ದೇಶದಲ್ಲಿ ಅತಿಹೆಚ್ಚು ಮಾರಾಟವಾಗುವ 5 ಪ್ರಮುಖ ಸ್ಕೂಟರ್‌ಗಳಿವು: 77,000 ಆರಂಭಿಕ ಬೆಲೆ, 60 Km ಮೈಲೇಜ್!
ವಿಶ್ವದಲ್ಲಿಯೇ ಭಾರತದ ಅತಿದೊಡ್ಡ ದ್ವಿಚಕ್ರ ವಾಹನ (Two Wheeler) ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ವಿವಿಧ ಸ್ಕೂಟರ್ ಹಾಗೂ ಬೈಕ್‌ಗಳು ಮಾರಾಟಕ್ಕೆ ಬರುತ್ತಿರುತ್ತವೆ. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ದಿನನಿತ್ಯದ ಬಳಕೆಗಾಗಿ ಸ್ಕೂಟರ್‌ಗಳನೇ ಖರೀದಿ ಮಾಡುತ್ತಿದ್ದಾರೆ. ಈ ವಿಭಾಗದಲ್ಲಿ ಹೋಂಡಾ ಆಕ್ಟಿವಾ, ಟಿವಿಎಸ್ ಜುಪಿಟರ್, ಸುಜುಕಿ ಆಕ್ಸೆಸ್ 125, ಹೋಂಡಾ ಡಿಯೋ 110 ಮತ್ತು ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್‌ಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಬನ್ನಿ.. ಈ ಸ್ಕೂಟರ್‌ಗಳ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ತಿಳಿಯೋಣ.
ಮೊದಲಿಗೆ ಹೋಂಡಾ ಆಕ್ಟಿವಾ (Honda Activa) ಕುರಿತಂತೆ ಮಾತನಾಡೋಣ. ಇದು ಹಲವರ ನೆಚ್ಚಿನ ಸ್ಕೂಟರ್ ಆಗಿದೆ. ಆಕ್ಟಿವಾ 125 ಹಾಗೂ ಆಕ್ಟಿವಾ 6ಜಿ ಎಂಬ ಎರಡು ವಿಧದಲ್ಲಿ ಖರೀದಿಗೆ ಸಿಗುತ್ತದೆ. ಹೋಂಡಾ ಆಕ್ಟಿವಾ 125 ಸ್ಕೂಟರ್ ರೂ.84,085 ರಿಂದ ರೂ.92,257 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 51.23 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೋಂಡಾ ಆಕ್ಟಿವಾ 6ಜಿ ಸಹ ಜನಮೆಚ್ಚಿದ ಸ್ಕೂಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ರೂ.79,624 ರಿಂದ ರೂ.84,624 (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೆಕ್‌ನ್ನು ಹೊಂದಿದೆ.
ಟಿವಿಎಸ್ ಜುಪಿಟರ್ (TVS Jupiter) ಬಗ್ಗೆ ಹೇಳುವುದಾದರೆ, ಇದು ಆಕ್ಟಿವಾ ಬಳಿಕ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್ ಆಗಿ ಹೊರಹೊಮ್ಮಿದೆ. ಜುಪಿಟರ್ 110 ಹಾಗೂ ಜುಪಿಟರ್ 125 ಎಂಬ 2 ರೂಪದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಟಿವಿಎಸ್ ಜುಪಿಟರ್ 110 ಸ್ಕೂಟರ್ ರೂ.77,400 ರಿಂದ ರೂ.90,150 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 113.3 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 62 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಟಿವಿಎಸ್ ಜುಪಿಟರ್ 125 ಸ್ಕೂಟರ್ ರೂ.89,155 ರಿಂದ ರೂ.99,805 ಎಕ್ಸ್ ಶೋರೂಂ ದರವನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಸುಜುಕಿ ಆಕ್ಸೆಸ್ 125 (Suzuki Access 125) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ರೂ.83,482 ರಿಂದ ರೂ.94,082 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 124 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಸೆಮಿ ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳು ಸಹ ಇದರಲ್ಲಿವೆ.

ಹೋಂಡಾ ಡಿಯೋ 110 (Honda Dio 110) ಸ್ಕೂಟರ್‌ನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ರೂ.75,630 ರಿಂದ ರೂ.82,580 ಎಕ್ಸ್ ಶೋರೂಂ ದರವನ್ನು ಹೊಂದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಟಿವಿಎಸ್ ಎನ್‌ಟಾರ್ಕ್ 125 (TVS NTorq 125) ಕುರಿತಂತೆ ಮಾತನಾಡುವುದಾದರೆ, ಇದು ರೂ.93,126 ದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications