TVS: ಹೋಂಡಾ ಆಕ್ಟಿವಾ ಪ್ರತಿಸ್ಪರ್ಧಿ.. ಹೊಸ ಟಿವಿಎಸ್ ಜುಪಿಟರ್ 110 ಬಿಡುಗಡೆಗೆ ದಿನಾಂಕ ನಿಗದಿ, ರೂ.77,000 ಬೆಲೆ?

ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಕೈಗೆಟುಕುವ ಬೆಲೆಯಲ್ಲಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸದ್ಯ, ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರನ್ನು ಆಕರ್ಷಿಸಲು ಜನಪ್ರಿಯ ಜುಪಿಟರ್ 110 (Jupiter 110) ಸ್ಕೂಟರ್‌ನ ನವೀಕರಿಸಿದ ಮಾದರಿಯನ್ನು (ಮಾಡೆಲ್) ಬಿಡುಗಡೆಗೊಳಿಸಲು ದಿನಾಂಕ ನಿಗದಿಪಡಿಸಿದೆ ಎಂದು ತಿಳಿದುಬಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬಹಳಷ್ಟು ಹೊಸತನಗಳಿಗೆ ಸಾಕ್ಷಿಯಾಗಲಿರುವ ಮೇಲ್ದರ್ಜೆಗೇರಿಸಿದ ಟಿವಿಎಸ್ ಜುಪಿಟರ್ 110 (TVS Jupiter 110), ದೇಶೀಯ ಮಾರುಕಟ್ಟೆಯಲ್ಲಿ ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ವಿನ್ಯಾಸದ (Design) ಹೊರತಾಗಿ, ನೂತನ ಸ್ಕೂಟರ್‌ ಎಂಜಿನ್‌ನಲ್ಲಿ ಯಾವುದೇ ಮಾರ್ಪಾಡುಗಳು ಇರುವುದಿಲ್ಲ ಎನ್ನಲಾಗಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್‌ ಸಸ್ಪೆನ್ಷನ್ ಸೆಟಪ್ ಹೊಂದಿರುವ ನಿರೀಕ್ಷೆಯಿದ್ದು, ಸುರಕ್ಷತೆಗಾಗಿ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

TVS Jupiter 110 Launch On August 22 Rs 77 000 Expected Price Details

ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110, ಎಲ್ಇಡಿ ಲೈಟ್‌ಗಳು, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಡಿಜಿಟಲ್ ಡಿಸ್ಪ್ಲೇ, ನ್ಯಾವಿಗೇಶನ್, ಮೊಬೈಲ್ ಫೋನ್ ಚಾರ್ಜರ್, ಎರಡು ಹೆಲ್ಮೆಟ್‌ಗಳನ್ನು ಇಡಲು ಸಾಧ್ಯವಾಗುವಂತೆ ಬೂಟ್ ಸ್ಪೇಸ್ ಹಾಗೂ ಫ್ಲೋರ್‌ಬೋರ್ಡ್‌ನಲ್ಲಿ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ. ರೂ.77,000 (ಎಕ್ಸ್ ಶೋರೂಂ) ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಸ್ತುತ, ದೇಶೀಯವಾಗಿ ಟಿವಿಎಸ್ ಜುಪಿಟರ್ ಸ್ಕೂಟರ್ 110 ಮತ್ತು 125 ಸಿಸಿ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಮೊದಲಿಗೆ ಜುಪಿಟರ್ 110 ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.77,431 ದಿಂದ ರೂ.93,026 ಎಕ್ಸ್ ಶೋರೂಂ ದರವನ್ನು ಹೊಂದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.88 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 8.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 125 ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.98,709 ದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.2 ಪಿಎಸ್ ಗರಿಷ್ಠ ಶಕ್ತಿ ಹಾಗೂ 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಜುಪಿಟರ್ 125 ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಹೆಲ್ಮೆಟ್ ಹಾಗೂ ಲ್ಯಾಪ್‌ಟಾಪ್‌ನಂತಹ ವಸ್ತುಗಳನ್ನು ಸುಲಭವಾಗಿ ಸಾಗಿಸಲು ಆಸನದ ಕೆಳಗೆ (ಸೀಟ್ ಅಂಡರ್) 33 ಲೀಟರ್ ಸಾಮರ್ಥ್ಯದ ಸ್ಟೋರೇಜ್ ಒಳಗೊಂಡಿದೆ.

ಹೊಸ ಟಿವಿಎಸ್ ಜುಪಿಟರ್ 125 ಸ್ಕೂಟರ್ ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಪಡೆದಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ 90/90-12 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಈ ಸ್ಕೂಟರ್ 108 ಕೆಜಿ ತೂಕವಿದ್ದು, 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, August 14, 2024, 15:20 [IST]
English summary
Tvs jupiter 110 launch on august 22 rs 77000 expected price details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+