iQube: ಎದುರಾಳಿಗಳಿಗೆ ನಡುಕ.. ಟಿವಿಎಸ್ ಐಕ್ಯೂಬ್ ಹೊಸ ವೇರಿಯೆಂಟ್‌ಗಳು ಬಿಡುಗಡೆ.. ರೂ.94,999 ಬೆಲೆ

ಸಾಮಾನ್ಯ ವರ್ಗದ ಜನರಿಗಾಗಿ ಬಜೆಟ್ ಬೆಲೆಯ ದ್ವಿಚಕ್ರ ವಾಹನಗಳನ್ನು ಪರಿಚಯಿಸುವುದಕ್ಕೆ ಟಿವಿಎಸ್ ಮೋಟಾರ್ (TVS Motor) ಹೆಸರುವಾಸಿಯಾಗಿದೆ. ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿ ನೀಡಲು ಜನಪ್ರಿಯ ಐಕ್ಯೂಬ್ (iQube) ಎಲೆಕ್ಟ್ರಿಕ್ ಸ್ಕೂಟರ್‌ನ ಮೂರು ಹೊಸ ರೂಪಾಂತರ (ವೇರಿಯೆಂಟ್)ಗಳನ್ನು ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.

ನೂತನ ಮಾದರಿಗಳನ್ನು 3.04 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಸಾಮಾನ್ಯ ಐಕ್ಯೂಬ್ ಹಾಗೂ ಐಕ್ಯೂಬ್ ಎಸ್ ಆವೃತ್ತಿಗಳೊಂದಿಗೆ ಮಾರಾಟ ಮಾಡಲಾಗುತ್ತದೆ ಎಂದು ಕಂಪನಿ ಹೇಳಿದೆ. ದೇಶಾದ್ಯಂತ 434 ನಗರಗಳಲ್ಲಿ ಹೊಚ್ಚ ಹೊಸ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಗ್ರಾಹಕರ ಖರೀದಿಗೆ ಲಭ್ಯವಿವೆ.

Tvs Iqube Electric Scooter New 3 Variants Launched In India Rs 94 999 Price Best Features

ಕೈಗೆಟುಕುವ ಬೆಲೆಗೆ ಲಾಂಚ್ ಮಾಡಿರುವ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ನ ಎಂಟ್ರಿ ಲೆವೆಲ್ ಮಾಡೆಲ್ (ಆರಂಭಿಕ ಆವೃತ್ತಿ), 2.2 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದೆ. ರೂ.94,999 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 75 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಜೊತೆಗೆ 75 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ) ಅನ್ನು ಹೊಂದಿದೆ. ವಾಲ್ನಟ್ ಬ್ರೌನ್ & ಪರ್ಲ್ ವೈಟ್ ಬಣ್ಣಗಳೊಂದಿಗೆ ಸಿಗುತ್ತದೆ.

ಈ 2.2 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿರುವ ಐಕ್ಯೂಬ್ ರೂಪಾಂತರವು ಬೆಲೆಗೆ ತಕ್ಕಂತೆ ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 5-ಇಂಚಿನ ಟಿಎಫ್‌ಟಿ ಸ್ಕ್ರೀನ್, ವೆಹಿಕಲ್ ಕ್ರ್ಯಾಶ್ & ಟೌ ಅಲರ್ಟ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯ (ಫೀಚರ್ಸ್)ಗಳನ್ನು ಹೊಂದಿದೆ. 30 ಲೀಟರ್ ಸಾಮರ್ಥ್ಯದ ಸೀಟ್ ಬೂಟ್ ಸ್ಪೇಸ್ ಅನ್ನು ಪಡೆದಿದ್ದು, ಇದರ ಬ್ಯಾಟರಿಯು ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ 2 ಗಂಟೆಯಲ್ಲಿ ಶೇಕಡ 0-80% ಚಾರ್ಜ್ ಆಗುತ್ತದೆ.

