110 ಸಿಸಿಯ ಟಾಪ್ 5 ಸ್ಕೂಟರ್‌ಗಳಿವು.. ಅತಿಕಡಿಮೆ ಬೆಲೆ.. ಭಾರಿ ಮೈಲೇಜ್!

ಪ್ರತಿಯೊಬ್ಬರಿಗೂ ದಿನಬಳಕೆಗೆ ದ್ವಿಚಕ್ರ ವಾಹನಗಳು (Two Wheelers) ಬೇಕೇ ಬೇಕು. ಆದರೆ, ಹಲವರಲ್ಲಿ ಬೈಕ್ ಹಾಗೂ ಸ್ಕೂಟರ್‌ಗಳಲ್ಲಿ ಯಾವುದೇ ಖರೀದಿಸಿದರೆ ಹೆಚ್ಚು ಉತ್ತಮ ಎಂಬ ಗೊಂದಲವಿರುತ್ತದೆ. ಮೋಟಾರ್‌ಸೈಕಲ್‌ಗಳು ಹೋಲಿಕೆ ಮಾಡಿದರೆ, ಸ್ಕೂಟರ್‌ಗಳು 'ಗೇರ್‌ಲೆಸ್' ಆಗಿರುವುದರಿಂದ ಮಹಿಳೆ ಹಾಗೂ ಪುರುಷರಿಬ್ಬರಿಗೂ ಸರಿಹೊಂದುತ್ತವೆ. ಇಲ್ಲಿ 110 ಸಿಸಿ ವಿಭಾಗದಲ್ಲಿ ಅತಿಕಡಿಮೆ ಹಾಗೂ ಗರಿಷ್ಠ ಮೈಲೇಜ್ ನೀಡುವ ಜನಪ್ರಿಯ ಹೋಂಡಾ ಆಕ್ಟಿವಾ 6ಜಿ, ಟಿವಿಎಸ್ ಝೆಸ್ಟ್, ಹೀರೋ ಹೀರೋ ಪ್ಲೆಶರ್ ಪ್ಲಸ್, ಹೋಂಡಾ ಡಿಯೋ, ಹಾಗೂ ಹೀರೋ ಜೂಮ್ ಸ್ಕೂಟರ್‌ಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಹೋಂಡಾ ಆಕ್ಟಿವಾ 6ಜಿ (Honda Activa 6G) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.79,624 ರಿಂದ ರೂ.84,624 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.79 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.84 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Top Five 110 CC Scooters Low Price Highest Mileage Honda Activa 6G TVS Scooty Zest to Hero Xoom

ಈ ಹೋಂಡಾ ಆಕ್ಟಿವಾ ಸ್ಕೂಟರ್ ಗರಿಷ್ಠ ಇಂಧನ ದಕ್ಷತೆ (Fuel Efficiency) ಹೊಂದಿದ್ದು, 59.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಮೆಟಾಲಿಕ್, ಪರ್ಲ್ ಸೈರನ್ ಬ್ಲೂ & ಪರ್ಲ್ ಪ್ರೆಶಿಯಸ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಕೀ-ಲೆಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗೆ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಕುರಿತಂತೆ ಹೇಳುವುದಾದರೆ, ಈ ಸ್ಕೂಟರ್ ರೂ.72,614 ರಿಂದ ರೂ.73,417 ದರವನ್ನು ಹೊಂದಿದೆ. ಇದು 109.7 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 7500 ಆರ್‌ಪಿಎಂನಲ್ಲಿ 7.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.84 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top Five 110 CC Scooters Low Price Highest Mileage Honda Activa 6G TVS Scooty Zest to Hero Xoom

ನೂತನ ಟಿವಿಎಸ್ ಸ್ಕೂಟಿ ಜೆಸ್ಟ್ ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ, ಮ್ಯಾಟ್ ಪರ್ಪಲ್ ಹಾಗೂ ಮ್ಯಾಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಇದು 103 ಕೆಜಿ ತೂಕವಿದ್ದು, 5-ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಪ್ಲೆಶರ್ ಪ್ಲಸ್ (Hero Pleasure Plus) ಬಗ್ಗೆ ಮಾತನಾಡುವುದರೆ, ಇದು ರೂ.72,163 ರಿಂದ ರೂ.83,918 ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 110.9 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Top Five 110 CC Scooters Low Price Highest Mileage Honda Activa 6G TVS Scooty Zest to Hero Xoom

ಹೋಂಡಾ ಡಿಯೋ (Honda Dio) ಕೂಡ ಪ್ರಮುಖ ಸ್ಕೂಟರ್ ಆಗಿದೆ. ರೂ.75,630 ರಿಂದ ರೂ.82,580 ದರವನ್ನು ಹೊಂದಿದೆ. 109.51 ಸಿಸಿ ಏರ್ ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8000 ಆರ್‌ಪಿಎಂನಲ್ಲಿ 7.85 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5250 ಆರ್‌ಪಿಎಂನಲ್ಲಿ 9.03 (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ ಜೂಮ್ (Hero Xoom) ಹೇಳುವುದಾದರೆ, ಈ ಸ್ಕೂಟರ್ ರೂ.75,761 ರಿಂದ ರೂ.85,400 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 110.9 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 7250 ಆರ್‌ಪಿಎಂನಲ್ಲಿ 8.15 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5750 ಆರ್‌ಪಿಎಂನಲ್ಲಿ 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, October 28, 2024, 12:22 [IST]
English summary
Top five 110 cc scooters low price highest mileage honda activa 6g tvs scooty zest to hero xoom
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+