TVS iQube: ಸಿಹಿಸುದ್ದಿ.. ಜನಪ್ರಿಯ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗೆ ಭಾರಿ ರಿಯಾಯಿತಿ!

ತಮಿಳುನಾಡು ಮೂಲದ ಟಿವಿಎಸ್ ಮೋಟಾರ್ (TVS Motor), ದೇಶೀಯ ಮಾರುಕಟ್ಟೆಯಲ್ಲಿ ಐಕ್ಯೂಬ್ (iQube) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಕಳೆದ ತಿಂಗಳು (ಸೆಪ್ಟೆಂಬರ್ 2024) 17,865 ಯುನಿಟ್ ಐಕ್ಯೂಬ್‌ಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 15,523 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 15% ಪ್ರಗತಿ ಸಾಧಿಸಿದೆ. ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹೊಸ ವಾಹನಗಳನ್ನು ಖರೀದಿ ಮಾಡುತ್ತಾರೆ. ಈ ಹಿನ್ನೆಲೆ, ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿ ಮೇಲೂ ಭಾರಿ ರಿಯಾಯಿತಿ ಲಭ್ಯವಿದೆ.

2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿರುವ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ (TVS iQube Electric Scooter) ರೂ.17,300 ಕ್ಯಾಶ್‌ಬ್ಯಾಕ್ ಆಫರ್ ಹೊಂದಿದೆ. ಕೆಲವೊಂದು ಬ್ಯಾಂಕ್‌ಗಳ ಡೆಬಿಟ್/ಕ್ರೆಡಿಟ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ರೂ.7,700 ಕ್ಯಾಶ್‌ಬ್ಯಾಕ್ ಕೂಡ ಸಿಗುತ್ತದೆ.

TVS iQube Electric Scooter Get Huge Discount

3.4 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿರುವ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌, ರೂ.20,000 ಕ್ಯಾಶ್‌ಬ್ಯಾಕ್ ಆಫರ್ ಪಡೆದಿದೆ. ವಿವಿಧ ಬ್ಯಾಂಕ್‌ಗಳ ಡೆಬಿಟ್/ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ರೂ.10,000 ವಿಶೇಷ ಕ್ಯಾಶ್‌ಬ್ಯಾಕ್ ದೊರೆಯುತ್ತದೆ. ಅಲ್ಲದೆ, ಐಕ್ಯೂಬ್ ಎಸ್ (iQube S) ಎಲೆಕ್ಟ್ರಿಕ್ ಸ್ಕೂಟರ್‌ ಉಚಿತ ವಾರಂಟಿಯನ್ನು ಒಳಗೊಂಡಿದೆ.

ನೂತನ 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಟಿವಿಎಸ್ ಐಕ್ಯೂಬ್ ವಿಶೇಷತೆ ಕುರಿತಂತೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.07 ಲಕ್ಷ (ಎಕ್ಸ್ ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ಕಿಲೋಮೀಟರ್ ಓಡುತ್ತದೆ. ಜೊತೆಗೆ 75 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಇದರ ಬ್ಯಾಟರಿಯು ಕೇವಲ 2 ಗಂಟೆಗಳಲ್ಲಿ 0-80% ಚಾರ್ಜ್ ಆಗುತ್ತದೆ.

TVS iQube Electric Scooter Get Huge Discount

ಈ ಟಿವಿಎಸ್ ಐಕ್ಯೂಬ್ (2.2 ಕೆಡಬ್ಲ್ಯೂಹೆಚ್) ಇ-ಸ್ಕೂಟರ್, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಿಎಫ್‌ಟಿ ಸ್ಕ್ರೀನ್ (5-ಇಂಚು), ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ವೆಹಿಕಲ್ ಕ್ರ್ಯಾಶ್ - ಟೌ ಅಲರ್ಟ್ ಹಾಗೂ 30 ಲೀಟರ್‌ನ ಸೀಟ್ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ವಾಲ್ನಟ್ ಬ್ರೌನ್ ಮತ್ತು ಪರ್ಲ್ ವೈಟ್ ಬಣ್ಣಗಳೊಂದಿಗೂ (ಕಲರ್) ಲಭ್ಯವಿದೆ.

ಹೊಸ 3.4 ಕೆಡಬ್ಲ್ಯೂಹೆಚ್ ಬ್ಯಾಟರಿ ಹೊಂದಿರುವ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್, ರೂ.1.37 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ. ಭರ್ತಿ ಚಾರ್ಜ್‌ನಲ್ಲಿ 75 ರಿಂದ 100 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ. 78 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದ್ದು, 3 ಕೆಡಬ್ಲ್ಯೂ ಮೋಟಾರ್‌ನ್ನು ಹೊಂದಿದೆ.

ಟಿವಿಎಸ್ ಐಕ್ಯೂಬ್ ಎಸ್ ಬಗ್ಗೆ ಮಾತನಾಡುವುದಾದರೆ, ಇದು ರೂ.1.46 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 3.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 75-100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಎಲ್ಲಿಯವರೆಗೆ ಲಭ್ಯವಿರಲಿದೆ ಎಂಬಿತ್ಯಾದಿ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, October 3, 2024, 17:55 [IST]
English summary
Tvs iqube electric scooter get huge discount
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+