under Rs 3 Lakh Triumph Speed T4 Bullet 350 Harley Davidson X440

ಈ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಮೋಟಾರ್‌ಸೈಕಲ್‌ ಹ್ಯಾಲೊಜೆನ್ ಹೆಡ್‌ಲೈಟ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬಲ್ಬ್ ಟೈಪ್ ಇಂಡಿಕೇಟರ್‌ಗಳು ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ & ಡ್ರಮ್ ಬ್ರೇಕ್‌ನ್ನು ಹೊಂದಿದೆ. ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಇದೆ.

ಹಾರ್ಲೆ ಡೇವಿಡ್ಸನ್ ಎಕ್ಸ್440 (Harley Davidson X440) ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.2.40 ಲಕ್ಷದಿಂದ ರೂ.2.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 440 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 27.37 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 38 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಒಳಗೊಂಡಿದೆ.

Top 3 Modern-Classic Motorcycles Under Rs 3 Lakh Triumph Speed T4 Bullet 350 Harley Davidson X440

ನೂತನ ಹಾರ್ಲೆ ಡೇವಿಡ್ಸನ್ ಎಕ್ಸ್440 ಮೋಟಾರ್‌ಸೈಕಲ್‌ ಡಾರ್ಕ್ ಸಿಲ್ವರ್ (ಗಾಢ ಬೆಳ್ಳಿ) ಮತ್ತು ಮ್ಯಾಟ್ ಬ್ಲ್ಯಾಕ್ (ಕಡು ಕಪ್ಪು) ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 35 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 13.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ. ಸವಾರರ ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, October 5, 2024, 14:00 [IST]
English summary
Top 3 modern classic motorcycles under rs 3 lakh triumph speed t4 bullet 350 harley davidson x440
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+