1 ಲೀಟರ್ ಪೆಟ್ರೋಲ್ ಹಾಕಿಸಿದರೆ ಸಾಕು.. ಈ ಬೈಕ್‌ಗಳು ತುಂಬಾ ಜಾಸ್ತಿ ಮೈಲೇಜ್ ನೀಡುತ್ತವೆ!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ದಿನನಿತ್ಯ ಬಳಕೆಗೆ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಇದರಿಂದ ಹಲವರು ಕೈಗೆಟುಕುವ ಬೆಲೆಯಲ್ಲಿ ಗರಿಷ್ಠ ಮೈಲೇಜ್ ನೀಡಬಲ್ಲ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಹುಡುಕಾಟ ನಡೆಸುತ್ತಿರುತ್ತಾರೆ. ಆದಾಗ್ಯೂ ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಹೊಸ ಬೈಕ್‌ಗಳು ಸಿಗುವುದರಿಂದ ಯಾವುದನ್ನು ತೆಗೆದುಕೊಳ್ಳಬೇಕೆಂಬ ಗೊಂದಲದಲ್ಲಿರುತ್ತಾರೆ. ಇಲ್ಲಿ ಶ್ರೀಸಾಮಾನ್ಯನಿಗೆ ಸೂಕ್ತವಾಗಬಹುದಾದ ಹೀರೋ ಸ್ಪ್ಲೆಂಡರ್ ಪ್ಲಸ್, ಹೀರೋ ಹೆಚ್‌ಎಫ್ ಡಿಲಕ್ಸ್, ಟಿವಿಎಸ್ ರೇಡಿಯನ್, ಬಜಾಜ್ ಪ್ಲಾಟಿನಾ 110 ಹಾಗೂ ಹೋಂಡಾ ಶೈನ್ 100 ಮೋಟಾರ್‌ಸೈಕಲ್‌ಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಕುರಿತಂತೆ ಮಾತನಾಡೋಣ. ಇದು ಜನಪ್ರಿಯ ಬೈಕ್ ಆಗಿದ್ದು, ರೂ.76,356 ದಿಂದ ರೂ.77,496 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 97.2 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.02 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 80.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ.

ಹೀರೋ ಹೆಚ್‌ಎಫ್ ಡಿಲಕ್ಸ್ (Hero HF Deluxe) ಮೋಟಾರ್‌ಸೈಕಲ್, ರೂ.62,218 ದಿಂದ ರೂ.70,098 ಎಕ್ಸ್ ಶೋರೂಂ ದರವನ್ನು ಪಡೆದಿದೆ. 97.2 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದ್ದು, 9.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ರೇಡಿಯನ್ (TVS Radeon) ಸಹ ಪ್ರಮುಖ ಬೈಕ್ ಆಗಿದ್ದು, ರೂ.75,293 ದಿಂದ ರೂ.83,620 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 109.7 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.08 ಪಿಎಸ್ ಗರಿಷ್ಠ ಶಕ್ತಿ ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್ ಇದ್ದು, 73.68 ಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಬಜಾಜ್ ಪ್ಲಾಟಿನಾ 110 (Bajaj Platina 110) ಮೋಟಾರ್‌ಸೈಕಲ್ ಬಗ್ಗೆ ಹೇಳುವುದಾದರೆ, ಇದು ರೂ.70,451 ದಿಂದ ರೂ.80,012 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 115.45 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.6 ಪಿಎಸ್ ಶಕ್ತಿ ಹಾಗೂ 9.81 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೋಂಡಾ ಶೈನ್ 100 (Honda Shine 100) ಬೈಕ್ ರೂ.66,600 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 98.98 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಬೈಕ್‌ಗಳು ಒಂದಕ್ಕಿಂತ ಒಂದು ಅತ್ಯಾಧುನಿಕವಾಗಿದ್ದು, 1 ಲಕ್ಷಕ್ಕಿಂತ ಕಡಿಮೆ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರುವುದರಿಂದ ಮಧ್ಯಮ ವರ್ಗದ ಜನರ ಆಯ್ಕೆಯ ದ್ವಿಚಕ್ರ ವಾಹನಗಳಿವೆ. ನೀವು ಕೂಡ ದಿನಬಳಕೆಗಾಗಿ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಆಲೋಚಿಸಿದರೆ.. ಇವು ಉತ್ತಮ ಆಯ್ಕೆಯಾಗಲಿವೆ. ಇನ್ನೂ ತಡ ಮಾಡದೇ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications