ಕೆಟಿಎಂ ಡ್ಯೂಕ್ ಎದುರಾಳಿ ಟ್ರಯಂಫ್‌ನ ಈ ಬೈಕ್‌ಗಳಿಗೆ ಭಾರೀ ಡಿಸ್ಕೌಂಟ್ ವಿಸ್ತರಣೆ
ಟ್ರಯಂಫ್ ಸ್ಪೀಡ್ 400 (Triumph Speed 400) ಮತ್ತು ಟ್ರಯಂಫ್ ಸ್ಕ್ರ್ಯಾಂಬ್ಲರ್ 400 ಎಕ್ಸ್ (Triumph Scrambler 400X) ಮಾದರಿಗಳ ವಾರ್ಷಿಕೋತ್ಸವದ ಕೊಡುಗೆಯನ್ನು 2024ರ ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದೆ. ಈ ಕೊಡುಗೆಯ ಅಡಿಯಲ್ಲಿ, ಖರೀದಿದಾರರು ಈ ಎರಡೂ ಬೈಕ್‌ಗಳ ಎಕ್ಸ್ ಶೋ ರೂಂ ಬೆಲೆಯಲ್ಲಿ ರೂ. 10,000 ಗಳ ರಿಯಾಯಿತಿಯನ್ನು ಪಡೆಯಬಹುದು. ವಾರ್ಷಿಕೋತ್ಸವದ ಕೊಡುಗೆಯನ್ನು ಜುಲೈ 1 ರಂದು ಘೋಷಿಸಲಾಯಿತು. ಈ ಆಫರ್ ಜುಲೈ 30 ರವರೆಗೆ ಇದ್ದರೆ, ಈಗ ಅದನ್ನು ಒಂದು ತಿಂಗಳು ವಿಸ್ತರಿಸಲಾಗಿದೆ.
ಈ ಎರಡೂ ಟ್ರಯಂಫ್ ಬೈಕುಗಳು ಒಂದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದರೂ, ಅವು ವಿನ್ಯಾಸ ಮತ್ತು ವಿಶೇಷಂಣಗಳು ಭಿನ್ನವಾಗಿದೆ. ಮೊದಲಿಗೆ ಟ್ರಯಂಫ್ ಸ್ಪೀಡ್ 400 ಬೈಕಿನ ಬಗ್ಗೆ ಹೇಳುವುದಾದರೆ, ಈ ಬೈಕ್ ತನ್ನ 'ಟಿಯರ್-ಡ್ರಾಪ್' ಆಕಾರದ ಫ್ಯೂಯಲ್ ಟ್ಯಾಂಕ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿದೆ. ಇದರೊಂದಿಗೆ ರಿಯರ್-ವ್ಯೂ ಮಿರರ್‌ಗಳು ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್‌ಗಳಂತಹ ವೃತ್ತಾಕಾರದ ವಿನ್ಯಾಸದ ಅಂಶಗಳೊಂದಿಗೆ ಆಕರ್ಷಕವಾದ ನಿಯೋ-ರೆಟ್ರೊ ಥೀಮ್ ಹೊಂದಿದೆ.

ಇನ್ನು ಈ ಹೊಸ ಬೈಕ್ ಸಾಕಷ್ಟು ಟ್ರಯಂಫ್ ವಿನ್ಯಾಸದ ಅಂಶಗಳೊಂದಿಗೆ ಆಕಷಕವಾಗಿದೆ. ಈ ಹೊಸ ಟ್ರಯಂಫ್ ಸ್ಪೀಡ್ 400 ಬೈಕಿನ ಎಂಜಿನ್ ಬಗ್ಗೆ ಹೇಳುವುದಾದರೆ, 398.15cc, ಲಿಕ್ವಿಡ್-ಕೂಲ್ಡ್, 4-ವಾಲ್ವ್, DOHC, ಓವರ್‌ಸ್ಕ್ವೇರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,000rpm ನಲ್ಲಿ 39.5bhp ಮತ್ತು 6,500rpm ನಲ್ಲಿ 37.5Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಗೇರ್‌ಬಾಕ್ಸ್ ಅನ್ನು ಸಹ ಹೊಂದಿದೆ.
ಈ ಹೊಸ ಟ್ರಯಂಫ್ ಸ್ಪೀಡ್ 400 ಬೈಕಿನ ಸಸ್ಪೆಕ್ಷನ್ ಸಂಬಂಧಿಸಿದಂತೆ,ಬೋಲ್ಟ್-ಆನ್ ರಿಯರ್ ಸಬ್‌ಫ್ರೇಮ್ ಮತ್ತು ಟ್ವಿನ್-ಸೈಡೆಡ್ ಅಲ್ಯೂಮಿನಿಯಂ ಸ್ವಿಂಗರ್ಮ್‌ನೊಂದಿಗೆ ಫ್ರೇಮ್ ಅನ್ನು ಹೊಂದಿದೆ. ಈ ಬೈಕಿನ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43mm USD ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ಮೊನೊಶಾಕ್ ಅನ್ನು ಹೊಂದಿದೆ.

ಇನ್ನು ಟ್ರಯಂಫ್ ಸ್ಪೀಡ್ 400 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ABS ಸಹಾಯವನ್ನು ಸಹ ಹೊಂದಿದೆ. ಟ್ರಯಂಫ್ ಸ್ಪೀಡ್ 400 ಬೈಕಿನಲ್ಲಿ 17 ಇಂಚಿನ ಅಲಾಯ್ ವೀಲ್ಸ್ ಪಡೆದಿದೆ.
ಇನ್ನು ಟ್ರಯಂಫ್ ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಬಗ್ಗೆ ಹೇಳುವುದಾದರೆ, ಮ್ಯಾಟ್ ಕಾಫಿ ಗ್ರೀನ್, ಫ್ಯಾಂಟಮ್ ಬ್ಲ್ಯಾಕ್ ಮತ್ತು ಆರ್ನಿವಲ್ ರೆಡ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಬೈಕಿನಲ್ಲಿ 398cc, ಸಿಸಿ-ಸಿಲಿಂಡರ್ ಎಂಜಿನ್‌ನಿಂದ ಚಾಲಿತವಾಗಿದ್ದು, ಇದೇ ಎಂಜಿನ್ ಅನ್ನು ರೋಡ್‌ಸ್ಟರ್ ಬೈಕಿನಲ್ಲೂ ನೀಡಲಾಗಿತ್ತು.ಈ 398cc ಎಂಜಿನ್ 8,000 rpm ನಲ್ಲಿ 40 bhp ಮತ್ತು 6,500 rpm ನಲ್ಲಿ 37.5 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ ಮತ್ತು ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್‌ನೊಂದಿಗೆ ಪ್ರಯೋಜನಕಾರಿಯಾಗಿದೆ. ಈ ಟ್ರಯಂಫ್ ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕಿನಲ್ಲಿ ಸ್ಕ್ರ್ಯಾಂಬ್ಲರ್ ರೈಡ್-ಬೈ-ವೈರ್ ಥ್ರೊಟಲ್, ಟ್ರಾಕ್ಷನ್ ಕಂಟ್ರೋಲ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ-ಸಿ ಚಾರ್ಜಿಂಗ್ ಸಾಕೆಟ್, ಆಲ್-ಎಲ್‌ಇಡಿ ಲೈಟಿಂಗ್ ಸಿಸ್ಟಮ್ ಮತ್ತು ಸ್ಟೀರಿಂಗ್ ಲುಕ್ ಹೊಂದಿದೆ. ಇನ್ನು ಈ ಹೊಸ ಬೈಕ್ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.
ಟ್ರಯಂಫ್ ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಅನ್ನು ಸ್ಪೀಡ್ 400 ಬೈಕಿಗೆ ಹೋಲಿಸಿದರೆ, ಎತ್ತರದ ಸಸ್ಪೆಕ್ಷನ್ ಯುನಿಟ್ ಗಳನ್ನು ಹೊಂದಿದೆ. ಟ್ರಯಂಫ್ ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಟ್ರ್ಯಾವೆಲ್ ನೊಂದಿಗೆ 43 ಎಂಎಂ ಬಿಗ್-ಪಿಸ್ಟನ್ ಫ್ರಂಟ್ ಫೋರ್ಕ್ ಮತ್ತು ಅದೇ ಟ್ರ್ಯಾವೆಲ್ ನೊಂದಿಗೆ ಮೊನೊಶಾಕ್ ಯುನಿಟ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ 320mm ಫ್ರಂಟ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 300mm ಡಿಸ್ಕ್ ಯುನಿಟ್ ಅನ್ನು ಹೊಂದಿದೆ.


Click it and Unblock the Notifications