Tvs Iqube Electric Scooter New 3 Variants Launched In India Rs 94 999 Price Best Features

ಹೊಸ ಟಿವಿಎಸ್ ಐಕ್ಯೂಬ್ ಎಸ್‌ಟಿ (TVS iQube ST) ಎಲೆಕ್ಟ್ರಿಕ್ ಸ್ಕೂಟರ್ ಕೂಡ ಎರಡು ರೂಪಾಂತರಗಳ ಆಯ್ಕೆಯಲ್ಲಿ ಬಿಡುಗಡೆಗೊಂಡಿದೆ. ಇದರ 3.4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ರೂ.155,555 ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೂರ್ತಿ ಚಾರ್ಜ್ ನಲ್ಲಿ 100 ಕಿಲೋಮೀಟರ್ ಓಡುತ್ತದೆ. 78 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಈ ಐಕ್ಯೂಬ್ ಎಸ್‌ಟಿ (3.4 ಕೆಡಬ್ಲ್ಯೂಹೆಚ್) ಆವೃತ್ತಿಯು ಕೋರಲ್ ಸ್ಯಾಂಡ್ ಸ್ಯಾಟಿನ್, ಟೈಟಾನಿಯಂ ಗ್ರೇ ಮ್ಯಾಟ್, ಸ್ಟಾರ್‌ಲೈಟ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗಲಿದ್ದು, 7-ಇಂಚಿನ ಫುಲ್ ಕಲರ್ ಟಿಎಫ್‌ಟಿ ಸ್ಕ್ರೀನ್, 118+ ಕನೆಕ್ಟ್ದ್ ಫೀಚರ್ಸ್, ವಾಯ್ಸ್ ಅಸಿಸ್ಟ್ & ಅಲೆಕ್ಸಾ ಸ್ಕಿಲ್‌ಸೆಟ್‌, ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Tvs Iqube Electric Scooter New 3 Variants Launched In India Rs 94 999 Price Best Features

ಮತ್ತೊಂದು ಟಿವಿಎಸ್ ಐಕ್ಯೂಬ್ ಎಸ್‌ಟಿ ಮಾದರಿಯು 5.1 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ರೂ.185,373 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಭರ್ತಿ ಚಾರ್ಜ್ ನಲ್ಲಿ 150 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 950ಡಬ್ಲ್ಯೂ ಚಾರ್ಜರ್ ಅನ್ನು ಪಡೆದಿದ್ದು, ಇದರ ಬ್ಯಾಟರಿಯು 4 ಗಂಟೆ 18 ನಿಮಿಷಗಳಲ್ಲಿ ಶೇಕಡ 0-80% ಚಾರ್ಜ್ ಆಗಿಬಿಡುತ್ತದೆ.

ಈ ಐಕ್ಯೂಬ್ ಎಸ್‌ಟಿ (5.1 ಕೆಡಬ್ಲ್ಯೂಹೆಚ್) ಆವೃತ್ತಿಯು 7-ಇಂಚಿನ ಫುಲ್ ಕಲರ್ ಟಿಎಫ್‌ಟಿ ಸ್ಕ್ರೀನ್, 118+ ಕನೆಕ್ಟ್ದ್ ಫೀಚರ್ಸ್, ವಾಯ್ಸ್ ಅಸಿಸ್ಟ್ & ಅಲೆಕ್ಸಾ ಸ್ಕಿಲ್‌ಸೆಟ್‌, ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 32-ಲೀಟರ್ ಸಾಮರ್ಥ್ಯದ ಸೀಟ್ ಬೂಟ್ ಸ್ಪೇಸ್ ಅನ್ನು ಒಳಗೊಂಡಿದ್ದು, ಟೈಟಾನಿಯಂ ಗ್ರೇ ಮ್ಯಾಟ್, ಸ್ಟಾರ್‌ಲೈಟ್ ಬ್ಲೂ ಬಣ್ಣಗಳೊಂದಿಗೂ ದೊರೆಯುತ್ತದೆ.

ಪ್ರಸುತ್ತ ಖರೀದಿಗೆ ಸಿಗುವ 3.04 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಪಡೆದಿರುವ ಸಾಮಾನ್ಯ ಐಕ್ಯೂಬ್ ಹಾಗೂ ಐಕ್ಯೂಬ್ ಎಸ್ ರೂಪಾಂತರಗಳು ರೂ.1.37 ಲಕ್ಷದಿಂದ ರೂ.1.46 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಸಂಪೂರ್ಣ ಚಾರ್ಜ್ ನಲ್ಲಿ 100 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡಬಲ್ಲವು ಇವುಗಳ ಬ್ಯಾಟರಿಯು 4 ಗಂಟೆ 30 ನಿಮಿಷದಲ್ಲಿ 0-80% ಚಾರ್ಜ್ ಆಗುತ್ತದೆ.

Article Published On: Monday, May 13, 2024, 18:01 [IST]
English summary
Tvs iqube electric scooter new 3 variants launched in india rs 94999 price best features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+