ಪೆಟ್ರೋಲ್ ಹಾಕಿಸಿ ಬೇಸತ್ತ ಜನರು: ಟಿವಿಎಸ್, ಓಲಾ, ಎಥರ್ ಇ-ಸ್ಕೂಟರ್‌ಗಳಿಗಾಗಿ ಕ್ಯೂ.. ಮೊಬೈಲ್‌ನಂತೆ ಸೇಲ್!
ಪ್ರತಿಯೊಬ್ಬರಿಗೂ ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನ ವಾಹನಗಳು ತೀರಾ ಅಗತ್ಯವಾಗಿವೆ. ಅದರಲ್ಲೂ ಪುರುಷರು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರಿಗೂ ಸ್ಕೂಟರ್‌ಗಳು ಹೆಚ್ಚು ಸೂಕ್ತವಾಗಬಲ್ಲವು. ದೇಶದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರಿದ್ದು, ಹಲವರು ಎಲೆಕ್ಟ್ರಿಕ್ ಸ್ಕೂಟರ್‌ಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಗ್ರಾಹಕರ ಆಶೋತ್ತರಗಳನ್ನು ಪೂರೈಸಲು ಟಿವಿಎಸ್, ಓಲಾ, ಎಥರ್, ಹೀರೋ ಹಾಗೂ ಬಜಾಜ್ ಕಂಪನಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿವೆ. ಎಲ್ಲ ವಾಹನ ತಯಾರಕ ಸಂಸ್ಥೆಗಳು ಒಟ್ಟುಗೂಡಿ 2023ರಲ್ಲಿ ದಾಖಲೆಯ 8,60,365 ಯುನಿಟ್ ಎಲೆಕ್ಟ್ರಿಕ್ ಚಾಲಿತ ದ್ವಿಚಕ್ರ ವಾಹನಗಳನ್ನು ಮಾರಿವೆ. ಈ ವರ್ಷ ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಓಲಾ ಎಲೆಕ್ಟ್ರಿಕ್ (36,716 ಯುನಿಟ್): ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಓಲಾ ಎಲೆಕ್ಟ್ರಿಕ್ (Ola Electric) ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಕಳೆದ ತಿಂಗಳು (ಜೂನ್, 2024) 36,716 ಯುನಿಟ್ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸಿದೆ. 2023ರ ಜೂನ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 107% ಪ್ರಗತಿ ಕಂಡಿದೆ.

ಓಲಾ ಕಂಪನಿಯು ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಎಂಟ್ರಿ ಲೆವೆಲ್ ಮಾಡೆಲ್ 'ಎಸ್1 ಎಕ್ಸ್ ಪ್ಲಸ್' ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗಲಿದ್ದು, ರೂ.74,999 ದಿಂದ ರೂ.ರೂ.99,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಮಿಡ್ ಲೆವೆಲ್ ಮಾಡೆಲ್ 'ಓಲಾ ಎಸ್1 ಏರ್' ರೂ.1,06,499 ಹಾಗೂ ಟಾಪ್ ಎಂಡ್ ಮಾಡೆಲ್ ಓಲಾ ಎಸ್1 ಪ್ರೊ ರೂ.1,32,499 (ಎಕ್ಸ್ ಶೋರೂಂ) ದರವನ್ನು ಪಡೆದಿದೆ.
ಟಿವಿಎಸ್ (13,897 ಯುನಿಟ್): ಎರಡನೇ ಸ್ಥಾನದಲ್ಲಿ ಟಿವಿಎಸ್ ಮೋಟಾರ್ ಇದ್ದು, ಜೂನ್ (2024)ನಲ್ಲಿ 13,897 ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಮೇನಲ್ಲಿ ಮಾರಿದ 11,844 ಯುನಿಟ್‌ಗೆ ಹೋಲಿಸಿದರೆ ಶೇಕಡ 51% ಬೆಳವಣಿಗೆ ಸಾಧಿಸಿದೆ. ನೂತನ ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್, ಐಕ್ಯೂಬ್, ಐಕ್ಯೂಬ್ ಎಸ್ ಮತ್ತು ಐಕ್ಯೂಬ್ ಎಸ್‌ಟಿ ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳೊಂದಿಗೂ ಲಭ್ಯವಿದೆ.

ಈ ಐಕ್ಯೂಬ್ ಇ-ಸ್ಕೂಟರ್ ರೂ.94,999 ದಿಂದ ರೂ.ರೂ.185,373 ಎಕ್ಸ್ ಶೋರೂಂ ದರವನ್ನು ಪಡೆದಿದೆ. 2.2 ಕೆಡಬ್ಲ್ಯೂಹೆಚ್, 3.4 ಕೆಡಬ್ಲ್ಯೂಹೆಚ್ ಹಾಗೂ 5.1 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 75 ಕಿ.ಮೀ ರಿಂದ 150 ಕಿ.ಮೀ ಓಡುತ್ತದೆ. 7-ಇಂಚಿನ ಫುಲ್-ಕಲರ್ ಟಿಎಫ್‌ಟಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬಜಾಜ್ (8,985 ಯುನಿಟ್): ಮೂರನೇ ಸ್ಥಾನವನ್ನು ಬಜಾಜ್ ಆಟೋ ಅಲಂಕರಿಸಿದ್ದು, ಜೂನ್‌ನಲ್ಲಿ 8,985 ಯುನಿಟ್ 'ಚೇತಕ್' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ದೇಶೀಯವಾಗಿ ದೊರೆಯುವ ಹೊಚ್ಚ ಹೊಸ ಬಜಾಜ್ (Bajaj Chetak) ಇ-ಸ್ಕೂಟರ್ ರೂ.95,998 ದಿಂದ ರೂ.1.56 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 126 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಎಥರ್ ಎನರ್ಜಿ (6,097 ಯುನಿಟ್): ಬೆಂಗಳೂರಿನ ಎಥರ್ ಎನರ್ಜಿ (Ather Energy) ಕೂಡ ಜೂನ್ ತಿಂಗಳು 6,097 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಶೇಕಡ 7.66 ಪಾಲನ್ನು ತನ್ನದಾಗಿಸಿಕೊಂಡಿದೆ. ಪ್ರಸ್ತುತ ಎಥರ್ 450ಎಕ್ಸ್, ಎಥರ್ 450ಎಸ್ ಹಾಗೂ ಎಥರ್ ರಿಜ್ಟಾ ಇ-ಸ್ಕೂಟರ್‌ಗಳು ಖರೀದಿಗೆ ಲಭ್ಯವಿವೆ.
ಹೀರೋ (3,068 ಯುನಿಟ್): ದೇಶದ ನಂಬರ್ 1 ದ್ವಿಚಕ್ರ ವಾಹನ ತಯಾರಕ ಕಂಪನಿ 'ಹೀರೋ ಮೋಟೊಕಾರ್ಪ್' ಜೂನ್‌ನಲ್ಲಿ 3,068 ಯುನಿಟ್ 'ವಿಡಾ' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಿದೆ. ನೂತನ ಹೀರೋ ವಿಡಾ ವಿ1 (Hero Vida V1) ಎಲೆಕ್ಟ್ರಿಕ್ ಸ್ಕೂಟರ್ 2 ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದ್ದು, ರೂ.1.20 ಲಕ್ಷದಿಂದ ರೂ.1.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications