ಪೆಟ್ರೋಲ್‌ಗೆ ಹೇಳಿ ಗುಡ್‌ಬೈ: ಕೈಗೆಟುಕುವ ಬೆಲೆಗೆ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಲಭ್ಯ
ದಿನನಿತ್ಯದ ಬಳಕೆಗಾಗಿ ದ್ವಿಚಕ್ರ ವಾಹನ ತೀರಾ ಅನಿವಾರ್ಯವಾಗಿವೆ. ಬೈಕ್‌ಗಳಿಗೆ ಹೋಲಿಕೆ ಮಾಡಿದರೆ ಸ್ಕೂಟರ್‌ಗಳು ಮಹಿಳೆ ಹಾಗೂ ಪುರುಷರಿಬ್ಬರಿಗೂ ಹೆಚ್ಚು ಸೂಕ್ತವಾಗುತ್ತವೆ. ಆದರೆ ಪೆಟ್ರೋಲ್ ಬೆಲೆ ಗಗನಕ್ಕೇರಿದ್ದು, ಹೊಸ ಸ್ಕೂಟರ್ ಖರೀದಿಸುವವರೂ ಸ್ವಲ್ಪ ಹಿಂದೆ-ಮುಂದೆ ನೋಡುತ್ತಾರೆ. ಅಂತಹವರಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಟಿವಿಎಸ್ ಐಕ್ಯೂಬ್, ಓಲಾ ಎಸ್1, ಹೀರೋ ವಿಡಾ ಬಜಾಜ್ ಚೇತಕ್ ಮತ್ತು ಬಿಗಾಸ್ ಆರ್‌ಯುವಿ350 ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.94,999 ದಿಂದ ರೂ.185,373 (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 2.2 ಕೆಡಬ್ಲ್ಯೂಹೆಚ್, 3.4 ಕೆಡಬ್ಲ್ಯೂಹೆಚ್ ಮತ್ತು 5.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಹೊಚ್ಚ ಹೊಸ ಟಿವಿಎಸ್ ಐಕ್ಯೂಬ್ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಫುಲ್ ಕಲರ್ ಟಿಎಫ್‌ಟಿ ಸ್ಕ್ರೀನ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್ ಮತ್ತು ವಾಯ್ಸ್ ಅಸಿಸ್ಟ್ ಅಲೆಕ್ಸಾ ಸ್ಕಿಲ್‌ಸೆಟ್‌ನಂತಹ ವೈಶಿಷ್ಟ್ಯಗಳಿವೆ. ಜೊತೆಗೆ 75 ರಿಂದ 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಓಲಾ ಎಸ್1 (Ola S1) ಕೂಡ ಎಕ್ಸ್, ಏರ್ ಹಾಗೂ ಪ್ರೊ ಎಂಬ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ರೂ.74,999 ದಿಂದ ರೂ.1.29 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2 ಕೆಡಬ್ಲ್ಯೂಹೆಚ್, 3 ಕೆಡಬ್ಲ್ಯೂಹೆಚ್ ಹಾಗೂ 4 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 95 ರಿಂದ 195 ಕಿಲೋಮೀಟರ್ ಓಡುತ್ತದೆ.

ಹೀರೋ ವಿಡಾ (Hero Vida) ರೂ.1.20 ಲಕ್ಷದಿಂದ ರೂ.1.50 ಎಕ್ಸ್ ಶೋರೂಂ ದರವನ್ನು ಪಡೆದಿದೆ. ವಿ1 ಪ್ಲಸ್ ಮತ್ತು ವಿ1 ಪ್ರೊ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ದೊರೆಯಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 100 ರಿಂದ 110 ಕಿಲೋಮೀಟರ್ ಕ್ರಮಿಸುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್ ರೂ.95,998 ದಿಂದ ರೂ.1.47 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 3201 ಸ್ಪೆಷಲ್ ಎಡಿಷನ್, 2901, ಅರ್ಬೇನ್ ಹಾಗೂ ಪ್ರೀಮಿಯಂ ಎಂಬ ರೂಪಾಂತರಗಳ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 113 ರಿಂದ 136 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ಬಿಗಾಸ್ ಆರ್‌ಯುವಿ350 (BGauss RUV350) ಎಲೆಕ್ಟ್ರಿಕ್ ಸ್ಕೂಟರ್ ಕೂಡ ಲಭ್ಯವಿದ್ದು, ರೂ.1,09,999 ದಿಂದ ರೂ.1,34,999 ಎಕ್ಸ್ ಶೋರೂಂ ದರವನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 90 ರಿಂದ 120 ಕಿಲೋಮೀಟರ್ ಓಡುತ್ತದೆ. ಆರ್‌ಯುವಿ350ಐ ಇಎಕ್ಸ್, ಆರ್‌ಯುವಿ350 ಇಎಕ್ಸ್ ಮತ್ತು ಆರ್‌ಯುವಿ350 ಮ್ಯಾಕ್ಸ್ ಎಂಬ ರೂಪಾಂತರಗಳನ್ನು ಪಡೆದಿದೆ. ಗ್ರೇ, ಆರೆಂಜ್ ಹಾಗೂ ಯೆಲ್ಲೋ ಬಣ್ಣದೊಂದಿಗೆ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications